Homeಮುಖಪುಟದೆಹಲಿ ಸ್ಪೋಟ : ಯುಎಪಿಎ, ಸ್ಪೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲು

ದೆಹಲಿ ಸ್ಪೋಟ : ಯುಎಪಿಎ, ಸ್ಪೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲು

- Advertisement -
- Advertisement -

ಒಂಭತ್ತು ಜನರ ಸಾವಿಗೆ ಕಾರಣವಾದ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್‌ಗಳನ್ನು ಕೂಡ ಅನ್ವಯಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ರಾಜಾ ಬಂಥಿಯಾ ತಿಳಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್‌ಜಿ) ದೆಹಲಿ ಪೊಲೀಸರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಂಡಗಳು ಘಟನಾ ಸ್ಥಳದಲ್ಲಿ ತನಿಖೆ ಕೈಗೊಂಡಿವೆ ಎಂದು ಹೇಳಿದ್ದಾರೆ.

ಸ್ಪೋಟ ಸಂಭವಿಸಿದ ಸ್ಥಳದಲ್ಲಿ ಕಾರಿನೊಳಗೆ ಕೆಲವು ದೇಹದ ಭಾಗಗಳು ಕಂಡು ಬಂದಿವೆ. ಎಫ್‌ಎಸ್‌ಎಲ್ ತಂಡ ಅವುಗಳನ್ನು ಸಂಗ್ರಹಿಸಿವೆ. ಅದರ ಮೂಲಕ ಯಾವ ಮಾಹಿತಿಗಳು ಸಿಗಲಿವೆ ಎಂದು ಪರಿಶೀಲಿಸುತ್ತಿದ್ದೇವೆ ಎಂದು ಬಂಥಿಯಾ ಮಾಹಿತಿ ನೀಡಿದ್ದಾರೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂಬರ್ ಒಂದರ ಬಳಿ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣವೇನೆಂದು ಪೊಲೀಸರು ಇನ್ನೂ ತಿಳಿಸಿಲ್ಲ.

ಸೋಮವಾರ (ನ.10) ಸಂಜೆ 6.52ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ತಿಳಿಸಿದ್ದಾರೆ.

“ನಿಧಾನವಾಗಿ ಚಲಿಸುತ್ತಿದ್ದ ಕಾರೊಂದು ರೆಡ್‌ ಸಿಗ್ನಲ್ ಬಿದ್ದಾಗ ನಿಂತಿದೆ. ಈ ವೇಳೆ ಅದರಲ್ಲಿ ಸ್ಪೋಟ ಸಂಭವಿಸಿದೆ. ಪರಿಣಾಮ ಜನರ ಜೀವ ಹೋಗಿದೆ ಮತ್ತು ಗಾಯಗೊಂಡಿದ್ದಾರೆ. ಸುತ್ತಮುತ್ತಲಿನ ವಾಹನಗಳಿಗೆ ಹಾನಿಯಾಗಿದೆ” ಎಂದು ಗೋಲ್ಚಾ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಕೈಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ದೆಹಲಿ ಸ್ಫೋಟದಲ್ಲಿ ಬಳಸಲಾದ ಡಿಟೋನೇಟರ್‌ಗಳು ಫರಿದಾಬಾದ್‌ನ ಭಯೋತ್ಪಾದಕ ಘಟಕದೊಂದಿಗೆ ಸಂಬಂಧ ಹೊಂದಿವೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂಬುವುದಾಗಿ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ಪೊಲೀಸರು 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ ಮಾಡುವ ಮೂಲಕ ಐ20 ಕಾರನ್ನು ಅನ್ನು ಪತ್ತೆಹಚ್ಚಿದ್ದಾರೆ. ಕೆಂಪು ಕೋಟೆ ಬಳಿ ಸ್ಫೋಟಕ್ಕೆ 20 ನಿಮಿಷಗಳ ಮೊದಲು ಮುಸುಕುಧಾರಿ ವ್ಯಕ್ತಿ ಹುಂಡೈ ಐ20 ಕಾರು ಚಲಾಯಿಸುತ್ತಿದ್ದದ್ದು ಕಂಡು ಬಂದಿದೆ ಎಂದು ವರದಿ ಹೇಳಿದೆ.

ಭದ್ರತಾ ಕಾರಣಗಳಿಗಾಗಿ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದೆ. ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಡೆಲ್ಲಿ ಮೆಟ್ರೋ ರೈಲ್ ಕಾರ್ಪೋರೇಶನ್ ತಿಳಿಸಿದೆ. ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಕೆಂಪು ಕೋಟೆಯನ್ನು ಮೂರು ದಿನಗಳ ಕಾಲ ಮುಚ್ಚಲಿದೆ ಎಂದು ವರದಿಗಳು ಹೇಳಿವೆ.

ಕೆಂಪು ಕೋಟೆ ಬಳಿ ಸ್ಫೋಟದ ನಂತರ, ದೆಹಲಿ ಪೊಲೀಸರು ರಾತ್ರಿಯಿಡೀ ಘಟನಾ ಸ್ಥಳದ ಸುತ್ತಮುತ್ತಲಿನ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ಸ್ಪೋಟದ ಬಳಿಕ ಮಹಾರಾಷ್ಟ್ರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಬೈ ಸೇರಿದಂತೆ ಪ್ರಮುಖ ರೈಲು ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...