Homeಮುಖಪುಟದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

- Advertisement -
- Advertisement -

ತೆರವು ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ನಂತರವೂ ಏಪ್ರಿಲ್ 20ರಂದು ಬುಧವಾರ ಬೆಳಿಗ್ಗೆ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಕಾರ್ಯಾಚರಣೆ ನಡೆದಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು, “ಯಥಾಸ್ಥಿತಿ ಆದೇಶವನ್ನು ಅನುಸರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ತಿಳಿಸಬೇಕು” ಎಂದು ಕೋರ್ಟ್ ರಿಜಿಸ್ಟ್ರಿಗೆ ತಿಳಿಸಿದ್ದಾರೆ.

“ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಸ್ವೀಕರಿಸಿದ ತಕ್ಷಣ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗುವುದು” ಎಂದು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಡಿಎಂಸಿ) ಮೇಯರ್ ರಾಜಾ ಇಕ್ಬಾಲ್ ಸಿಂಗ್ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಲವು ನಿಮಿಷಗಳ ಹಿಂದೆ, “ನಾವು ನಮ್ಮ ಕೆಲಸವನ್ನು (ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆ) ನಿಲ್ಲಿಸಿದ್ದೇವೆ” ಎಂದು ಸಿಂಗ್ ಹೇಳಿದ್ದಾರೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಜಹಾಂಗೀರ್‌ಪುರಿಯಲ್ಲಿರುವ ವಿಶೇಷ ಪೊಲೀಸ್ ಕಮಿಷನರ್ ದೇಪೇಂದ್ರ ಪಾಠಕ್, “ನಾಗರಿಕ ಸಂಸ್ಥೆ (ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್) ನಿರ್ಧಾರ ತೆಗೆದುಕೊಳ್ಳಲಿ. ನಾವು ನಾಗರಿಕ ಸಂಸ್ಥೆಗೆ ಬೆಂಬಲ ಮತ್ತು ರಕ್ಷಣೆ ನೀಡಲು ಇಲ್ಲಿದ್ದೇವೆ” ಎಂದು ಹೇಳಿದ್ದರು.

ಬುಧವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯಲ್ಲಿ ಕೆಲವು ಬುಲ್ಡೋಜರ್‌ಗಳನ್ನು ಬಳಸಲಾಯಿತು. ಕೆಲವು ಮಾರಾಟದ ಬಂಡಿಗಳು, ಅಂಗಡಿಗಳು ಮತ್ತು ಇತರ ಕಟ್ಟಗಳನ್ನು ನಾಶಪಡಿಸಲಾಯಿತು.

ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ವಾಯುವ್ಯ ದೆಹಲಿಯಲ್ಲಿ ಘರ್ಷಣೆ ಸಂಭವಿಸಿದ ನಂತರ ಅತಿಕ್ರಮಣ ವಿರೋಧಿ ಅಭಿಯಾನದ ಹೆಸರಲ್ಲಿ ಮುಸ್ಲಿಂ ಸಮುದಾಯವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಲಾಗುತ್ತಿದೆ.

ಕಳೆದ ವಾರದ ಕೋಮು ಘರ್ಷಣೆಯ ನಂತರ ಉದ್ವಿಗ್ನಗೊಂಡ ದೆಹಲಿಯ ಜಹಾಂಗೀರಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನವನ್ನು ಆರಂಭಿಸಲಾಗಿದ್ದು ಇಂದು ಸುಪ್ರೀಂ ಕೋರ್ಟ್ ಆದೇಶದ ನಂತರ ನಿಲ್ಲಿಸಲಾಗಿದೆ. ಆದರೆ ಮಸೀದಿಯ ಬಳಿ ಇರುವ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ನ್ಯಾಯಾಲಯದ ಆದೇಶದ ನಂತರವೂ ಕೆಡವುವ ಕಾರ್ಯ ಮುಂದುವರಿದಿತ್ತು. ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಮೇಯರ್ ರಾಜಾ ಇಕ್ಬಾಲ್ ಸಿಂಗ್, ಕೋರ್ಟ್ ‌ಆದೇಶ ಇನ್ನೂ ಸ್ವೀಕರಿಸಲಾಗಿಲ್ಲ. ಹೀಗಾಗಿ ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಕೆಲಸವನ್ನು ಮುಂದುವರಿಸಲಾಗುವುದು” ಎಂದಿದ್ದರು.

ಇದನ್ನೂ ಓದಿರಿ: ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ತೆರವು ಕಾರ್ಯಾಚರಣೆ ಚಾಲನೆಗೆ ಮುನ್ನ ಯಾವುದೇ ಸೂಚನೆ ನೀಡಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ. ಎರಡು ದಿನಗಳ ಅತಿಕ್ರಮಣ ವಿರೋಧಿ ಅಭಿಯಾನಕ್ಕೆ ಕನಿಷ್ಠ 400 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಮುನ್ಸಿಪಲ್ ಕೇಳಿಕೊಂಡಿತ್ತು.

ಅನುಮತಿ ಪಡೆಯದೆ ಹನುಮ ಜಯಂತಿ ಮೆರವಣಿಗೆಯನ್ನು ಮಸೀದಿಯೊಂದರ ಪಕ್ಕದಲ್ಲಿ ನಡೆಸಿದಾಗ ಶನಿವಾರ ಗಲಭೆ ನಡೆಯಿತು. ಕೋಮು ಘರ್ಷಣೆಯಿಂದ ಜಹಾಂಗೀರ್ಪುರಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದವು. ಗುಂಡು ಹಾರಿಸಲಾಯಿತು. ಎಂಟು ಪೊಲೀಸರು ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 25 ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಐವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಆರೋಪ ಹೊರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...