ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ‘ದೆಹಲಿ ಚಲೋ’ ಪ್ರತಿಭಟನೆಯನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರವು ಫೆಬ್ರವರಿ 18ರ ಭಾನುವಾರವಾದ ಇಂದು ರೈತ ಸಂಘಟನೆಗಳ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲಿದೆ. ತಮ್ಮ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿಗಾಗಿ ರೈತರ ಬೇಡಿಕೆಗಳನ್ನು ಪರಿಹರಿಸಲು ವಿಫಲವಾದ ಕಾರಣ ಹಿಂದಿನ ಸುತ್ತಿನ ಮಾತುಕತೆಗಳು ವಿಫಲವಾಗಿವೆ.
ಈ ನಡುವೆ, ಹರಿಯಾಣದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 19 ರವರೆಗೆ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಲಾಗಿದೆ. ಸರ್ಕಾರವು ಈ ಹಿಂದೆ ಫೆಬ್ರವರಿ 13 ರಿಂದ ಫೆಬ್ರವರಿ 15 ರವರೆಗೆ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸುವುದನ್ನು ವಿಸ್ತರಿಸಿತ್ತು.
ಎಂಎಸ್‌ಪಿಗೆ ಕಾನೂನು ಮಾನ್ಯತೆ ಮತ್ತು ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಒತ್ತಾಯಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ. ಸರ್ದಾರಾ ಸಿಂಗ್ ಜೋಲ್ ಅವರು ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಪ್ರಾಯೋಗಿಕವಲ್ಲ’ ಎಂದು ಹೇಳಿದ್ದಾರೆ.
ಸಮಸ್ಯೆಗಳ ಪರಿಹಾರಕ್ಕಾಗಿ ನಾಲ್ಕನೇ ಸುತ್ತಿನ ಮಾತುಕತೆಗಾಗಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ್ ರೈ ಅವರನ್ನು ಭೇಟಿ ಮಾಡುವ ಒಂದು ದಿನ ಮೊದಲು ರೈತ ಮುಖಂಡರು ಶನಿವಾರ ‘ಚೆಂಡು ಸರ್ಕಾರದ ಅಂಗಳದಲ್ಲಿದೆ’ ಎಂದು ಹೇಳಿದರು.
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದಿಂದ ಕರೆ ನೀಡಲಾದ ಅವರ ‘ದೆಹಲಿ ಚಲೋ’ ಮೆರವಣಿಗೆಯ ಐದನೇ ದಿನದಂದು ರೈತರು ಪಂಜಾಬ್-ಹರಿಯಾಣ ಗಡಿಯ ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲೆ ಬೀಡುಬಿಟ್ಟಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಅವರ ಬೇಡಿಕೆಗಳನ್ನು ಕೇಂದ್ರವು ಒಪ್ಪಿಕೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಕಾರ್ಯಸಾಧುವಲ್ಲ’:
ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ಮತ್ತು ಬೆಲೆ ವ್ಯವಸ್ಥೆ ಸೇರಿದಂತೆ ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ ಸರ್ದಾರಾ ಸಿಂಗ್ ಜೋಲ್ ಅವರು ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು “ಕಾರ್ಯಸಾಧುವಲ್ಲ” ಎಂದು ಹೇಳಿದ್ದಾರೆ.
ಆದರೆ. ರೈತರು ಮಾತ್ರ ಸಾಲ ಮನ್ನಾ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತ್ರಿ ನೀಡುವುದರ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿಗಾಗಿ ಒತ್ತಾಯಿಸಿ ಅವರು ನಡೆಸುತ್ತಿರುವ ಹೋರಾಟ ಭಾನುವಾರ ಆರನೇ ದಿನಕ್ಕೆ ಕಾಲಿಟ್ಟಿದೆ.
ಹೆಚ್ಚಿನ ಸಮಯ ಕೇಳಿದ ಕೇಂದ್ರ:
ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಸರ್ಕಾರ ಸ್ವಲ್ಪ ಸಮಯಾವಕಾಶ ಕೇಳಿದೆ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಮುಖಂಡರು ಭಾನುವಾರ ಹೇಳಿದ್ದಾರೆ.
‘ಶಂಭು ಗಡಿಯಲ್ಲಿ ಇದು ನಮ್ಮ ಆರನೇ ದಿನ, ಇಂದು ನಾವು ಸರ್ಕಾರದ ಜೊತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸುತ್ತಿದ್ದೇವೆ, ಸರ್ಕಾರ ಸ್ವಲ್ಪ ಸಮಯ ಕೇಳಿದೆ ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದೆ. ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ.
ಫೆಬ್ರವರಿ 21 ರಂದು 4 ರಾಜ್ಯಗಳಲ್ಲಿ ಧರಣಿ
ಫೆಬ್ರವರಿ 21 ರಂದು ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ರೈತರು ಧರಣಿ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.
ಇಂದು ನಾಲ್ಕನೇ ಸುತ್ತಿನ ಮಾತುಕತೆ
ರೈತ ಸಂಘದ ಮುಖಂಡರು ಭಾನುವಾರ ಕೇಂದ್ರ ಸಚಿವರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದು, ದೆಹಲಿ ಚಲೋ ಮೆರವಣಿಗೆಯನ್ನು ಅಂತ್ಯಗೊಳಿಸಲು ಕೇಂದ್ರವು ಆಶಿಸುತ್ತಿದೆ. ಆದಾಗ್ಯೂ, ರೈತರು ಎಂಎಸ್‌ಪಿಯ ಕಾನೂನು ಖಾತರಿಗಾಗಿ ತಮ್ಮ ಬೇಡಿಕೆಯನ್ನು ಪ್ರತಿಪಾದಿಸಿದ್ದಾರೆ.
ಇದನ್ನೂ ಓದಿ; ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?


