Homeಕರೋನಾ ತಲ್ಲಣಕಡ್ಡಾಯ ಮಾಸ್ಕ್‌ ನಿಯಮ ರದ್ದು ಪಡಿಸಿದ ದೆಹಲಿ ಮತ್ತು ಮಹಾರಾಷ್ಟ್ರ!

ಕಡ್ಡಾಯ ಮಾಸ್ಕ್‌ ನಿಯಮ ರದ್ದು ಪಡಿಸಿದ ದೆಹಲಿ ಮತ್ತು ಮಹಾರಾಷ್ಟ್ರ!

- Advertisement -
- Advertisement -

ಕೊರೊನಾ ಸಾಂಕ್ರಮಿಕ ದೇಶದಲ್ಲಿ ಹರಡಿದ ಎರಡು ವರ್ಷಗಳ ನಂತರ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಮಹಾರಾಷ್ಟ್ರ ಸರ್ಕಾರಗಳು ಕಡ್ಡಾಯ ಮಾಸ್ಕ್‌ ನಿಯಮಗಳನ್ನು ರದ್ದು ಮಾಡಿದೆ. ಎರಡು ರಾಜ್ಯಗಳಲ್ಲಿ ಇನ್ನು ಮುಂದಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಹಾಕದಿದ್ದರೆ ಯಾವುದೆ ದಂಡಗಳನ್ನು ವಿಧಿಸಲಾಗುವುದಿಲ್ಲ.

ಲೆಫ್ಟಿನೆಂಟ್‌ ಗವರ್ನರ್‌ ಅನಿಲ್ ಬೈಜಾಲ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಡಿಡಿಎಂಎ) ಸಭೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌‌ ಧರಿಸುವ ನಿಯಮವನ್ನು ಹಿಂಪಡೆಯಲಾಗಿದೆ. ದೆಹಲಿಯಲ್ಲಿ ಇನ್ನು ಮುಂದೆ ಮಾಸ್ಕ್‌‌ ಧರಿಸದಿದ್ದರೆ ಯಾವುದೇ ದಂಡ ವಿಧಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಆದಾಗ್ಯೂ, ಡಿಡಿಎಂಎ ಸಾರ್ವಜನಿಕರಿಗೆ ಜನಸಂದಣಿಯ ಪ್ರದೇಶಗಳಲ್ಲಿ ಮಾಸ್ಕ್‌ ಧರಿಸುವಂತೆ ಸಲಹೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ, ದೆಹಲಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡವನ್ನು ಕಟ್ಟಬೇಕಾಗಿತ್ತು.

ಮಹಾರಾಷ್ಟ್ರ ಸರ್ಕಾರವು ಎಲ್ಲಾ ಕೋವಿಡ್ -19 ನಿರ್ಬಂಧಗಳನ್ನು ತೆಗೆದುಹಾಕಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗುರುವಾರ ಹೇಳಿದ್ದಾರೆ. ಕಳೆದ ವರ್ಷ ಮಾರ್ಚ್ 2020 ರಲ್ಲಿ ಜಾರಿಗೊಳಿಸಲಾದ ಕಠಿಣ ವಿಪತ್ತು ನಿರ್ವಹಣಾ ಕಾಯಿದೆ ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ನಿಬಂಧನೆಗಳು ಏಪ್ರಿಲ್ 2 ರಿಂದ ರಾಜ್ಯದಲ್ಲಿ ಜಾರಿಯಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗದಗ: ತನ್ನ ಮನೆಯಲ್ಲೆ ಬಾಡಿಗೆಗೆ ವಾಸವಿರುವ ಸವರ್ಣೀಯ ವ್ಯಕ್ತಿಯಿಂದ ದಲಿತ ವಿಧವೆಯ ಮೇಲೆ ಹಲ್ಲೆ

ದೆಹಲಿಯಲ್ಲಿ ಪರಿಸ್ಥಿತಿ ಸುಧಾರಿಸುತ್ತಿದ್ದಂತೆ ಕೋವಿಡ್ ನಿರ್ಬಂಧಗಳನ್ನು ಕ್ರಮೇಣ ತೆಗೆದುಹಾಕಲಾಯಿತು ಮತ್ತು ಅಂತಿಮವಾಗಿ ಎಲ್ಲಾ ನಿರ್ಬಂಧಗಳನ್ನು ಫೆಬ್ರವರಿ 28 ರಂದು ತೆಗೆದುಹಾಕಲಾಯಿತು.

ನಾಲ್ಕು ತಿಂಗಳ ನಂತರ ಮೂರನೇ ತರಂಗವು ಕೊನೆಯ ಹಂತದಲ್ಲಿರುವುದರಿಂದ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಇಳಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಠಾಕ್ರೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ವಾನುಮತದಿಂದ ಕೊರೊನಾ ನಿರ್ಬಂಧಗಳನ್ನು ಹಿಂಪಡೆಯುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಆದಾಗ್ಯೂ, ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೈಹಿಕ ದೂರ ಮತ್ತು ಸ್ವಯಂಪ್ರೇರಿತವಾಗಿ ಮಾಸ್ಕ್‌ಗಳನ್ನು ಧರಿಸಲು ಶಿಫಾರಸು ಮಾಡಿದೆ. ಆದರೂ ಧರಿಸದೆ ಇದ್ದರೆ ಯಾವುದೇ ದಂಡಗಳು ಇರುವುದಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: VHP, ಬಜರಂಗದಳ ಪಕ್ಷವೊಂದರ ಬಾಲಂಗೋಚಿಗಳು; ಕರ್ನಾಟಕ ಅವರ ಜಹಗೀರಲ್ಲ: ಕುಮಾರಸ್ವಾಮಿ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

0
ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ)...