ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಾನಿಲ ದಾಳಿ ನಡೆಸಿ ಅವರನ್ನು ಗಡಿಯಲ್ಲಿಯೇ ತಡೆಯುತ್ತಿದ್ದಾರೆ. ಈಗಾಗಲೇ ಹಲವಾರು ರೈತರನ್ನು ಬಂಧಿಸಿದ್ದಾರೆ.
#WATCH Police use tear gas shells to disperse farmers who are gathered at Shambhu border, near Ambala (Haryana) to proceed to Delhi to stage a demonstration against the farm laws pic.twitter.com/ER0w4HPg77
— ANI (@ANI) November 26, 2020
ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ
ಇಂದು ದೇಶದಾದ್ಯಂತ ರೈತ-ಕಾರ್ಮಿಕ ಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಇದನ್ನು ಎದುರಿಸಲಾಗದೇ ಹರಿಯಾಣ ಸರ್ಕಾರ ತನ್ನೆಲ್ಲಾ ಗಡಿಗಳನ್ನು ಸೀಲ್ ಮಾಡಿಕೊಂಡಿದ್ದು, ರೈತರು ದೆಹಲಿಗೆ ತೆರಳದಂತೆ ತಡೆಯುತ್ತಿದೆ. ಮಧ್ಯಪ್ರದೇಶದಿಂದ ದೆಹಲಿಗೆ ರೈತರೊಂದಿಗೆ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನೂ ಸಹ ಬಂಧಿಸಲಾಗಿದೆ.
ಇದನ್ನೂ ಓದಿ: ಯಡಿಯೂರಪ್ಪ ವಿರುದ್ದ ಅಸಮಾಧಾನ ಹೊರಹಾಕಿದ ಶ್ರೀನಿವಾಸ್ ಪ್ರಸಾದ್- ಪಕ್ಷದಲ್ಲಿ ಬಿಕ್ಕಟ್ಟು?
ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ್, ರಾಜಸ್ಥಾನ, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳಿಂದ ಸಾವಿರಾರು ರೈತರು ಕಾರ್ಮಿಕರು ಟ್ರ್ಯಾಕ್ಟರ್ ಮೂಲಕ, ಕಾಲ್ನಡಿಗೆಯ ಮೂಲಕ ಮತ್ತು ವಿವಿಧ ವಾಹನಗಳ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಇವರನ್ನು ತಡೆಯುವ ಸಲುವಾಗಿ ಹರಿಯಾಣ ಮತ್ತು ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್ ಪಡೆಯನ್ನು ನೇಮಿಸಲಾಗಿದೆ. ದೆಹಲಿಯ ಗುರುಗ್ರಾಂ ಮತ್ತು ಫರೀದಾಬಾದ್ ಗಡಿಗಳಿಗೆ ಸೀಲ್ ಹಾಕಲಾಗಿದೆ. ಕೊರೊನಾ ಸೋಂಕಿನ ಹೆಚ್ಚಳದ ಕಾರಣ ನೀಡಿ ರಾಜಧಾನಿಯಲ್ಲಿ ಯಾವುದೆ ರ್ಯಾಲಿಗಳು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶದ ಮೇರೆಗೆ ಪಂಜಾಬ್ ಮತ್ತು ಹರಿಯಾಣ ಗಡಿಯನ್ನು 2 ದಿನಗಳವರೆಗೆ ಸೀಲ್ ಮಾಡಲಾಗಿದೆ. ನಿನ್ನೆ ರಾತ್ರಿ ಮೆರವಣಿಗೆ ಹೊರಟಿದ್ದ ರೈತರ ಮೇಲೆ ಜಲಫಿರಂಗಿಯನ್ನು ಬಳಸಿ ಅವರನ್ನು ತಡೆಯಲು ಪ್ರಯತ್ನಿಸಿದರು. ಆದರೂ ರೈತರು ತಮ್ಮ ಪ್ರತಿಭಟನೆ ಕೈಬಿಡಲಿಲ್ಲ.
ಇದನ್ನೂ ಓದಿ: ಟೊಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಪ್ರತಿಭಟನೆ 17 ನೇ ದಿನಕ್ಕೆ; ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ