HomeUncategorizedದೆಹಲಿ: ಶಿಕ್ಷಕನ ಕತ್ತು ಕೊಯ್ದು ಕೊಲೆ ಮಾಡಿದ ವಿದ್ಯಾರ್ಥಿ

ದೆಹಲಿ: ಶಿಕ್ಷಕನ ಕತ್ತು ಕೊಯ್ದು ಕೊಲೆ ಮಾಡಿದ ವಿದ್ಯಾರ್ಥಿ

- Advertisement -
- Advertisement -
ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.
28ರ ಹರೆಯದ ಶಿಕ್ಷಕ ಬಾಲಕನಿಗೆ ನಿತ್ಯ ನಿಂದನೆ ಮಾಡುತ್ತಿದ್ದು, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ನಡೆದ ಮೂರು ದಿನಗಳ ಬಳಿಕ  ಕೊಲೆ ಆರೋಪಿ ವಿದ್ಯಾರ್ಥಿಗೆ ಬಂಧಿಸಲಾಗಿದೆ.
ಆಗಸ್ಟ್ 30 ರಂದು ಮಧ್ಯಾಹ್ನ 2.15 ರ ಸುಮಾರಿಗೆ ಜಾಮಿಯಾ ನಗರದ ಬಟ್ಲಾ ಹೌಸ್‌ನ  ಎರಡನೇ ಮಹಡಿಯ ಕೊಠಡಿಯಲ್ಲಿ ರಕ್ತ ಚೆಲ್ಲಿದೆ ಎಂದು ಕರೆ ಬಂದಿತ್ತು. ಮನೆಯ ಬಾಗಿಲು ತೆರೆದಿತ್ತು. ಪೊಲೀಸ್ ತಂಡವು ತೆರಳಿ ನೋಡಿದಾಗ ಶಿಕ್ಷಕ ಕತ್ತಿನ ಮೇಲೆ ಆಳವಾದ ಗಾಯಗಳೊಂದಿಗೆ ನೆಲದ ಮೇಲೆ ಬಿದ್ದಿದ್ದರು ಎಂದು ಆಗ್ನೇಯ ದೆಹಲಿ ಡಿಸಿಪಿ ರಾಜೇಶ್ ಡಿಯೋ ಹೇಳಿದ್ದಾರೆ.
ಈ ಕುರಿತು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಿಕ್ಷಕನು ಬಾಲಕನ ಜೊತೆ ದೈಹಿಕ ಸಂಬಂಧ ಹೊಂದಿದ್ದ ಎಂದು ಹೇಳಲಾಗುತ್ತಿದೆ.
 ಎರಡು ತಿಂಗಳ ಮೊದಲು ಶಿಕ್ಷಕ ಬಾಲಕನಿಗೆ ಭೇಟಿಯಾಗಿದ್ದ ಆ ಬಳಿಕ ಹಲವು ಬಾರಿ  ಬಾಲಕನಿಗೆ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ  ಎಂದು ಬಾಲಕ ಆರೋಪಿಸಿರುವುದಾಗಿ  ಪೊಲೀಸರು  ಹೇಳಿದ್ದಾರೆ.
ಇದಲ್ಲದೆ ಶಿಕ್ಷಕ ಬಾಲಕನ ಖಾಸಗಿ ವೀಡಿಯೋ ಚಿತ್ರೀಕರಿಸಿ ತನಗೆ ಸಹಕರಿಸದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ನಡೆದ ದಿನದಂದು, ತನ್ನ ಜಾಮಿಯಾ ನಗರದ ಮನೆಯಲ್ಲಿ ತನ್ನನ್ನು ಭೇಟಿಯಾಗಲು ಶಿಕ್ಷಕ ಬಾಲಕನಿಗೆ ಹೇಳಿದ್ದ, ಬಾಲಕ ಅದರಂತೆ ಹರಿತವಾದ ಆಯುಧದೊಂದಿಗೆ  ಅಪಾರ್ಟ್‌ಮೆಂಟ್‌ಗೆ ತೆರಳಿ ಶಿಕ್ಷಕನ ಕತ್ತು ಸೀಳಿ ಪರಾರಿಯಾಗಿದ್ದಾನೆ.

ಇದನ್ನು ಓದಿ: ಉತ್ತರಪ್ರದೇಶ: 65ರ ಹರೆಯದ ವೃದ್ಧನಿಗೆ ಥಳಿಸಿ ಹತ್ಯೆ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...