Homeಮುಖಪುಟದೆಹಲಿ: 2023ರ ಜನವರಿ 1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧ

ದೆಹಲಿ: 2023ರ ಜನವರಿ 1ರ ವರೆಗೆ ಪಟಾಕಿ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧ

- Advertisement -
- Advertisement -

ಜನವರಿ 1 ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದ್ದಾರೆ. ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟಕ್ಕೂ ನಿಷೇಧವಿದೆ ಎಂದು ಅವರು ಹೇಳಿದ್ದಾರೆ.

ಎಲ್ಲಾ ರೀತಿಯ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಇದರಿಂದ ಜನರ ಜೀವವನ್ನು ಉಳಿಸಬಹುದು ಎಂದು ಗೋಪಾಲ್ ರೈ ಟ್ವೀಟ್ ಮಾಡಿದ್ದಾರೆ. ಈ ಬಾರಿ ದೆಹಲಿಯಲ್ಲಿ ಆನ್‌ಲೈನ್‌ನಲ್ಲಿ ಪಟಾಕಿ ಮಾರಾಟ ಮತ್ತು ವಿತರಣೆಯ ಮೇಲೂ ನಿಷೇಧ ಹೇರಲಾಗಿದೆ. ನಿರ್ಬಂಧವು 2023ರ ಜನವರಿ 1 ರವರೆಗೆ ಜಾರಿಯಲ್ಲಿರುತ್ತದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಈ ಬಾರಿ ದೆಹಲಿಯಲ್ಲಿ ಪಟಾಕಿಗಳ ಆನ್‌ಲೈನ್ ಮಾರಾಟ ಹಾಗೂ ವಿತರಣೆಯನ್ನು ಕೂಡಾ ನಿಷೇಧಿಸಲಾಗಿದೆ. ಈ ನಿರ್ಬಂಧವು 2023ರ ಜನವರಿ 1 ರವರೆಗೆ ಜಾರಿಯಲ್ಲಿರುತ್ತದೆ’’ ಎಂದು ಸಚಿವರು ಹೇಳಿದ್ದಾರೆ.

ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ದೆಹಲಿ ಪೊಲೀಸರು, ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಮತ್ತು ಕಂದಾಯ ಇಲಾಖೆಯೊಂದಿಗೆ ಕ್ರಿಯಾ ಯೋಜನೆಯನ್ನು ರೂಪಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಕಳೆದ ವರ್ಷ, ದೆಹಲಿ ಸರ್ಕಾರವು ಸೆಪ್ಟೆಂಬರ್ 28 ರಿಂದ 2022 ರ ಜನವರಿ 1 ವರೆಗೆ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆದೇಶಿಸಿತ್ತು.

ಇದನ್ನೂ ಓದಿ: ದೀಪಾವಳಿ ಪಟಾಕಿ ಪರಿಣಾಮ: ತೀವ್ರ ಕಲುಷಿತಗೊಂಡ ದೆಹಲಿಯ ವಾತಾವರಣ

ಪಟಾಕಿ ಸುಡುವುದರ ವಿರುದ್ಧ ಜಾಗೃತಿ ಮೂಡಿಸಲು ನಗರಾಡಳಿತವು ‘ಪಟಾಕೆ ನಹಿ ದಿಯೆ ಜಲವೋ’(ಪಟಾಕಿ ಅಲ್ಲ, ದೀಪ ಬೆಳಗಿಸಿ) ಅಭಿಯಾನವನ್ನು ಸಹ ಪ್ರಾರಂಭಿಸಿದೆ. ಒಂದು ವೇಳೆ ನಿಯಮಗಳನ್ನು ಮೀರಿ ಪಟಾಕಿ ಸುಟ್ಟರೆ ಅಂತವರ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳು ಮತ್ತು ಸ್ಫೋಟಕಗಳ ಕಾಯಿದೆಯಡಿ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಹೇಳಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗದಿದ್ದರೆ ಮತ್ತೆ ಹಾಗೆ ಮಾಡ್ತಾರೆ: ಅತ್ಯಾಚಾರ ಸಂತ್ರಸ್ತೆಯ ಸಹೋದರಿ ಹೇಳಿಕೆ

0
"ಪ್ರಜ್ವಲ್ ಮತ್ತು ರೇವಣ್ಣ ಯಾವತ್ತೂ ತಲೆ ಎತ್ತಿ ನಡೆಯಬಾರದು, ಅಂತಹ ಶಿಕ್ಷೆಯಾಗಬೇಕು" ಎಂದು ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯೊಬ್ಬರ ಸಹೋದರಿ ಮಾಲಾ (ಹೆಸರು ಬದಲಿಸಲಾಗಿದೆ) ಹೇಳಿರುವುದಾಗಿ thenewsminute.com ವರದಿ ಮಾಡಿದೆ. ಮಾಲಾಗೆ ತನ್ನ ಸಹೋದರಿ...