Homeರಾಷ್ಟ್ರೀಯಜೈಲಿನಲ್ಲೆ ಮಸಾಜ್ ಮಾಡಿಸಿಕೊಂಡ ದೆಹಲಿ ಎಎಪಿ ಸಚಿವ: ವಿಡಿಯೊ ವೈರಲ್

ಜೈಲಿನಲ್ಲೆ ಮಸಾಜ್ ಮಾಡಿಸಿಕೊಂಡ ದೆಹಲಿ ಎಎಪಿ ಸಚಿವ: ವಿಡಿಯೊ ವೈರಲ್

- Advertisement -
- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದ ಕಾರಣಕ್ಕೆ ಮೇ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದ ಆಮ್ ಆದ್ಮಿ ಪಕ್ಷದ ಸಚಿವ ಸತ್ಯೇಂದ್ರ ಜೈನ್ ಅವರು ದೆಹಲಿಯ ತಿಹಾರ್ ಜೈಲಿನಲ್ಲಿ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋವನ್ನು ಹಲವು ಬಿಜೆಪಿ ನಾಯಕರು ಶನಿವಾರ ಹಂಚಿಕೊಂಡಿದ್ದಾರೆ.

ಜೈಲಿನಲ್ಲಿರುವ ಸಚಿವರಿಗೆ ವಿಐಪಿ ಸೌಲಭ್ಯ ನೀಡಿದ ಆರೋಪದಲ್ಲಿ ತಿಹಾರ್ ಜೈಲಿನ ಸೂಪರಿಂಟೆಂಡೆಂಟ್ ಅಜಿತ್ ಕುಮಾರ್ ಅವರನ್ನು ಅಮಾನತುಗೊಳಿಸಿದ ಕೆಲವೇ ದಿನಗಳಲ್ಲಿ ವೀಡಿಯೊ ಹೊರಬಿದ್ದಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿರುವ ಜೈಲ್‌ ನಂಬರ್ 7 ರ ಸೂಪರಿಂಟೆಂಡೆಂಟ್ ಮಾಜಿ ಸಚಿವರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸಿದ್ದಾರೆ ಎಂದು ಜೈಲಿನಲ್ಲಿರುವ ಸುಕೇಶ್ ಚಂದ್ರಶೇಖರ್ ಆರೋಪಿಸಿದ್ದರು. ಹೀಗಾಗಿ ಇದರ ನಂತರ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ರಚಿಸಿದ್ದ ತನಿಖಾ ಸಮಿತಿಯ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ನೇಪಾಳದಲ್ಲಿ ಭೂಕಂಪ: ಆರು ಮಂದಿ ಮೃತ | ದೆಹಲಿಯಲ್ಲೂ ಕಂಪನದ ಅನುಭವ!

ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಜೈಲಿನಲ್ಲಿದ್ದಾಗ ಗಾಯಗೊಂಡಿದ್ದರು, ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಂತ್ಯೇಂದ್ರ ಜೈನ್ ವಿಐಪಿ ಸೌಲಭ್ಯ ಪಡೆಯುವ ಆರೋಪಗಳನ್ನು ಎಎಪಿ ಈ ಹಿಂದೆ ತಳ್ಳಿಹಾಕಿತ್ತು, ಅವುಗಳನ್ನು ಅಸಂಬದ್ಧ ಮತ್ತು ಆಧಾರರಹಿತ ಎಂದು ಕರೆದಿತ್ತು.

ಇಂದು ಬಿಡುಗಡೆಯಾದ ವೀಡಿಯೋದಲ್ಲಿ, ಸತ್ಯೇಂದರ್ ಜೈನ್ ಅವರು ತಿಹಾರ್ ಜೈಲಿನ ತನ್ನ ಸೆಲ್ ನಲ್ಲಿ ಕಾಲು, ಬೆನ್ನು ಮತ್ತು ತಲೆಗೆ ಮಸಾಜ್ ಮಾಡಿಕೊಳ್ಳುತ್ತಿರುವುದು ಕಾಣುತ್ತದೆ.

ಇದನ್ನೂ ಓದಿ: ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಸಮಾನವಾಗಿದೆ: ದೆಹಲಿ ಹೈಕೋರ್ಟ್‌ಗೆ ಕೇಂದ್ರ

“ಜೈಲಿನಲ್ಲಿ ವಿವಿಐಪಿ ಸೌಲಭ್ಯ! ಕೇಜ್ರಿವಾಲ್ ಇಂತಹ ಮಂತ್ರಿಯನ್ನು ಸಮರ್ಥಿಸಬಹುದೇ? ಅವರನ್ನು ವಜಾ ಮಾಡಬೇಕಲ್ಲವೇ? ಇದು ಎಎಪಿಯ ನಿಜವಾದ ಮುಖವನ್ನು ತೋರಿಸುತ್ತದೆ!” ಎಂದು ಬಿಜೆಪಿಯ ಶೆಹಜಾದ್ ಜೈ ಹಿಂದ್ ಅವರು ಟ್ವೀಟ್‌ನಲ್ಲಿ ಈ ವೀಡಿಯೊಗಳಲ್ಲಿ ಒಂದನ್ನು ಹಂಚಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್ ಭಾಟಿಯಾ, “ಆಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಭ್ರಷ್ಟಾಚಾರವನ್ನು ಎದುರಿಸಲು ಮತ್ತು ವಿವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸಲು ನೀವು ಪಕ್ಷವನ್ನು ರಚಿಸಿದ್ದೀರಿ. ಆದರೆ ಇಲ್ಲಿ ಒಬ್ಬ ಭ್ರಷ್ಟ ವ್ಯಕ್ತಿ ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಮಿತ್ ಶಾರನ್ನು ಬಂಧಿಸಿ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ ಆಗ್ರಹ

ಸಂತ್ಯೇಂದ್ರ ಜೈನ್‌ ಜೈಲಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದಾರೆ ಎಂದು ಕಳೆದ ತಿಂಗಳು ಜಾರಿ ನಿರ್ದೇಶನಾಲಯ ಆರೋಪಿಸಿತ್ತು. ತನಿಖಾ ಸಂಸ್ಥೆಯು ದೆಹಲಿ ನ್ಯಾಯಾಲಯಕ್ಕೆ ಸಿಸಿಟಿವಿ ದೃಶ್ಯಾವಳಿಯನ್ನೂ ಸಲ್ಲಿಸಿತ್ತು. ಜೈಲು ಸಚಿವರೂ ಆಗಿರುವ ಸಂತ್ಯೇಂದ್ರ ಜೈನ್ ಅವರು ತಮ್ಮ ಸ್ಥಾನವನ್ನು ದುರುಪಯೋಗ ಮಾಡಿದ್ದಾರೆ ಎಂದು ಅದು ಆರೋಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...