HomeUncategorized'ದೆಹಲಿ ಚಲೋ' ಪ್ರತಿಭಟನೆ: ಮತ್ತೊಬ್ಬ ರೈತ ಮೃತ್ಯು; 15 ದಿನಗಳಲ್ಲಿ ಆರನೇ ಸಾವು

‘ದೆಹಲಿ ಚಲೋ’ ಪ್ರತಿಭಟನೆ: ಮತ್ತೊಬ್ಬ ರೈತ ಮೃತ್ಯು; 15 ದಿನಗಳಲ್ಲಿ ಆರನೇ ಸಾವು

- Advertisement -
- Advertisement -

ಪಂಜಾಬ್-ಹರಿಯಾಣದ ಖನೌರಿ ಗಡಿಯಲ್ಲಿ ಮತ್ತೋರ್ವ ರೈತ ಸಾವನ್ನಪ್ಪಿದ್ದು, ಈ ಮೂಲಕ ಕಳೆದ 15 ದಿನಗಳಲ್ಲಿ ‘ದೆಹಲಿ ಚಲೋ’ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಒಟ್ಟು ಆರು ಮಂದಿ ರೈತರು ಮೃತಪಟ್ಟಂತಾಗಿದೆ.

ಮೃತ ರೈತನನ್ನು ಕರ್ನೈಲ್ ಸಿಂಗ್ (62) ಎಂದು ಗುರುತಿಸಲಾಗಿದೆ. ಪಂಜಾಬ್‌ನ ಪಟಿಯಾಲದ ಜಿಲ್ಲೆಯ ಪತ್ರಾಣ್ ಬಳಿಯ ಅರ್ನೊ ಖುರ್ದ್ ಗ್ರಾಮದ ನಿವಾಸಿಯಾಗಿರುವ ಇವರು, ಖನೌರಿ ಗಡಿ ಬಳಿ ದೆಹಲಿ ಚಲೋ ಪ್ರತಿಭಟನೆಯಲ್ಲಿ ನಿರತರಾಗಿದ್ದರು. ಈ ವೇಳೆ ಹೃದಯಾಘಾತ ಕಾಣಿಸಿಕೊಂಡಿದೆ. ಕೂಡಲೇ ಪಟಿಯಾಲದ ರಾಜಿಂದರ್ ಸರ್ಕಾರಿ ಆಸ್ಪತ್ರೆಗೆ ದಾಖಲಾಯಿಸಿತಾದರೂ, ಕರ್ನೈಲ್ ಸಿಂಗ್ ಅಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನೈಲ್ ಸಿಂಗ್ ತಮ್ಮ ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಇವರು ಒಂದೂವರೆ ಎಕರೆ ಭೂಮಿ ಹೊಂದಿದ್ದು, ಎಂಟು ಲಕ್ಷ ರೂಪಾಯಿ ಸಾಲಗಾರರಾಗಿದ್ದರು ಎಂದು ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಪ್ರತಿನಿಧಿಗಳು ತಿಳಿಸಿದ್ದಾರೆ.

ಭಾರತೀಯ ಕಿಸಾನ್ ಯೂನಿಯನ್ (ಕ್ರಾಂತಿಕಾರಿ) ಸಂಘಟನೆಯ ಅಧ್ಯಕ್ಷ ಸುರ್ಜೀತ್ ಸಿಂಗ್ ಫೂಲ್ ಪ್ರಕಾರ, ಫೆಬ್ರವರಿ 21ರಂದು ಖನೌರಿ ಗಡಿಯ ಬಳಿ ಪೊಲೀಸರು ಅಶ್ರುವಾಯು ಶೆಲ್ ದಾಳಿ ನಡೆಸಿದ್ದರಿಂದ, ಅಶ್ರುವಾಯು ಶೆಲ್ ಹೊಮ್ಮಿಸಿದ ಹೊಗೆಯನ್ನು ಸೇವಿಸಿ ಕರ್ನೈಲ್ ಸಿಂಗ್ ಶ್ವಾಸಕೋಶದ ಸೋಂಕಿಗೆ ತುತ್ತಾಗಿದ್ದರು ಎಂದು ಹೇಳಲಾಗಿದೆ.

ಫೆಬ್ರವರಿ 21ರಂದು 23 ವರ್ಷದ ಶುಭಕರನ್ ಸಿಂಗ್ ಎಂಬ ಪ್ರತಿಭಟನಾ ನಿರತ ಯುವ ರೈತ ಖನೌರಿ ಗಡಿಯಲ್ಲಿ ಮೃತಪಟ್ಟಿದ್ದು, ಪೊಲೀಸರು ಗುಂಡೇಟು ತಲೆಗೆ ತಗುಲಿದ್ದೇ ಶುಭಕರನ್ ಸಾವಿಗೆ ಕಾರಣ ಎಂದು ರೈತರು ಆರೋಪಿಸಿದ್ದಾರೆ.

ಫೆ.13ರಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರೈತರು ದೆಹಲಿ ಚಲೋ ಹಮ್ಮಿಕೊಂಡಿದ್ದು, ಅವರನ್ನು ಪಂಜಾಬ್-ಹರಿಯಾಣದ ಶಂಭು ಮತ್ತು ಖನೌರಿ ಗಡಿಗಳಲ್ಲಿ ಹರಿಯಾಣ ಪೊಲೀಸರು ತಡೆದಿದ್ದಾರೆ. ಪೊಲೀಸರು ರೈತರ ಮೇಲೆ ದಾಳಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ : ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK: ಜಾತಿ ಗಣತಿ ಕುರಿತ ರಾಹುಲ್ ಗಾಂಧಿಯ ವೈರಲ್ ಕ್ಲಿಪ್ ಎಡಿಟೆಡ್

0
ಸಾಮಾಜಿಕ-ಆರ್ಥಿಕ ಮತ್ತು ಜಾತಿ ಗಣತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಭಾಷಣದ ಕ್ಲಿಪ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ಬಾರಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಬಲ ಪಂಥೀಯ ಎಕ್ಸ್...