HomeUncategorized'ದೆಹಲಿ ಚಲೋ' ಪ್ರತಿಭಟನೆ: ಮಧ್ಯಾಹ್ನ 1 ಗಂಟೆಗೆ ರಾಜಧಾನಿಗೆ ರೈತರ ಪಾದಯಾತ್ರೆ, ಭಾರಿ ಪೊಲೀಸ್ ಭದ್ರತೆ

‘ದೆಹಲಿ ಚಲೋ’ ಪ್ರತಿಭಟನೆ: ಮಧ್ಯಾಹ್ನ 1 ಗಂಟೆಗೆ ರಾಜಧಾನಿಗೆ ರೈತರ ಪಾದಯಾತ್ರೆ, ಭಾರಿ ಪೊಲೀಸ್ ಭದ್ರತೆ

- Advertisement -
- Advertisement -

ಪಂಜಾಬ್ ಮತ್ತು ಹರಿಯಾಣದ ಶಂಭು ಗಡಿ ಪ್ರತಿಭಟನಾ ಸ್ಥಳದಿಂದ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ನೂರಕ್ಕೂ ಹೆಚ್ಚು ರೈತರು ದೆಹಲಿಗೆ ಕಾಲ್ನಡಿಗೆ ಜಾಥಾವನ್ನು ಪ್ರಾರಂಭಿಸಲಿದ್ದಾರೆ. ಬೆಳೆಗಳ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವಂತೆ ಒತ್ತಾಯಿಸಿ ‘ದೆಹಲಿ ಚಲೋ’ ಮೆರವಣಿಗೆ ನಡೆಸಲಾಗುತ್ತಿದೆ.

ದೆಹಲಿ ಚಲೋ ಮೆರವಣಿಗೆಗೆ ಮುಂಚಿತವಾಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ; ಮಧ್ಯಾಹ್ನ 1 ಗಂಟೆಗೆ ಮೆರವಣಿಗೆಗೆ ಮುಂಚಿತವಾಗಿ ಪೊಲೀಸರು ಅಂಬಾಲಾ-ದೆಹಲಿ ಗಡಿಯಲ್ಲಿ ಬ್ಯಾರಿಕೇಡ್ ಮಾಡಿದ್ದಾರೆ. ಹರಿಯಾಣ ಗಡಿ ಭಾಗದಲ್ಲಿ ಭಾರೀ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಅಂಬಾಲಾ ಜಿಲ್ಲಾಡಳಿತವು ಈಗಾಗಲೇ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಸೆಕ್ಷನ್ 163 ರ ಅಡಿಯಲ್ಲಿ ಆದೇಶವನ್ನು ಹೊರಡಿಸಿದೆ. ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ವ್ಯಕ್ತಿಗಳ ಯಾವುದೇ ಕಾನೂನುಬಾಹಿರ ಸಭೆಯನ್ನು ನಿರ್ಬಂಧಿಸುತ್ತದೆ.

ಅಂಬಾಲಾದಲ್ಲಿ ಅಧಿಕಾರಿಗಳು ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲು ಆದೇಶಿಸಿದ್ದಾರೆ. ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶುಕ್ರವಾರ ರಜೆ ಇರಲಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ಅಂಬಲ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಂಭು ಗಡಿ ಬಿಂದು – ರಾಜಪುರ (ಪಂಜಾಬ್)-ಅಂಬಾಲ (ಹರಿಯಾಣ) – ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಬಹುಪದರದ ಬ್ಯಾರಿಕೇಡಿಂಗ್ ಈಗಾಗಲೇ ಜಾರಿಯಲ್ಲಿದೆ. ಶಂಭು ಗಡಿಯಲ್ಲೂ ಜಲಫಿರಂಗಿಗಳನ್ನು ನಿಯೋಜಿಸಲಾಗಿದೆ.

ದೆಹಲಿ ಪೊಲೀಸರು ಮೆರವಣಿಗೆಗೆ ಮುಂಚಿತವಾಗಿ ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. “ದೆಹಲಿ ಪೊಲೀಸರು ಅಲರ್ಟ್ ಆಗಿದ್ದು, ನಗರದ ಗಡಿ ಬಿಂದುಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಸಿಂಘು ಗಡಿಯಲ್ಲಿ ಬ್ಯಾರಿಕೇಡ್ ನಿಯೋಜನೆಯನ್ನು ಮಾಡಲಾಗಿದೆ. ಆದರೆ, ಪಂಜಾಬ್-ಹರಿಯಾಣ ಗಡಿಯಲ್ಲಿರುವ ಶಂಬು ಗಡಿಯಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಇದು ಹೆಚ್ಚಾಗಬಹುದು” ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗಡಿ ಮತ್ತು ದೆಹಲಿಯ ಕೇಂದ್ರ ಭಾಗದಲ್ಲಿ ಭದ್ರತಾ ವ್ಯವಸ್ಥೆಗಳಿಂದಾಗಿ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ರೈತರು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಬ್ಯಾನರ್ ಅಡಿಯಲ್ಲಿ ಒಟ್ಟುಗೂಡಿದರು. ದೆಹಲಿಗೆ ಅವರ ಮೆರವಣಿಗೆಯನ್ನು ಭದ್ರತಾ ಪಡೆಗಳು ತಡೆದ ನಂತರ ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

“ಮೆರವಣಿಗೆ 297ನೇ ದಿನಕ್ಕೆ ಕಾಲಿಟ್ಟಿದ್ದು, ಖಾನೌರಿ ಗಡಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ. ಮಧ್ಯಾಹ್ನ 1 ಗಂಟೆಗೆ 101 ರೈತರ ಜಾಥಾ ಶಂಭು ಗಡಿಯಿಂದ ದೆಹಲಿಯತ್ತ ಸಾಗಲಿದೆ ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಎಂಎಸ್‌ಪಿ ಜೊತೆಗೆ, ರೈತರು ಕೃಷಿ ಸಾಲ ಮನ್ನಾ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ವಿದ್ಯುತ್ ದರದಲ್ಲಿ ಹೆಚ್ಚಳ ಮಾಡಬಾರದು, ಪೊಲೀಸ್ ಪ್ರಕರಣಗಳನ್ನು (ರೈತರ ವಿರುದ್ಧ) ಹಿಂಪಡೆಯಬೇಕು ಮತ್ತು 2021 ರ ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ.

ಭೂ ಸ್ವಾಧೀನ ಕಾಯಿದೆ, 2013 ರ ಮರುಸ್ಥಾಪನೆ ಮತ್ತು 2020-21 ರಲ್ಲಿ ಹಿಂದಿನ ಆಂದೋಲನದ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಕೂಡ ಅವರ ಬೇಡಿಕೆಗಳ ಭಾಗವಾಗಿದೆ.

ಇದನ್ನೂ ಓದಿ; ಉತ್ತರ ಪ್ರದೇಶ ಕಾಂಗ್ರೆಸ್​ಗೆ ಮೇಜರ್ ಸರ್ಜರಿ : ಎಲ್ಲಾ ಘಟಕಗಳ ವಿಸರ್ಜನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...