Homeಮುಖಪುಟದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

ದೆಹಲಿ ವಿಮಾನ ನಿಲ್ದಾಣದಲ್ಲಿ ₹40 ಕೋಟಿ ಮೌಲ್ಯದ ಕೊಕೇನ್ ಹೊಟ್ಟೆಯೊಳಗಿಟ್ಟು ಕಳ್ಳಸಾಗಣೆ!

- Advertisement -
- Advertisement -

ಇಂದಿರಾ ಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಕಳ್ಳಸಾಗಣೆ ಮಾಡಿದ್ದ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಭಾನುವಾರ ತಿಳಿಸಿದೆ. ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದ ಇಬ್ಬರು ಬ್ರೆಜಿಲ್ ಮಹಿಳೆಯರು ಮತ್ತು ಕೀನ್ಯಾದ ವ್ಯಕ್ತಿಯೊಬ್ಬರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಲಾಗಿದೆ ಎಂದು ಅದು ಹೇಳಿದೆ. ದೆಹಲಿ ವಿಮಾನ

ಮೊದಲ ಪ್ರಕರಣದಲ್ಲಿ, ಜನವರಿ 28 ರಂದು ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದ 26 ವರ್ಷದ ಬ್ರೆಜಿಲ್‌ನ ಮಹಿಳಾ ಪ್ರಯಾಣಿಕರೊಬ್ಬನ್ನು ತಡೆಹಿಡಿಯಲಾಯಿತು. ವಿಚಾರಣೆಯ ಸಮಯದಲ್ಲಿ, ಅವರು ಮಾದಕ ದ್ರವ್ಯಗಳು ಅಥವಾ ಸೈಕೋಟ್ರೋಪಿಕ್ ವಸ್ತುಗಳನ್ನು ಹೊಂದಿರುವ ಕ್ಯಾಪ್ಸುಲ್‌ಗಳು ಸೇವಿಸಿರುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದರು ಎಂದು ಕಸ್ಟಮ್ಸ್ ಇಲಾಖೆ ಎಕ್ಸ್‌ನಲ್ಲಿ ತಿಳಿಸಿದೆ. ದೆಹಲಿ ವಿಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ನಂತರ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಮಹಿಳೆಯ ದೇಹದಲ್ಲಿ ಇದ್ದ 98 ಕ್ಯಾಪ್ಸುಲ್‌ಗಳನ್ನು ಹೊರತೆಗೆದಿದ್ದು, ಅದರಲ್ಲಿ 866 ಗ್ರಾಂ ಕೊಕೇನ್ ಪತ್ತೆಯಾಗಿದೆ. ಇದರ ಮೌಲ್ಯ ರೂ. 12.99 ಕೋಟಿ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಹೇಳಿದೆ. ಇದರ ನಂತರ ಅವರನ್ನು ಬಂಧಿಸಲಾಗಿದೆ ಎಂದು ಅದು ಹೇಳಿದೆ.

ಕಸ್ಟಮ್ಸ್ ಅಧಿಕಾರಿಗಳು ಜನವರಿ 24 ರಂದು ಬ್ರೆಜಿಲ್‌ನಿಂದ ಬಂದ ಮತ್ತೊಬ್ಬ ಮಹಿಳಾ ಪ್ರಯಾಣಿಕರೊಬ್ಬರನ್ನು ತಡೆಹಿಡಿದಿದ್ದರು. ಅವರು ಕೂಡಾ ಸಾವೊ ಪಾಲೊದಿಂದ ಪ್ಯಾರಿಸ್ ಮೂಲಕ ಬಂದಿದ್ದರು. “ವಿಚಾರಣೆಯ ವೇಳೆ ಮಹಿಳೆಯು ಮಾದಕವಸ್ತು ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದರು. ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರ ಹೊಟ್ಟೆಯಿಂದ 100 ಅಂಡಾಕಾರದ ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ. ಇವುಗಳನ್ನು ಪರಿಶೀಲಿಸಿದಾದ ಅವುಗಳಲ್ಲಿ ಕೊಕೇನ್ ಎಂದು ಶಂಕಿಸಲಾದ ಬಿಳಿ ಪುಡಿ ಇತ್ತು” ಎಂದು ಕಸ್ಟಮ್ಸ್ ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದೆ.

802 ಗ್ರಾಂ ತೂಕದ ವಶಪಡಿಸಿಕೊಂಡ ಮಾದಕವಸ್ತುಗಳ ಅಂದಾಜು ಮೌಲ್ಯ 12.03 ಕೋಟಿ ರೂ. ಎಂದು ಅದು ಹೇಳಿದೆ. “ಆರಂಭಿಕ ಪರೀಕ್ಷೆಗಳು ಹೆಚ್ಚಿನ ಶುದ್ಧತೆಯ ಕೊಕೇನ್ ಇರುವಿಕೆಯನ್ನು ದೃಢಪಡಿಸಿವೆ. ಇದು ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿರುವ ಅತ್ಯಾಧುನಿಕ ಕಳ್ಳಸಾಗಣೆ ಜಾಲವನ್ನು ಸೂಚಿಸುತ್ತದೆ” ಎಂದು ಕಸ್ಟಮ್ಸ್ ತಿಳಿಸಿದೆ.

ಜನವರಿ 24 ರಂದು ಅಡಿಸ್ ಅಬಾಬಾದಿಂದ ಬಂದಿದ್ದ ಕೀನ್ಯಾದ ವ್ಯಕ್ತಿಯೊಬ್ಬನನ್ನು ತಡೆಹಿಡಿಯಲಾಯಿತು. ವಿಚಾರಣೆ ಸಮಯದಲ್ಲಿ ತಾನು ಕೊಕೇನ್ ತುಂಬಿದ ಕ್ಯಾಪ್ಸುಲ್‌ಗಳನ್ನು ಸೇವಿಸಿದ್ದಾಗಿ ಒಪ್ಪಿಕೊಂಡಿದ್ದನು. ಈ ವೇಳೆ ಅವರನ್ನು ಕೂಡಾ ಸಫ್ದರ್ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಅವರ ಹೊಟ್ಟೆಯಲ್ಲಿದ್ದ 14.94 ಕೋಟಿ ರೂ. ಮೌಲ್ಯದ 996 ಗ್ರಾಂ ಕೊಕೇನ್ ತುಂಬಿದ 67 ಕ್ಯಾಪ್ಸುಲ್‌ಗಳನ್ನು ಹೊರತೆಗೆಯಲಾಗಿದೆ.

“ಇಷ್ಟು ದೊಡ್ಡ ಪ್ರಮಾಣದಲ್ಲಿ ಮಾದಕವಸ್ತುಗಳನ್ನು ಭಾರತಕ್ಕೆ ಸಾಗಿಸಲು ಪ್ರಯತ್ನಿಸುತ್ತಿದ್ದು, ಇದು ದೊಡ್ಡ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲದ ಭಾಗವಾಗಿ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿದೆ” ಎಂದು ಕಸ್ಟಮ್ಸ್ ಪ್ರತ್ಯೇಕ ಪೋಸ್ಟ್‌ನಲ್ಲಿ ತಿಳಿಸಿದೆ. ಮೂರೂ ಪ್ರಕರಣಗಳು ದೇಹದೊಳಗೆ ಮಾದಕ ವಸ್ತುಗಳನ್ನು ಇಟ್ಟು ಕಳ್ಳಸಾಗಣೆ ಮಾಡಲಾಗಿದೆ. ಇದು ಅತ್ಯಂತ ಹೆಚ್ಚು ಅಪಾಯಕಾರಿ ಕಳ್ಳಸಾಗಣೆ ವಿಧಾನವಾಗಿದೆ ಎಂದು ಅದು ಹೇಳಿದೆ.

“ಐಜಿಐ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ತ್ವರಿತ ಕ್ರಮವು 39.96 ಕೋಟಿ ರೂ. ಮೌಲ್ಯದ ಸುಮಾರು 2.66 ಕೆಜಿ ಕೊಕೇನ್ ಅನ್ನು ಭಾರತೀಯ ಮಾರುಕಟ್ಟೆಗಳಿಗೆ ಬರದಂತೆ ತಡೆಯಲಾಗಿದೆ! ಈ ಕಾರ್ಯಾಚರಣೆಗಳ ಹಿಂದಿನ ದೊಡ್ಡ ಜಾಲವನ್ನು ಪತ್ತೆಹಚ್ಚಲು ತನಿಖೆಗಳು ನಡೆಯುತ್ತಿವೆ” ಎಂದು ಪೋಸ್ಟ್ ಹೇಳಿದೆ.

ಇದನ್ನೂಓದಿ:  ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ಛತ್ತೀಸ್‌ಗಢ | ಎನ್‌ಕೌಂಟರ್‌ನಲ್ಲಿ 12 ನಕ್ಸಲ್‌, ಇಬ್ಬರು ಪೊಲೀಸರ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...