Homeಮುಖಪುಟ21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 15.3 ಸೆಂ.ಮಿ, ದಾಖಲೆ ಮಳೆ ಸುರಿದ ಪರಿಣಾಮ ಅಕ್ಷರಶಃ ನಲುಗಿಹೋಗಿದೆ. ಕಳೆದ 21 ವರ್ಷಗಳ ಅವಧಿಯಲ್ಲಿ ಭಾರೀ ಮಳೆಯಾಗಿದೆ.

ವರುಣನ ಆರ್ಭಟಕ್ಕೆ ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಅವ್ಯವಸ್ಥೆಯನ್ನು ತಂದಿದೆ. ಹೀಗಾಗಿ ಹವಾಮಾನ ಇಲಾಖೆ ಶನಿವಾರ ಮಧ್ಯಾಹ್ನ ರೆಡ್ ಅಲರ್ಟ್ ನೀಡಿತ್ತು.

ಶನಿವಾರದಂತೆಯೇ, ಭಾನುವಾರ ಬೆಳಗ್ಗೆ ದೆಹಲಿಯು ಮಯೂರ್ ವಿಹಾರ್ ಹಂತ ಸೇರಿದಂತೆ ನಗರದ ಹಲವಾರು ಭಾಗಗಳಲ್ಲಿ ಜನರು ಮಳೆಯಿಂದ ಎಚ್ಚರವಾಗಿದ್ದಾರೆ. ಶನಿವಾರದ ಮಳೆಯನ್ನು ‘ಅತಿ ಭಾರೀ’ ವರ್ಗದಲ್ಲಿ ವರ್ಗೀಕರಿಸಲಾಗಿದೆ. ಶನಿವಾರ ಸಂಚಾರ ವಿಭಾಗಕ್ಕೆ ರಸ್ತೆ ಜಲಾವೃತ ಸಂಬಂಧ 56 ಮರಗಳು ಬಿದ್ದಿರುವ ಕುರಿತು 6 ಹಾಗೂ ಗುಂಡಿಗಳಿಗೆ ಸಂಬಂಧಿಸಿದ 5 ದೂರುಗಳು ಬಂದಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಿಂಟೋ ಸೇತುವೆಯ ಅಂಡರ್‌ಪಾಸ್‌ನಲ್ಲಿ ವಾಹನ ಸಂಚಾರ ಬಂದ್‌ ಆಗಿದ್ದು, ಜಲಾವೃತವಾಗಿದೆ. ತಿಲಕ್ ಬ್ರಿಡ್ಜ್ ಅಂಡರ್‌ಪಾಸ್‌ನಿಂದಲೂ ಭಾರಿ ನೀರು ನಿಂತಿದೆ. ಪಾಂಡವನಗರ ಅಂಡರ್‌ಪಾಸ್, ಪುರಾಣ ಕ್ವಿಲಾ ರಸ್ತೆ, ದ್ವಾರಕಾ ಲಿಂಕ್ ರಸ್ತೆ, ಶಿವಮೂರ್ತಿ ಬಳಿಯ NH-48, ರೋಹ್ಟಕ್ ರಸ್ತೆ, ವಿಕಾಸ್ ಮಾರ್ಗ, ಏಮ್ಸ್ ಮೇಲ್ಸೇತುವೆ ಅಡಿಯಲ್ಲಿ, ಮೂಲ್‌ಚಂದ್ ಮೇಲ್ಸೇತುವೆ ಅಡಿಯಲ್ಲಿ, ಮದರ್ ತೆರೇಸಾ ಕ್ರೆಸೆಂಟ್-ಸರ್ದಾರ್ ಪಟೇಲ್ ಮಾರ್ಗ ಮತ್ತು ತಿಲಕ್ ಅಡಿಯಲ್ಲಿ ನೀರು ನಿಂತಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಜುಲೈನಲ್ಲಿ, ವಾಯುವ್ಯ ಭಾರತದಲ್ಲಿ ಪ್ರಸ್ತುತ ಸಾಮಾನ್ಯ ಮಾನ್ಸೂನ್ ಮಳೆ ದಾಖಲಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. ”ವಾಯುವ್ಯ ಭಾರತದ ಬಹುತೇಕ ಭಾಗಗಳು ಈಗಾಗಲೇ ತಿಂಗಳ ಸಾಮಾನ್ಯ ಮಳೆಯ ಮಾರ್ಕ್ ಅನ್ನು ದಾಟಿವೆ. ಇದೇ ರೀತಿಯ ತೀವ್ರತೆಯ ಮಳೆ ಇನ್ನೂ ಎರಡು ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಕಾಣಿಸುತ್ತಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

1982ರ ನಂತರ ದೆಹಲಿ ಕಂಡ ಅತ್ಯಂತ ದೊಡ್ಡ ಮಳೆ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. 1982ರಲ್ಲಿ 16.9 ಸೆಂ.ಮೀ. ಮಳೆಯಾಗಿತ್ತು. 2003ರ ಜುಲೈ 10ರಂದು 13.34 ಸೆಂ.ಮೀ ಮಳೆಯಾಗಿತ್ತು. 1958ರ ಜುಲೈ 21ರಂದು 26.6 ಸೆಂ.ಮೀ.ನಷ್ಟು ಮಳೆಯಾದ ಕುರಿತು. ಐಎಂಡಿ ಮಾಹಿತಿ ನೀಡಿದೆ.

ಮುಂಗಾರಿಗೆ ಪಶ್ಚಿಮದಲ್ಲಿ ಆಗಿರುವ ಅಡಚಣೆ ಮತ್ತು ಮಾನ್ಸೂನ್ ಗಾಳಿ ಬೀಸಿದ ಪರಿಣಾಮ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದೆ, ದೆಹಲಿಯಲ್ಲಿ ಋತುಮಾನದ ಮೊದಲ ಭಾರೀ ಮಳೆ ಇದಾಗಿದೆ ಎಂದು ಇಲಾಖೆ ತಿಳಿಸಿದೆ.

ದೆಹಲಿಯೊಂದಿಗೆ ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ದಕ್ಷಿಣದಲ್ಲಿ ಕರ್ನಾಟಕ ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...