Homeಚಳವಳಿದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಾನಿಲ ದಾಳಿ ನಡೆಸಿ ಅವರನ್ನು ಗಡಿಯಲ್ಲಿಯೇ ತಡೆಯುತ್ತಿದ್ದಾರೆ. ಈಗಾಗಲೇ ಹಲವಾರು ರೈತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

ಇಂದು ದೇಶದಾದ್ಯಂತ ರೈತ-ಕಾರ್ಮಿಕ ಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಇದನ್ನು ಎದುರಿಸಲಾಗದೇ ಹರಿಯಾಣ ಸರ್ಕಾರ ತನ್ನೆಲ್ಲಾ ಗಡಿಗಳನ್ನು ಸೀಲ್ ಮಾಡಿಕೊಂಡಿದ್ದು, ರೈತರು ದೆಹಲಿಗೆ ತೆರಳದಂತೆ ತಡೆಯುತ್ತಿದೆ. ಮಧ್ಯಪ್ರದೇಶದಿಂದ ದೆಹಲಿಗೆ ರೈತರೊಂದಿಗೆ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನೂ ಸಹ ಬಂಧಿಸಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ದ ಅಸಮಾಧಾನ ಹೊರಹಾಕಿದ ಶ್ರೀನಿವಾಸ್ ಪ್ರಸಾದ್- ಪಕ್ಷದಲ್ಲಿ ಬಿಕ್ಕಟ್ಟು?

ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ್, ರಾಜಸ್ಥಾನ, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳಿಂದ ಸಾವಿರಾರು ರೈತರು ಕಾರ್ಮಿಕರು ಟ್ರ್ಯಾಕ್ಟರ್‌ ಮೂಲಕ, ಕಾಲ್ನಡಿಗೆಯ ಮೂಲಕ ಮತ್ತು ವಿವಿಧ ವಾಹನಗಳ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಇವರನ್ನು ತಡೆಯುವ ಸಲುವಾಗಿ ಹರಿಯಾಣ ಮತ್ತು ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಪಡೆಯನ್ನು ನೇಮಿಸಲಾಗಿದೆ. ದೆಹಲಿಯ ಗುರುಗ್ರಾಂ ಮತ್ತು ಫರೀದಾಬಾದ್‌ ಗಡಿಗಳಿಗೆ ಸೀಲ್ ಹಾಕಲಾಗಿದೆ. ಕೊರೊನಾ ಸೋಂಕಿನ ಹೆಚ್ಚಳದ ಕಾರಣ ನೀಡಿ ರಾಜಧಾನಿಯಲ್ಲಿ ಯಾವುದೆ ರ್ಯಾಲಿಗಳು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶದ ಮೇರೆಗೆ ಪಂಜಾಬ್ ಮತ್ತು ಹರಿಯಾಣ ಗಡಿಯನ್ನು 2 ದಿನಗಳವರೆಗೆ ಸೀಲ್ ಮಾಡಲಾಗಿದೆ. ನಿನ್ನೆ ರಾತ್ರಿ ಮೆರವಣಿಗೆ ಹೊರಟಿದ್ದ ರೈತರ ಮೇಲೆ ಜಲಫಿರಂಗಿಯನ್ನು ಬಳಸಿ ಅವರನ್ನು ತಡೆಯಲು ಪ್ರಯತ್ನಿಸಿದರು. ಆದರೂ ರೈತರು ತಮ್ಮ ಪ್ರತಿಭಟನೆ ಕೈಬಿಡಲಿಲ್ಲ.


ಇದನ್ನೂ ಓದಿ: ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಪ್ರತಿಭಟನೆ 17 ನೇ ದಿನಕ್ಕೆ; ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಕಡೆಗಣನೆ ಆರೋಪ: ಅಸಮಾಧಾನಗೊಂಡ ಶಶಿ ತರೂರ್, ಕೇರಳ ಕಾಂಗ್ರೆಸ್ ಕಾರ್ಯತಂತ್ರದ ಸಭೆಗೆ ಗೈರಾಗುವ ಸಾಧ್ಯತೆ!

ನವದೆಹಲಿ: ಕೇರಳ ಕಾಂಗ್ರೆಸ್ ಘಟಕದಲ್ಲಿ ಹೊಸ ಬಿಕ್ಕಟ್ಟು ಉಂಟಾಗಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಪಕ್ಷದ ಕಾರ್ಯಕ್ರಮವೊಂದರಲ್ಲಿ ತಮ್ಮನ್ನು ಕಡೆಗಣಿಸಿದ್ದರಿಂದ ಅಸಮಾಧಾನಗೊಂಡಿರುವ ಹಿರಿಯ ಸಂಸದ ಶಶಿ ತರೂರ್, ಚುನಾವಣಾ...

ಒಡಿಶಾ| ಮದುವೆ ಪ್ರಸ್ತಾಪ ತಿರಸ್ಕರಿಸಿದ ಮಹಿಳೆ ಮೇಲೆ ಸೇಡು; ನಕಲಿ ಖಾತೆ ತೆರೆದು ಜಗನ್ನಾಥ ದೇಗುಲ ಸ್ಪೋಟಿಸುವ ಬೆದರಿಕೆ

ಮಹಿಳೆಯ ಹೆಸರಿನಲ್ಲಿ ನಕಲಿ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸಿ ಒಡಿಶಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ...

ಬೈಕ್ ಟ್ಯಾಕ್ಸಿ ನಿಷೇಧ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್, ಪರ್ಮಿಟ್ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಜನವರಿ 23 ರಂದು ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಅನುಮತಿ ನೀಡಿದ್ದು, ಬೈಕ್ ಟ್ಯಾಕ್ಸಿ ಸಂಗ್ರಾಹಕರು, ವೈಯಕ್ತಿಕ ಬೈಕ್ ಟ್ಯಾಕ್ಸಿ ಮಾಲೀಕರು ಮತ್ತು ಇತರರು ಸಲ್ಲಿಸಿದ ಮೇಲ್ಮನವಿಗಳನ್ನು ಅಂಗೀಕರಿಸಿದೆ. ಮುಖ್ಯ...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 22 ಮಂದಿ ಅಸ್ವಸ್ಥ

ಮಧ್ಯಪ್ರದೇಶದ ಇಂದೋರ್‌ನಲ್ಲಿ ಕಲುಷಿತ ನೀರು ಸೇವಿಸಿ ಕನಿಷ್ಠ 22 ಜನರು ಅಸ್ವಸ್ಥರಾಗಿದ್ದಾರೆ. ಕೆಲವೇ ವಾರಗಳ ಹಿಂದೆ ಕಲುಷಿತ ನೀರಿನಿಂದ ಹರಡುವ ರೋಗಗಳಿಂದ ಕನಿಷ್ಠ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಆಸ್ಪತ್ರೆಗೆ ದಾಖಲಾಗಿದ್ದರು....

ರಾಜ್ಯಪಾಲರ ಭಾಷಣ ಪದ್ಧತಿ ಕೊನೆಗೊಳಿಸುವ ಸಮಯ ಬಂದಿದೆ: ಮುಖ್ಯಮಂತ್ರಿ ಸ್ಟಾಲಿನ್

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಹೆಹ್ಲೋಟ್ ಸದನವನ್ನು ಉದ್ದೇಶಿಸಿ ಸಂಪೂರ್ಣ ಸಾಂಪ್ರದಾಯಿಕ ಭಾಷಣವನ್ನು ಓದದೆ ವಿಧಾನಸಭೆಯಿಂದ ನಿರ್ಗಮಿಸಿರುವುದು ಇದೀಗ ರಾಷ್ಟ್ರಮಟ್ಟದ ಗಮನ ಸೆಳೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ...

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...