Homeಮುಖಪುಟದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

ದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಂಜಾಬ್ ಎಎಪಿ ಘಟಕವು ವಿಭಜನೆಯಾಗಲಿದೆ ಎಂಬ ತೀವ್ರ ಊಹಾಪೋಹಗಳ ನಡುವೆ, ಪಕ್ಷ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟದ ಸಚಿವರು ಮತ್ತು ಶಾಸಕರೊಂದಿಗೆ ಸಭೆ ಕರೆದಿದ್ದಾರೆ. ದೆಹಲಿ ಹಿನಾಯ ಸೋಲು

ಈ ನಡುವೆ, ಕನಿಷ್ಠ 30 ಎಎಪಿ ಸದಸ್ಯರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಹೇಳಿಕೊಂಡಿದೆ. ಜೊತೆಗೆ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಲಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಮತ್ತು ಪಂಜಾಬ್‌ನಿಂದ ರಾಜ್ಯಸಭೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯತಂತ್ರವನ್ನು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ ಎಎಪಿ ಸ್ಪಷ್ಟಪಡಿಸಿದೆ.

ಈ ಎಲ್ಲಾ ಊಹಾಪೋಹಗಳ ನಡುವೆ, ಪಂಜಾಬ್‌ನ ಏಳು ಸಂಸದರಲ್ಲಿ ಒಬ್ಬರು ರಾಜೀನಾಮೆ ನೀಡಿ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎಂಬ ವದಂತಿಗಳು ಹರಡಿವೆ. ದೆಹಲಿ ಹಿನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಪಂಜಾಬ್ ಮುಖ್ಯಮಂತ್ರಿಯ ಅಧಿಕೃತ ನಿವಾಸವಾದ ಕಪುರ್ತಲಾ ಹೌಸ್‌ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಪಂಜಾಬ್ ಶಾಸಕರಿಗೆ ಸೂಚಿಸಲಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಮಾನ್ ಭಾನುವಾರ ಮಧ್ಯಾಹ್ನ ಚಂಡೀಗಢಕ್ಕೆ ಬಂದಿದ್ದಾರೆ. ಸೋಮವಾರ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 13 ಕ್ಕೆ ಮುಂದೂಡಲಾಗಿದೆ.

ಈ ಸಭೆಯ ಕಾರ್ಯಸೂಚಿ ತಿಳಿದಿಲ್ಲ, ಆದರೆ ಕೇಜ್ರಿವಾಲ್ ಶಾಸಕರಿಗೆ “ಆಮ್ ಆದ್ಮಿ” ಜೊತೆ ಮತ್ತೆ ಸಂಪರ್ಕ ಸಾಧಿಸಲು “ಆತ್ಮ ಸಮಾಲೋಚನಾ ಸಭೆ” ಮಾಡುವ ಸಾಧ್ಯತೆ ಇದೆ. ಪಂಜಾಬ್‌ನ ಕೆಲವು ಶಾಸಕರು ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದು, ಪಕ್ಷ ಬದಲಾಯಿಸುವುದನ್ನು ಪರಿಗಣಿಸಲಿದ್ದಾರೆ ಎಂಬ ವರದಿಗಳ ನಡುವೆ ದೆಹಲಿಯಲ್ಲಿ ನಡೆಯಲಿರುವ ಸಭೆಯೂ ಮಹತ್ವ ಬಂದಿದೆ.

ಈ ನಡುವೆ, ಪಂಜಾಬ್‌ ರಾಜಕೀಯದಲ್ಲಿ ಕೇಜ್ರಿವಾಲ್ ನೇರವಾಗಿ ಪಾತ್ರ ವಹಿಸಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಸ್ಥಾನ ಖಾಲಿಯಾಗಿರುವುದರಿಂದ, ಕೇಜ್ರಿವಾಲ್ ಅಲ್ಲಿಂದ ಸ್ಪರ್ಧಿಸಿ ಪಂಜಾಬ್ ಸರ್ಕಾರದ ಭಾಗವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಪಂಜಾಬ್‌ನಲ್ಲಿ ಎಎಪಿ ಮೇಲೆ ಬಿಜೆಪಿ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, “ಮಾನ್ ಅವರ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿಕೊಂಡಿದ್ದಾರೆ. ರಾಜೌರಿ ಗಾರ್ಡನ್‌ನ ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಇದೇ ರೀತಿಯ ಹೇಳಿಕೆ ನಿಡಿದ್ದು, ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಿಗಿಡಲಿದ್ದಾರೆ ಎಂದು ಸೂಚಿಸಿದರು.

“ಚುನಾವಣೆಯಲ್ಲಿ ಸೋತ ನಂತರ, ಕೇಜ್ರಿವಾಲ್  ಅವರು ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಸಿಎಂ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...