Homeಮುಖಪುಟದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದ ದೆಹಲಿ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿಯ ಚುನಾಯಿತ ಸರ್ಕಾರಕ್ಕಿಂತಲೂ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ‘ರಾಷ್ಟ್ರ ರಾಜಧಾನಿ ವಲಯ ದೆಹಲಿ ತಿದ್ದುಪಡಿ ಮಸೂದೆಗೆ(ಎನ್‌ಸಿಟಿ)’ ರಾಷ್ಟ್ರಪತಿ  ಅಂಕಿತ ಹಾಕಿದ್ದಾರೆ. ಭಾನುವಾರ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿರುವ ಕೇಂದ್ರ ಸರ್ಕಾರ, ಎನ್‌ಸಿಟಿ ಮಸೂದೆ 2021ಕ್ಕೆ ರಾಷ್ಟ್ರಪತಿ ಒಪ್ಪಿಗೆ ದೊರೆತಿದೆ ಎಂದು ಹೇಳಿದೆ.

ದೆಹಲಿಯಲ್ಲಿ ಇನ್ನುಮುಂದೆ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದರ್ಥವಾಗುತ್ತದೆ. ದೆಹಲಿ ಸರ್ಕಾರವು ಯಾವುದೇ ಕಾರ್ಯಾಂಗೀಯ ಕ್ರಮ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌‌ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ ಸ್ಪಷ್ಟಪಡಿಸುತ್ತದೆ.

ರಾಜ್ಯಸಭೆಯಲ್ಲಿ ಈ ಶಾಸನವನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು. ಸರ್ಕಾರವು ಮಸೂದೆ ಪರಿಗಣನೆಗೆ ಮುಂದಾದಾಗ ಪ್ರತಿಪಕ್ಷಗಳು ವಿಭಜನೆ (ಡಿವಿಜನ್ ಆಫ್ ವೋಟ್ಸ್) ಕೋರಿದವು. ಮತದಾನದ ವೇಳೆ 83 ಸದಸ್ಯರು ಪರವಾಗಿದ್ದರೆ, 45 ಮಂದಿ ಮಸೂದೆಯನ್ನು ವಿರೋಧಿಸಿದರು. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಸದಸನದಿಂದ ಹೊರ ನಡೆದಿದ್ದವು.

ಮೇಲ್ಮನೆಯಲ್ಲಿ ಎರಡು ದಿನಗಳ ಗದ್ದಲಗಳ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷದ ಸಂಸದರು ಈ ಮಸೂದೆ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತದೆ ಎಂದು ಪದೇ ಪದೇ ಹೇಳಿದರು. ಮಸೂದೆಯನ್ನು ಆಯ್ಕೆ ಸಮಿತಿಗೆ (ಸೆಲೆಕ್ಟ್ ಕಮೀಟಿಗೆ) ಕಳುಹಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು.

ಈ ಮಸೂದೆಯ ಅಂಗೀಕಾರ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು 2013 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಂಘರ್ಷ ನಡೆಸುತ್ತಿದ್ದ ಸರ್ಕಾರಕ್ಕೆ ಈಗ ಹಿನ್ನಡೆ ಆಗಿದೆ.

ಇದನ್ನು ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಕುರಿತು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ದುಃಖದ ದಿನ ಎಂದು ಹೇಳಿದ್ದಾರೆ.

“ದ್ರೌಪದಿಯ ಬಟ್ಟೆಗಳನ್ನು ಕಿತ್ತುಹಾಕಿದ ರೀತಿ ಸಂವಿಧಾನಕ್ಕೂ ಮಾಡಲಾಗುತ್ತಿದೆ” ಎಂದು ಹೇಳಿದ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋತ ಕಾರಣ ಬಿಜೆಪಿ ಈ ಮಸೂದೆಯನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಂವಿಧಾನಿಕ ತಿದ್ದುಪಡಿ ಇಲ್ಲದೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತಿದೆ” ಎಂದು ಸಿಂಗ್ ಹೇಳಿದರು. ದೆಹಲಿಯ ಈಗಿನ ಆಡಳಿತ ವ್ಯವಸ್ಥೆಯು 69 ಸಾಂವಿಧಾನಿಕ ತಿದ್ದುಪಡಿಗಳ ನಂತರ ಬಂದಿದೆ. ಸಾಂವಿಧಾನಿಕ ತಿದ್ದುಪಡಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ – ಸರಳ ಬಹುಮತವಲ್ಲ – ಇದಕ್ಕಾಗಿ ಮೇಲ್ಮನೆಯಲ್ಲಿ ಬಿಜೆಪಿಗೆ ಸಂಖ್ಯೆಗಳ ಕೊರತೆಯಿದೆ. ಆದರೆ ಸರಳ ಬಹುಮತದಲ್ಲಿ ಇದನ್ನು ಸಾಧಿಸಲಾಗುತ್ತಿದೆ ಎಂದರು.

ಲೆಫ್ಟಿನೆಂಟ್-ಗವರ್ನರ್ ಎಂಬ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸುತ್ತಲೆ ಬಂದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್‌ಜೆಡಿ, ಶಿವಸೇನೆ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಅಕಾಲಿ ದಳ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದ್ದವು. ವೈಎಸ್‌ಆರ್ ಕಾಂಗ್ರೆಸ್ ಚರ್ಚೆಯ ಮಧ್ಯದಲ್ಲಿ ಹೊರನಡೆಯಿತು.

ಎಎಪಿ, ಈ ಮಸೂದೆಯನ್ನು ಜನರು ಒಪ್ಪುವುದಿಲ್ಲ ಮತ್ತು ರೈತರ ಪ್ರತಿಭಟನೆಯಂತೆಯೇ ಪ್ರತಿಭಟನೆಗಳು ನಡೆಯಲಿವೆ ಎಂದು ಹೇಳಿತು. ಮಸೂದೆಯನ್ನು ತರಲು ಒಂದು ಪ್ರಮುಖ ಕಾರಣವೆಂದರೆ ಪ್ರತಿಭಟನಾ ನಿರತ ರೈತರಿಗೆ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು ಎನ್ನಲಾಗಿದೆ.

ಇದನ್ನು ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

“ಎರಡು ಕೋಟಿ ಜನರು ಸರ್ಕಾರವನ್ನು ಆಯ್ಕೆ ಮಾಡಿದರು. ನಮ್ಮ ಅಪರಾಧವೇನು? ಕೇಜ್ರಿವಾಲ್ ಅವರು ದೆಹಲಿಗೆ ಬಂದಾಗ ರೈತರನ್ನು ಜೈಲಿಗೆ ಹಾಕದ ಕಾರಣ ಇದನ್ನು ಮಾಡಲಾಗಿದೆ. ಮಸೂದೆಯನ್ನು ರದ್ದುಗೊಳಿಸಬೇಕು” ಎಂದು ಸಿಂಗ್ ಹೇಳಿದರು.

’ಇಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಲೆಫ್ಟಿನೆಂಟ್‌‌ ಗವರ್ನರ್‌ಗೆ ನೀಡಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಕಾನೂನಾಗಬಾರದು” ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.

ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪ್ರತಿಪಕ್ಷಗಳ ಕಳವಳಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. 1991 ರ ಕಾಯಿದೆಯಲ್ಲಿನ ಅಸ್ಪಷ್ಟತೆಗಳನ್ನು ತೆಗೆದುಹಾಕಲು ತಿದ್ದುಪಡಿಗಳನ್ನು ತರಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ದಿನನಿತ್ಯದ ಆಡಳಿತದ ಪ್ರತಿಯೊಂದು ವಿಷಯದ ಬಗ್ಗೆ ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅವರ “ಸಮ್ಮತಿಯನ್ನು” ಪಡೆಯುವ ಅಗತ್ಯವಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಕಾಯ್ದೆಯಲ್ಲಿನ ತಿದ್ದುಪಡಿಗಳು ದೆಹಲಿಯಲ್ಲಿ ಉತ್ತಮ ಸರ್ಕಾರಿ ಕಾರ್ಯವಿಧಾನವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ತಿದ್ದುಪಡಿ ಮಸೂದೆಯಿಂದಾಗಿ ರಾಷ್ಟ್ರ ರಾಜಧಾನಿ ವಲಯದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ಸಿಗಲಿದೆ. ಮಸೂದೆಯಲ್ಲಿನ ದ್ವಂದ್ವಗಳನ್ನು ತೆಗೆಯುವ ನಿಟ್ಟಿನಲ್ಲಿ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ.


ಇದನ್ನು ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...