Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...

ಲೈಂಗಿಕ ಕಿರುಕುಳದ ಆರೋಪ ಮಾಡಿದ ಪತ್ರಕರ್ತೆಯ ವಿರುದ್ಧ ಜಾತಿ ನಿಂದನೆ ಪ್ರಕರಣ: ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿದ್ದ ಪ್ರತಿಭಟನೆಗಳನ್ನು ವರದಿ ಮಾಡುವಾಗ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿವೇಕ್ ಭಗತ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಮಹಿಳಾ ಪತ್ರಕರ್ತೆಯ ವಿರುದ್ಧ ದಾಖಲಾಗಿರುವ...

ಸಿಇಸಿ ವಿರೋಧಿ ಪ್ರತಿಭಟನೆ: ಮೆಟ್ರೋ ನಿರ್ಬಂಧ, ಇಂಟರ್ನೆಟ್ ಸ್ಥಗಿತ ಪ್ರಕರಣ: ಸುಪ್ರೀಂ ಕೋರ್ಟ್ ಗೆ ಬೇಷರತ್ ಕ್ಷಮೆಯಾಚಿಸಿದ ಕೇಂದ್ರ ಕಾರ್ಯದರ್ಶಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಅಕ್ಟೋಬರ್ 10ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮೆಟ್ರೋ ಮತ್ತು ರೈಲು ಸೇವೆಗಳ ಮೇಲೆ ನಿರ್ಬಂಧ ವಿಧಿಸಿದ ಹಾಗೂ ಇಂಟರ್ನೆಟ್...

‘ಯಾರೂ ನಮ್ಮನ್ನು ಬೆದರಿಸಿ ಮಣಿಸಲು ಸಾಧ್ಯವಿಲ್ಲ’: ವಿಪಕ್ಷಗಳ ಸುಪ್ರೀಂ ಕೋರ್ಟ್ ಮಾರ್ಚ್ ಕುರಿತು ಸಿಜೆಐ ಹೇಳಿಕೆ

ನ್ಯಾಯಾಲಯ ಸಂಕೀರ್ಣಗಳ ಸಮೀಪ ಪ್ರತಿಭಟನೆಗಳು ಮತ್ತು ಮೆರವಣಿಗೆಗಳಿಗೆ ನಿಯಂತ್ರಕ ಚೌಕಟ್ಟೊಂದನ್ನು ರೂಪಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಸಂಬಂಧ ಸುಪ್ರೀಂ ಕೋರ್ಟ್ ಇಂದು (ಅ.15) ನೋಟಿಸ್ ಜಾರಿ ಮಾಡಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ದೆಹಲಿ ಪ್ರತಿಭಟನೆ ಹಾಗೂ ಜಂತರ್ ಮಂತರ್ ರದ್ದತಿ ವಿವಾದ: ಕೇಂದ್ರ ಸರ್ಕಾರ ಹಾಗೂ ಪೊಲೀಸರಿಗೆ ಸುಪ್ರೀಂ ನೋಟಿಸ್; ವಿಡಿಯೋ ಸಾಕ್ಷ್ಯ ಭದ್ರಪಡಿಸಲು ನಿರ್ದೇಶನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ನಡೆಸಿದ್ದರೆನ್ನಲಾದ ಅತಿಯಾದ ಬಲಪ್ರಯೋಗ, ಸಾರ್ವಜನಿಕರ ಸಂಚಾರ ನಿರ್ಬಂಧ ಹಾಗೂ ಪ್ರಮುಖ ಪ್ರತಿಭಟನಾ ಸ್ಥಳವಾಗಿದ್ದ 'ಜಂತರ್ ಮಂತರ್' ಅನ್ನು ರದ್ದುಗೊಳಿಸಿದ (De-notification) ಕೇಂದ್ರ...

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡವರಿಗೆ ‘ಹಿಂದುಳಿದ ವರ್ಗದ’ ಮೀಸಲಾತಿ ಇಲ್ಲ : ಮದ್ರಾಸ್ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ತನ್ನ ಮತಾಂತರ ಪೂರ್ವದ ಜಾತಿ ಸ್ಥಿತಿಯ ಆಧಾರದ ಮೇಲೆ ಹಿಂದುಳಿದ ವರ್ಗದ (ಬಿಸಿ) ಮೀಸಲಾತಿಗೆ ಅರ್ಹನಲ್ಲ ಎಂದು ತೀರ್ಪು ನೀಡಿದ್ದ ಮದ್ರಾಸ್ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್...

‘ಎಸ್‌ಐಆರ್’ ವಿರುದ್ಧ ಇಂಡಿಯಾ ನಾಯಕರ ಅರ್ಜಿ: ಸುಪ್ರೀಂ ಕೋರ್ಟ್‌ನಿಂದ ಚುನಾವಣಾ ಆಯೋಗಕ್ಕೆ ನೋಟಿಸ್

ಭಾರತೀಯ ಚುನಾವಣಾ ಆಯೋಗ ದೇಶಾದ್ಯಂತ ಜಾರಿಗೆ ತಂದಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯ ಕಾನೂನಾತ್ಮಕತೆಯನ್ನು ಪ್ರಶ್ನಿಸಿ ವಿಪಕ್ಷ 'ಇಂಡಿಯಾ' ಒಕ್ಕೂಟ ಸಲ್ಲಿಸಿರುವ ಪ್ರಮುಖ...

ಸಿಇಸಿ ವಿರುದ್ಧದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್‌ಗೆ ಭಾರತ ತೊರೆಯುವಂತೆ ನೋಟಿಸ್: ಅಕ್ಟೋಬರ್ 28ರ ಗಡುವು

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ ಅವರಿಗೆ ಅಕ್ಟೋಬರ್ 28ರೊಳಗೆ ಭಾರತ ತೊರೆಯುವಂತೆ...

2018ರ ‘ಬಿಜೆಪಿ ಐಟಿ ಸೆಲ್’ ವೀಡಿಯೊ ವಿವಾದ: ಯೂಟ್ಯೂಬರ್ ಧ್ರುವ್ ರಾಠಿಗೆ ಹೊಸ ಸಮನ್ಸ್ ಜಾರಿ ಮಾಡಿದ ದೆಹಲಿ ಕೋರ್ಟ್!

ಡಿಜಿಟಲ್ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದ 2018ರ ಕ್ರಿಮಿನಲ್ ಮಾನಹಾನಿ ದೂರಿಗೆ (Criminal Defamation Case) ಸಂಬಂಧಿಸಿದಂತೆ, ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರಿಗೆ ದೆಹಲಿಯ ಸಾಕೇತ್ ನ್ಯಾಯಾಲಯವು ಹೊಸದಾಗಿ...