Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ : ಸಿಎಂ ಅತಿಶಿ ವಿರುದ್ಧ ಅಲ್ಕಾ ಲಂಬಾರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

ದೆಹಲಿ ವಿಧಾನಸಭೆ ಚುನಾವಣೆ : ಸಿಎಂ ಅತಿಶಿ ವಿರುದ್ಧ ಅಲ್ಕಾ ಲಂಬಾರನ್ನು ಕಣಕ್ಕಿಳಿಸಿದ ಕಾಂಗ್ರೆಸ್‌

- Advertisement -
- Advertisement -

ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರ ವಿರುದ್ಧ ಮಹಿಳಾ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಅಲ್ಕಾ ಲಂಬಾ ಅವರನ್ನು ಕಾಂಗ್ರೆಸ್ ಪಕ್ಷ ಕಣಕ್ಕಿಳಿಸಿದೆ.

ದಕ್ಷಿಣ ದೆಹಲಿಯ ಕಲ್ಕಾಜಿ ವಿಧಾನಸಭಾ ಕ್ಷೇತ್ರದಿಂದ ಅಲ್ಕಾ ಲಂಬಾ ಅವರು ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಪ್ರಸ್ತುತ ಈ ಕ್ಷೇತ್ರದ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲೂ ಕಲ್ಕಾಜಿ ಕ್ಷೇತ್ರದಿಂದ ಅತಿಶಿ ಅವರೇ ಸ್ಪರ್ಧಿಸುವ ಸಾಧ್ಯತೆ ಇದೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, “ಪಕ್ಷದ ಕೇಂದ್ರ ಚುನಾವಣಾ ಸಮಿತಿ ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಗೆ ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಆಯ್ಕೆ ಮಾಡಿದೆ” ಎಂದು ತಿಳಿಸಿದೆ.

“ನಾನು ಮುಖ್ಯಮಂತ್ರಿ ವಿರುದ್ಧ ಸ್ಪರ್ಧಿಸುತ್ತಿದ್ದೇನೆ ಎಂದು ಭಾವಿಸುವುದಿಲ್ಲ. ಅರವಿಂದ್ ಕೇಜ್ರಿವಾಲ್ ಅವರೇ ಅತಿಶಿವರನ್ನು ತಾತ್ಕಾಲಿಕ ಸಿಎಂ ಎಂದು ಕರೆದಿದ್ದಾರೆ. ಆದ್ದರಿಂದ ಅವರು ಕೇವಲ ಇನ್ನು ಒಂದು ತಿಂಗಳು ಮಾತ್ರ ಸಿಎಂ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಕೇಜ್ರಿವಾಲ್ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವ ಮಹಿಳೆಗೆ ಅಗೌರವ ತೋರುತ್ತಿದ್ದಾರೆ. ಕೇಜ್ರಿವಾಲ್ ಅವರು ತಾತ್ಕಾಲಿಕ ಸಿಎಂ ಎಂದು ಕರೆದಿರುವ ಬಗ್ಗೆ ಅತಿಶಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು” ಎಂದು ಕಲ್ಕಾಜಿ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಅಲ್ಕಾ ಲಾಂಬಾ ಹೇಳಿದ್ದಾರೆ.

2020ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅತಿಶಿ ಮರ್ಲೆನಾ ಅವರು 55,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಧರಂಬೀರ್ ಅವರನ್ನು ಸೋಲಿಸಿದ್ದರು. ಆಗ ಅತಿಶಿಯವರ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಶಿವಾನಿ ಚೋಪ್ರಾ ಅವರು 5,000ಕ್ಕಿಂತ ಕಡಿಮೆ ಮತಗಳನ್ನು ಗಳಿಸಿದ್ದರು. ಸ್ಪರ್ಧೆಯಲ್ಲಿ ಮೂರನೇ ಸ್ಥಾನ ಪಡೆದಿದ್ದರು.

ಅಲ್ಕಾ ಲಂಬಾ ಯಾರು?

ಪ್ರಸ್ತುತ ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿರುವ ಅಲ್ಕಾ ಲಂಬಾ ಅವರು, ಕಾಂಗ್ರೆಸ್‌ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಸುಮಾರು 20 ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿ ಕಾರ್ಯನಿರ್ವಹಿಸಿದ ಬಳಿಕ ಪಕ್ಷವನ್ನು ತೊರೆದ ಅವರು, 26 ಡಿಸೆಂಬರ್ 2014ರಂದು ಆಮ್‌ ಆದ್ಮಿ ಪಕ್ಷ (ಎಎಪಿ) ಸೇರಿದರು. ಬಳಿಕ ಫೆಬ್ರವರಿ 2015ರಲ್ಲಿ ಚಾಂದ್‌ನಿ ಚೌಕ್‌ ಕ್ಷೇತ್ರದಿಂದ ದೆಹಲಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಬಳಿಕ, ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿ ಸೆಪ್ಟೆಂಬರ್ 2019ರಲ್ಲಿ ಎಎಪಿ ತೊರೆದರು. ಸೆಪ್ಟಂಬರ್ 6 , 2019ರಂದು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಹಿಂದಿರುಗಿದರು. ಈ ವೇಳೆ ಅವರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ದೆಹಲಿ ಸ್ಪೀಕರ್ ಶಾಸಕಿ ಸ್ಥಾನದಿಂದ ಅಮಾನತುಗೊಳಿಸಿದ್ದರು.

ಕಾಲೇಜು ಹಂತದಲ್ಲಿ ಅಲ್ಕಾ ಲಂಬಾ ಅವರು ವಿದ್ಯಾರ್ಥಿ ನಾಯಕರಾಗಿದ್ದರು. ದೆಹಲಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ನಂತರ ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆ ಎನ್‌ಎಸ್‌ಯುಐನ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್‌ ರಾಷ್ಟ್ರೀಯ ಸಮಿತಿಯ ಕಾರ್ಯದರ್ಶಿಯಾಗಿ ಅಲ್ಕಾ ಲಂಬಾ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ಗೋ ಇಂಡಿಯಾ ಫೌಂಡೇಶನ್ ಎಂಬ ಎನ್‌ಜಿಒ ಅಧ್ಯಕ್ಷೆ ಹಾಗೂ ಮಹಿಳಾ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷೆಯಾಗಿದ್ದಾರೆ.

ಇದನ್ನೂ ಓದಿ : ಉತ್ತರ ಪ್ರದೇಶ| ಜನವರಿ 18 ರಿಂದ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನಿಂದ ‘ನ್ಯಾಯ ಯಾತ್ರೆ’ ರ‍್ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...