Homeಮುಖಪುಟ'ಅತ್ಯಂತ ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ...

‘ಅತ್ಯಂತ ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ ಮಕ್ಕಳಿಗೆ ಅನ್‌ಲೈನ್‌ ತರಗತಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ‘ಅತ್ಯಂತ ಗಂಭೀರ’ ಮಟ್ಟಕ್ಕೆ ತಲುಪಿದ್ದು, ಜನರು ವಾಸಿಸಲು ಯೋಗ್ಯವಲ್ಲದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ, ಭಾನುವಾರದಿಂದ (ನ.17) ಟ್ರಕ್‌ಗಳು ನಗರ ಪ್ರವೇಶಿಸುವುದನ್ನು ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳನ್ನು ತಾತ್ಕಾಲಿಕ ನಿಷೇಧಿಸಲಾಗಿದೆ.

10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು ಮುಂದಿನ ಆದೇಶದವರೆಗೆ ಆನ್‌ಲೈನ್‌ ಮೂಲಕ ನಡೆಯಲಿದೆ ಎಂದು ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳ ಪ್ರಕಾರ, ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೈನಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಅಥವಾ ಎಕ್ಯೂಐ 484 ರಷ್ಟಿತ್ತು. ಭಾನುವಾರ ಸಂಜೆ 4 ಗಂಟೆ ಹೊತ್ತಿಗೆ ಈ ಮಟ್ಟ 441 ಮತ್ತು 7 ಗಂಟೆಯ ಹೊತ್ತಿಗೆ 457 ಆಗಿತ್ತು.

ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ, ಗಾಳಿಯ ಸೂಚ್ಯಂಕ 0 ಯಿಂದ 50 ರ ನಡುವೆ ಇದ್ದರೆ ‘ಉತ್ತಮ ಗುಣಮಟ್ಟ’, 51 ರಿಂದ 100ರ ನಡುವೆ ಇದ್ದರೆ ‘ತೃಪ್ತಿದಾಯಕ ಗುಣಮಟ್ಟ’, 101 ರಿಂದ 200ರ ನಡುವೆ ಇದ್ದರೆ ‘ಮಧ್ಯಮ ಗುಣಮಟ್ಟ’, 201 ರಿಂದ 300 ರ ನಡುವೆಯಿದ್ದರೆ ‘ಕಳಪೆ ಗುಣಮಟ್ಟ’, 301 ರಿಂದ 400ರ ನಡುವೆಯಿದ್ದರೆ ‘ಅತ್ಯಂತ ಕಳಪೆ ಗುಣಮಟ್ಟ. ಆದರೆ, ದೆಹಲಿಯ ಗಾಳಿಯ ಸೂಚ್ಯಂಕ 500ರ ಸನಿಹ ತಲುಪಿದೆ. ಇದರಿಂದ ಮಾಲಿನ್ಯದ ಪ್ರಮಾಣ ಅರ್ಥೈಸಬಹುದು.

ಗಾಳಿಯ ಸೂಚ್ಯಂಕ 401 ರಿಂದ 450ರ ನಡುವೆಯಿದ್ದರೆ ‘ತೀವ್ರ ಕಳಪೆ ಗುಣಮಟ್ಟ’ವನ್ನು ಸೂಚಿಸುತ್ತದೆ. ಇನ್ನು 450ರ ಮಿತಿಗಿಂತ ಹೆಚ್ಚಿದ್ದರೆ, ‘ತೀವ್ರ ಪ್ಲಸ್’ ಎಂದು ಕರೆಯಲಾಗುತ್ತದೆ. ಈ ಹಂತಗಳಲ್ಲಿ, ಆರೋಗ್ಯವಂತ ಜನರು ವಾಯು ಮಾಲಿನ್ಯಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಕಾಯಿಲೆಗಳನ್ನು ಉಂಟಾಗುತ್ತದೆ.

ಏರುತ್ತಿರುವ ವಾಯು ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ (ಎನ್‌ಸಿಆರ್‌) ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು ಸೋಮವಾರದಿಂದ ‘ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್’ ಅಥವಾ GRAPಯ ಹಂತ 4ರ ಅನುಷ್ಠಾನಕ್ಕೆ ಆದೇಶ ನೀಡಿದೆ.

GRAP ಎಂಬುವುದು ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ಕೈಗೊಳ್ಳುವ ಕ್ರಮಗಳ ಒಂದು ಗುಂಪಾಗಿದೆ. ಇದರ ಅನುಷ್ಠಾನದ ಮೂಲಕ ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ ಮಟ್ಟವನ್ನು ಮತಷ್ಟು ಹೆಚ್ಚಾಗದಂತೆ ತಡೆಯಲು ಪ್ರಯತ್ನಿಸಲಾಗುತ್ತದೆ. ಈ ಕ್ರಮಗಳಲ್ಲಿ ಲಾಕ್‌ಡೌನ್‌ನಂತಹ ಕಠಿಣ ಆದೇಶಗಳೂ ಒಳಗೊಂಡಿವೆ.

ಗಾಳಿಯ ಗುಣಮಟ್ಟ ಕಳಪೆಯಾದರೆ, GRAPಯ 1ನೇ ಹಂತವನ್ನು ಜಾರಿಗೆ ತರಲಾಗುತ್ತದೆ. ಅತ್ಯಂತ ಕಳೆಪೆಯಾದರೆ ಮತ್ತು ತೀವ್ರ ಕಳಪೆ ಪ್ಲಸ್ ಆದರೆ, ಎರಡು, ಮೂರು ಮತ್ತು 4ನೇ ಹಂತಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ.

ಅಗತ್ಯ ವಸ್ತುಗಳನ್ನು ಸಾಗಿಸುವ ಮತ್ತು ಶುದ್ಧ ಇಂಧನವನ್ನು ಬಳಸುವ ಟ್ರಕ್‌ಗಳನ್ನು ಹೊರತುಪಡಿಸಿ, ಇತರ ಟ್ರಕ್‌ಗಳ ನಗರ ಪ್ರವೇಶವನ್ನು ದೆಹಲಿ ಸರ್ಕಾರ ತಾತ್ಕಾಲಿಕ ನಿಷೇಧಿಸಿದೆ. ಶಾಲಾ ತರಗತಿಗಳು ಆನ್‌ಲೈನ್‌ ಮೂಲಕ ನಡೆಸುವಂತೆ ಮತ್ತು ಕಚೇರಿಗಳು ಶೇ.50 ಸಾಮಾರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ. ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್‌ ಅವಕಾಶ ನೀಡುವಂತೆ ಸೂಚಿಸಿದೆ.

ಎಲೆಕ್ಟ್ರಿಕ್, ಸಿಎನ್‌ಜಿ ಮತ್ತು ಬಿಎಸ್‌-VI ಹೊರತುಪಡಿಸಿ, ದೆಹಲಿಯ ಹೊರಗಿನ ನೋಂದಣಿ ಹೊಂದಿರುವ
ಅನಿವಾರ್ಯವಲ್ಲದ ಲಘು ವಾಣಿಜ್ಯ ವಾಹನಗಳ ನಗರ ಪ್ರವೇಶವನ್ನೂ ನಿಷೇಧಿಸಲಾಗುವುದು” ಎಂದು ಸರ್ಕಾರ ಹೇಳಿದೆ.

ಮಕ್ಕಳು, ವೃದ್ಧರು ಮತ್ತು ಉಸಿರಾಟ ಅಥವಾ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಲು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಇರಲು ಮನವಿ ಮಾಡಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...