ದೆಹಲಿ ರೆಡ್ ಪೋರ್ಟ್ ಸ್ಫೋಟ ಪ್ರಕರಣದಲ್ಲಿ ಶಂಕಿತ ಆರೋಪಿಯಾಗಿರುವ ಡಾ. ಉಮರ್ ನಬಿ ಅವರ ಮನೆಯನ್ನು ಧ್ವಂಸ ಮಾಡಲಾಗಿದೆ.
ಸೋಮವಾರ ದೆಹಲಿಯಲ್ಲಿ ಸ್ಫೋಟಗೊಂಡ ಕಾರು ಚಲಾಯಿಸಿದ್ದ ಆರೋಪಿ ಡಾ. ಉಮರ್ ನಬಿ ಅವರ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಭದ್ರತಾ ಪಡೆಗಳು ನೆಲಸಮಗೊಳಿಸಿವೆ.
ಸ್ಫೋಟಕಗಳಿಂದ ತುಂಬಿದ್ದ ಹುಂಡೈ i20 ಕಾರಿನ ಚಕ್ರಗಳ ಹಿಂದೆ ಉಮರ್ ಇದ್ದರು. ಸ್ಫೋಟ ಸ್ಥಳದಿಂದ ಸಂಗ್ರಹಿಸಲಾದ ಡಿಎನ್ಎ ಮಾದರಿಗಳು ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳೊಂದಿಗೆ ಹೊಂದಿಕೆಯಾದ ನಂತರ ಅವರ ಗುರುತು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ.
ಗುರುವಾರ ಮತ್ತು ಶುಕ್ರವಾರದ ಮಧ್ಯರಾತ್ರಿಯಲ್ಲಿ ಜಮ್ಮು-ಕಾಶ್ಮೀರ ಭದ್ರತಾ ಪಡೆಗಳು ಉಮರ್ ನಬಿ ಮನೆಯನ್ನು ಕೆಡುವಲಾಗಿದೆ ಎಂದು ಹೇಳಿದ್ದಾರೆ.
#WATCH | | Delhi terror blast case: The residence of Dr Umar Un Nabi, accused in the Red Fort blast, has been demolished in Pulwama, Jammu and Kashmir. pic.twitter.com/gqvm7iwPBe
— ANI (@ANI) November 14, 2025
ಸೋಮವಾರ ರಾತ್ರಿ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ 13 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರು.
ಶೈಕ್ಷಣಿಕವಾಗಿ ಸಾಧನೆ ಮಾಡಿದ ವೃತ್ತಿಪರ ಎಂದು ತಮ್ಮ ವಲಯದಲ್ಲಿ ಹೆಸರುವಾಸಿಯಾಗಿದ್ದ ಉಮರ್, ಕಳೆದ ಎರಡು ವರ್ಷಗಳಿಂದ ತೀವ್ರಗಾಮಿಯಾಗಿ ಬದಲಾಗಿದ್ದಾರೆ ಎನ್ನಲಾಗಿದೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ತೀವ್ರಗಾಮಿ ಸಂದೇಶ ಕಳುಹಿಸುವ ಗುಂಪುಗಳನ್ನು ಸೇರಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.


