Homeಮುಖಪುಟ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

- Advertisement -
- Advertisement -

ದೆಹಲಿ ನಾಗರಿಕ ರಕ್ಷಣೆ (ಡಿಸಿಡಿ) ಉದ್ಯೋಗಿಯಾಗಿದ್ದ 21 ವರ್ಷದ ಮುಸ್ಲಿಂ ಯುವತಿಯ ಮೇಲೆ ಭೀಕರವಾಗಿ ಅತ್ಯಾಚಾರವೆಸಗಿ, ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಂತಹ ಬರ್ಬರ ಕೃತ್ಯ ನಡೆಸಿದವರನ್ನು ಕೂಡಲೇ ಬಂಧಿಸಿ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು, ಹೋರಾಟಗಾರರು ಒತ್ತಾಯಿಸಿದ್ದಾರೆ.

ಆಗಸ್ಟ್‌ 26ರಂದು ದೆಹಲಿಯ ಸಂಗಮ್‌ ವಿಹಾರ್‌ನಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, “ಕೆಲಸದ ಸ್ಥಳದಿಂದ ಸಬಿಯಾ (ಹೆಸರು ಬದಲಾಯಿಸಲಾಗಿದೆ) ಅವರನ್ನು ಅಪಹರಿಸಿ, ನಂತರ ಪರಿದಾಬಾದ್‌ಗೆ ಕರೆದೋಯ್ದು, ಅತ್ಯಾಚಾರವೆಸಗಿ ದೇಹವನ್ನು ವಿರೂಪಗೊಳಿಸಲಾಗಿದೆ, ಸ್ತನಗಳನ್ನು ಕತ್ತರಿಸಲಾಗಿದೆ” ಎಂದು ಸಬಿಯಾ ಕುಟುಂಬ ನೋವು ತೋಡಿಕೊಂಡಿತ್ತು.

ಸಬಿಯಾಳ ಇಬ್ಬರು ಸಹೋದ್ಯೋಗಿಗಳು ಪರಾರಿಯಾಗಿದ್ದು, ಈ ಭೀಕರ ಕೃತ್ಯದಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಸಬಿಯಾ ಕುಟುಂಬ, “ಈ ಇಬ್ಬರ ಮೇಲೆ ದೂರು ನೀಡಲು ಸಂಗಮ್‌ ವಿಹಾರ್‌ ಪೊಲೀಸ್‌ ಠಾಣೆಗೆ ಹೋದೆವು. ಆದರೆ ಎನ್‌ಇಪಿ ದೂರ ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ” ಎಂದು ದೂರಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯಕೀಯ ವರದಿ ಕೈಸೇರಬೇಕಿದೆ. ಸಿಬಿಐ ತನಿಖೆ ನಡೆಸುವಂತೆ ಸಬಿಯಾ ಕುಟುಂಬ ಆಗ್ರಹಿಸಿ ಒಂದು ವಾರದಿಂದ ತಮ್ಮ ಮನೆಯ ಮುಂದೆ ಪ್ರತಿಭಟನೆ ನಡೆಸುತ್ತಿದೆ.

ಇದನ್ನೂ ಓದಿ: ದೆಹಲಿ: ನಾಲ್ಕು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ

ಮಾಧ್ಯಮಗಳಲ್ಲಿ ತಡವಾಗಿ ವರದಿಯಾದ ಸಂಬಂಧ ಬೇಸರ ವ್ಯಕ್ತಪಡಿಸಿರುವ ಪ್ರಜ್ಞಾವಂತರು, “ಅತ್ಯಾಚಾರವನ್ನು ಅತ್ಯಾಚಾರವನ್ನಾಗಿ ನೋಡುತ್ತಿಲ್ಲ. ಅಲ್ಪಸಂಖ್ಯಾತ ಸಮುದಾಯದ ಹೆಣ್ಣು ಮಗಳ ಮೇಲೆ ಆದ ಈ ಕೃತ್ಯದ ಕುರಿತು ಮುಖ್ಯವಾಹಿನಿ ಮಾಧ್ಯಮ ಹಾಗೂ ಮೇಲ್ವರ್ಗಗಳು ನಿರ್ಲಕ್ಷ್ಯ ತಾಳಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಬಿಯಾ ಹೆಣ್ಣಲ್ಲವೇ? ಅವಳ ಅತ್ಯಾಚಾರ ಮತ್ತು ಕೊಲೆ ಅಮಾನುಷವಲ್ಲವೇ? ಯೋನಿಯನ್ನು ಸೀಳಿ, ಮೊಲೆ ಕತ್ತರಿಸಿ, ದೇಹದ ಮೇಲೆ 50 ಬಾರಿ ಚಾಕುವಿನಿಂದ ಇರಿದು ಈ ಸಬಿಯ ಎಂಬ ಹೆಣ್ಣನ್ನು ಕೊಲ್ಲಲಾಯಿತು. ಅದೂ ಅವಳನ್ನು ರೇಪ್ ಮಾಡಿದ ಮೇಲೆ. ಇಷ್ಟಕ್ಕೂ ಈಕೆ ಮಾಮೂಲಿ ಹೆಣ್ಣಲ್ಲ, ದೆಹಲಿ ಪೊಲೀಸ್ ಸಿಬ್ಬಂದಿ. ಆದರೆ ಯಾವ ಮುಖ್ಯ ವಾಹಿನಿಯಲ್ಲೂ ಇದರ ಬಗ್ಗೆ ಚರ್ಚೆ ಆಗಲಿಲ್ಲ. ಚರ್ಚೆ ಬಿಡಿ, ಸುದ್ದಿಯೂ ಆಗಲಿಲ್ಲ. ಅವಳ ತಪ್ಪೇನು ಗೊತ್ತಾ? 1. ಅವಳು ಹೆಣ್ಣಾಗಿ ಹುಟ್ಟಿದ್ದು ಮೊದಲ ತಪ್ಪು. ಆ ಕ್ಷಣವೇ ಅವಳು ಅತ್ಯಾಚಾರಕ್ಕೆ ಅರ್ಹಳಾದಳು. 2. ರೇಪ್ ಮತ್ತು ಕೊಲೆ ಆಯ್ತು, ಅದರ ವಿರುದ್ಧ ಕ್ಯಾಂಡಲ್ ಮಾರ್ಚ್, ಪ್ರತಿಭಟನೆ, ಆಕ್ರೋಶ ಹೊರ ಹೊಮ್ಮಲಿಲ್ಲ. ಏಕೆಂದರೆ ಅವಳು ಮೇಲ್ಜಾತಿ ಮನೆಯ ಮಗಳಲ್ಲ. 3. ಕನಿಷ್ಠ ಸುದ್ದಿಯೂ ಆಗಲಿಲ್ಲ, ಏಕೆಂದರೆ ಅವಳು ಪ್ರಬಲ ಜಾತಿಯ ಹೆಣ್ಣು ಕೂಡ ಅಲ್ಲ. 4. ಅವಳು ಮುಸ್ಲಿಂ ಹೆಣ್ಣು, ಈ ಪ್ರಕರಣವನ್ನು ಸಂಪೂರ್ಣ ನಿರ್ಲಕ್ಷಿಸಲು ಇದಕ್ಕಿಂತ ದೊಡ್ಡ ಕಾರಣ ಬೇಕಿರಲಿಲ್ಲ” ಎಂದು ಭಾಗ್ಯನಾರಾಯಣ ಬೊಗ್ಗವರಪು ಎಂಬವರು ಫೇಸ್‌ಬುಕ್‌ ಪೋಸ್ಟ್‌ ಮಾಡಿದ್ದು, ಚಿಂತಕ ಯೋಗೇಶ್‌ ಮಾಸ್ಟರ್ ಅದನ್ನು ಹಂಚಿಕೊಂಡಿದ್ದಾರೆ.

“ಬರೆಯಲು ನಾಚಿಕೆಯಾಗುತ್ತಿದೆ. ಇದು ಸಬಿಯಾ, ಮುಸ್ಲಿಂ ಹುಡುಗಿ. ಸಬಿಯಾ ಮುಸ್ಲಿಂ ಆಗಿರುವುದರಿಂದ ಜನರು ಸುಮ್ಮನಾಗಿದ್ದಾರೆ. ಸಬಿಯಾಗಾಗಿ ನಿಮ್ಮ ಧ್ವನಿಯನ್ನು ಹೆಚ್ಚಿಸಿ. ನಮ್ಮ ಮನೆಯಲ್ಲೂ ಸಹೋದರಿಯರು ಮತ್ತು ಹೆಣ್ಣುಮಕ್ಕಳು ಇದ್ದಾರೆ. ಕೇಂದ್ರ ಸರಕಾರವಾಗಲಿ ಅಥವಾ ಅಲ್ಲಿನ ರಾಜ್ಯವಾಗಲಿ ಮೌನವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳು ಸುರಕ್ಷಿತವಾಗಿಲ್ಲದ ನಾಡಿನಲ್ಲಿ ನಾವಿರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯೇ” ಎಂದು ಸಬೀತ್‌ ಕುಂಬ್ರಾ ಪೋಸ್ಟ್‌ ಮಾಡಿದ್ದಾರೆ.

ಇದೇ ರೀತಿಯಲ್ಲಿ ನೂರಾರು ಸಾಮಾಜಿಕ ಹೋರಾಟಗಾರರು ಅಭಿಪ್ರಾಯ ವ್ಯಕ್ತಪಡಿಸಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಮೈಸೂರು ಅತ್ಯಾಚಾರ ಪ್ರಕರಣ: ಐವರು ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...