Homeಕೊರೊನಾಸಂಪೂರ್ಣ ಲಸಿಕೆ ಪಡೆದಿರುವ ದೆಹಲಿಗರಿಗೆ ಬೂಸ್ಟರ್ ಡೋಸ್ ನೀಡಲು ಅನುಮತಿ ಕೊಡಿ: ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಸಂಪೂರ್ಣ ಲಸಿಕೆ ಪಡೆದಿರುವ ದೆಹಲಿಗರಿಗೆ ಬೂಸ್ಟರ್ ಡೋಸ್ ನೀಡಲು ಅನುಮತಿ ಕೊಡಿ: ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಓಮಿಕ್ರಾನ್ ರೂಪಾಂತರಿಯ ಆತಂಕ ಮತ್ತು ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ, ಸೋಂಕಿಗೆ ಒಳಗಾಗುವ ಎಲ್ಲಾ ಜನರ ಮಾದರಿಗಳನ್ನು ಈಗ ಜಿನೋಮ್ ಸಿಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.

ಇದರ ಜೊತೆಗೆ ಸಂಪೂರ್ಣ ಲಸಿಕೆ ಪಡೆದಿರುವ ದೆಹಲಿ ನಗರ ನಿವಾಸಿಗಳಿಗೆ ಬೂಸ್ಟರ್ ಶಾಟ್‌ಗಳನ್ನು ನೀಡಲು ಆಡಳಿತಕ್ಕೆ ಅವಕಾಶ ನೀಡಬೇಕು ಎಂದು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.

“ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇವು ಯಾವ ರೀತಿಯ ಕೋವಿಡ್ ಪ್ರಕರಣಗಳು, ಸಾಮಾನ್ಯವೇ ಅಥವಾ ಓಮಿಕ್ರಾನ್ ರೂಪಾಂತರವೇ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ, ಇದನ್ನು ಖಚಿತಪಡಿಸಿಕೊಳ್ಳಲು ನಾವು ಈಗ ಎಲ್ಲಾ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಜೀನೋಮ್ ಸಿಕ್ವೆನ್ಸಿಂಗ್‌ಗೆ ಕಳುಹಿಸಲು ನಿರ್ಧರಿಸಿದ್ದೇವೆ” ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ: ಅಧಿಕಾರ ಶಾಶ್ವತವಲ್ಲ ಎಂದ ಬಸವರಾಜ ಬೊಮ್ಮಾಯಿ

ಈಗಾಗಲೇ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿರುವ ದೆಹಲಿ ನಿವಾಸಿಗಳಿಗೆ ಬೂಸ್ಟರ್ ಶಾಟ್‌ಗಳನ್ನು ನೀಡಲು ಆಡಳಿತಕ್ಕೆ ಅವಕಾಶ ನೀಡುವಂತೆ ಕೇಜ್ರಿವಾಲ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

“ದೆಹಲಿ ಜನಸಂಖ್ಯೆಯ ಸುಮಾರು 99 ಪ್ರತಿಶತದಷ್ಟು ಜನರು ಮೊದಲ ಡೋಸ್ ತೆಗೆದುಕೊಂಡಿದ್ದಾರೆ, ಸುಮಾರು 70 ಪ್ರತಿಶತದಷ್ಟು ಜನರು ಎರಡೂ ಡೋಸ್‌ಗಳೊಂದಿಗೆ ಸಂಪೂರ್ಣ ಲಸಿಕೆ ಪಡೆದಿದ್ದಾರೆ. ಹೀಗಾಗಿ ಎರಡೂ ಡೋಸ್‌ ಲಸಿಕೆ ಪಡೆದಿರುವ ಎಲ್ಲರಿಗೂ ಬೂಸ್ಟರ್ ಡೋಸ್‌ಗಳನ್ನು ನೀಡಲು ಅನುಮತಿ ನೀಡುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ” ಎಂದಿದ್ದಾರೆ.

“ಬೂಸ್ಟರ್ ಡೋಸ್‌ಗಳನ್ನು ನೀಡಲು ನಾವು ಮೂಲಸೌಕರ್ಯಗಳನ್ನು ಹೊಂದಿದ್ದೇವೆ. ನಾವು ನಮ್ಮ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಬೂಸ್ಟರ್ ಡೋಸ್‌ ನೀಡುವ ಮೂಲಕ ಪ್ರಾರಂಭಿಸಿ, ನಂತರ ಉಳಿದ ಜನರಿಗು ಲಸಿಕೆ ಹಾಕಬಹುದು” ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ದೆಹಲಿಯಲ್ಲಿ ಇದುವರೆಗೆ 24 ಓಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿಯಾಗಿವೆ. ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ವೈರಸ್ ಅನ್ನು ಎದುರಿಸಲು ಅಗತ್ಯವಿರುವ ಎಲ್ಲದಕ್ಕೂ ಸರ್ಕಾರ ಸಾಕಷ್ಟು ವ್ಯವಸ್ಥೆಯನ್ನು ಮಾಡಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: 3 ಡೋಸ್ ಲಸಿಕೆ ಪಡೆದ ಯುವಕನಲ್ಲಿಯೂ ಓಮಿಕ್ರಾನ್ ಸೋಂಕು: ಮುಂಬೈ ಪಾಲಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why these fully vaccinated need booster dose Kejrivalji. Continue your good works, but stop promoting and in way forcing people to take this death jab!!! Do some homework on the so called pandemic. It’s Plandemic.

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...