Homeಮುಖಪುಟದೆಹಲಿ ಕಾರ್ ಸ್ಫೋಟ: ಪ್ರಮುಖ ಸಂಚುಕೋರ ಅಮೀರ್ ರಶೀದ್ ಅಲಿ 10 ದಿನ ಎನ್‌ಐಎ ಕಸ್ಟಡಿಗೆ

ದೆಹಲಿ ಕಾರ್ ಸ್ಫೋಟ: ಪ್ರಮುಖ ಸಂಚುಕೋರ ಅಮೀರ್ ರಶೀದ್ ಅಲಿ 10 ದಿನ ಎನ್‌ಐಎ ಕಸ್ಟಡಿಗೆ

- Advertisement -
- Advertisement -

ನವದೆಹಲಿ: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ಎನ್ನಲಾಗುತ್ತಿರುವ ಅಮೀರ್‌ ರಶೀದ್‌ ಅಲಿನನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಒಪ್ಪಿಸಿ, ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ. 

ಪಟಿಯಾಲ ಹೌಸ್ ಕೋರ್ಟ್ ಆವರಣದಲ್ಲಿ ಬಿಗಿ ಭದ್ರತೆಯ ನಡುವೆ ಪ್ರಮುಖ ಆರೋಪಿಯನ್ನು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯದೊಳಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. 

ಜೊತೆಗೆ ನ್ಯಾಯಾಲಯದ ಆವರಣದಲ್ಲಿ ಸಹ ದೆಹಲಿ ಪೊಲೀಸ್ ಹಾಗೂ ಕ್ಷಿಪ್ರ ಕಾರ್ಯಪಡೆ (ಆರ್‌ಎಎಫ್) ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.

ನವೆಂಬರ್ 10ರಂದು ಕೆಂಪು ಕೋಟೆಯ ಸಮೀಪ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ಅಮೀರ್‌ ರಶೀದ್‌ ಅಲಿನನ್ನು ಎನ್‌ಐಎ ಅಧಿಕಾರಿಗಳು ಭಾನುವಾರ (ನ.16) ಬಂಧಿಸಿದ್ದರು.

ಸ್ಫೋಟಕ್ಕೆ ಬಳಸಲಾದ ಕಾರನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ವೈದ್ಯ ಉಮರ್ ನಬಿ ಚಲಾಯಿಸಿದ್ದರು. ಆದರೆ ಸ್ಫೋಟಗೊಂಡ ಹ್ಯುಂಡೈ ಐ20 ಕಾರು ಅಮೀರ್‌ ಹೆಸರಿನಲ್ಲಿ ನೋಂದಣಿಯಾಗಿತ್ತು. ಈತ ಜಮ್ಮು–ಕಾಶ್ಮೀರದ ಪಾಂಪೋರ್‌ನ ಸಂಬೂರಾ ನಿವಾಸಿ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....