Homeಮುಖಪುಟಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ 'ಕಿಂಗ್‌ಪಿನ್‌'...

ಕೇಜ್ರಿವಾಲ್‌ಗೆ ಮಾ.28ರವರೆಗೆ ED ಕಸ್ಟಡಿ: ದೆಹಲಿ ಸಿಎಂನ್ನು ಅಬಕಾರಿ ನೀತಿ ಹಗರಣದ ‘ಕಿಂಗ್‌ಪಿನ್‌’ ಎಂದು ವಾದಿಸಿದ ಜಾರಿ ನಿರ್ದೇಶನಾಲಯ

- Advertisement -
- Advertisement -

ದೆಹಲಿ ಅಬಕಾರಿ ನೀತಿಗೆ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಜಾರಿ ನಿರ್ದೇಶನಾಲಯ ಮಾ.28ರವರೆಗೆ ಕಸ್ಟಡಿ ವಿಧಿಸಿದೆ.

ಮಾರ್ಚ್ 28ರಂದು ಮಧ್ಯಾಹ್ನ 2ಗಂಟೆಗೆ ಕೇಜ್ರಿವಾಲ್ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕು ಎಂದು ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಹೇಳಿದ್ದಾರೆ.

ಪ್ರಕರಣದಲ್ಲಿ 10 ದಿನಗಳ ಕಸ್ಟಡಿಗೆ ಕೋರಿ ಜಾರಿ ನಿರ್ದೇಶನಾಲಯ(ಇಡಿ) ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಾಲಯ ಈ ಆದೇಶ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ, ಮಂತ್ರಿಗಳು, ಎಎಪಿ ನಾಯಕರು ಶಾಮೀಲಾಗಿರುವ ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಕಿಂಗ್‌ ಪಿನ್‌ ಎಂದು ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ ಹೇಳಿದೆ.

ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಹಣ ವರ್ಗಾವಣೆಗೆ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದು ಇಡಿ ಹೇಳಿಕೊಂಡಿದೆ. ವಿಚಾರಣೆಯ ಸಂದರ್ಭದಲ್ಲಿ, ಇಡಿ ಪರ ವಕೀಲರು ಅರವಿಂದ್ ಕೇಜ್ರಿವಾಲ್ ಅವರು ಮಂತ್ರಿಗಳು, ಎಎಪಿ ನಾಯಕರೊಂದಿಗೆ ಶಾಮೀಲಾಗಿ ದೆಹಲಿ ಮದ್ಯ ಹಗರಣವನ್ನು ನಡೆಸಿದ್ದಾರೆ. ಕೇಜ್ರಿವಾಲ್‌ ಪ್ರಕರಣದ ಕಿಂಗ್‌ಪಿನ್ ಮತ್ತು ಪ್ರಮುಖ ಸಂಚುಕೋರ ಎಂದು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

2021-22ರ ಅಬಕಾರಿ ನೀತಿಯನ್ನು ರೂಪಿಸುವ ಪಿತೂರಿಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿಯಾಗಿದ್ದಾರೆ ಎಂದು ಅದು ತನ್ನ ರಿಮಾಂಡ್ ಪೇಪರ್‌ನಲ್ಲಿ ಹೇಳಿಕೊಂಡಿದೆ. ನಿರ್ದಿಷ್ಟ ವ್ಯಕ್ತಿಗಳಿಗೆ ಸಹಾಯ ಮಾಡಲು ಮತ್ತು ಸದರಿ ನೀತಿಯ ಮೂಲಕ ಮದ್ಯದ ಉದ್ಯಮಿಗಳಿಂದ ಕಿಕ್‌ಬ್ಯಾಕ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆಪಾದಿಸಿದೆ.

ಜಾರಿ ನಿರ್ದೇಶನಾಲಯವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು, ವಿಚಾರಣಾ ನ್ಯಾಯಾಲಯದಲ್ಲಿ ಕೇಜ್ರಿವಾಲ್‌ರನ್ನು 10 ದಿನಗಳ ಕಸ್ಟಡಿಗೆ ಕೋರಿದ್ದರು. ಕೇಜ್ರಿವಾಲ್ ಅವರು ಸೌತ್ ಗ್ರೂಪ್ ಮತ್ತು ಮದ್ಯ ಹಗರಣದ ಆರೋಪಿಗಳ ನಡುವೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ್ದಾರೆ. ದೆಹಲಿ ಅಬಕಾರಿ ನೀತಿಯನ್ನು ರೂಪಿಸಲು ಮತ್ತು ಅನುಷ್ಠಾನಗೊಳಿಸಲು ಕೇಜ್ರಿವಾಲ್ ಈ ಗುಂಪಿನಿಂದ ಹಲವಾರು ಕೋಟಿ ರೂಪಾಯಿಗಳನ್ನು ಕಿಕ್‌ಬ್ಯಾಕ್‌ ಆಗಿ ಸ್ವೀಕರಿಸಿದ್ದಾರೆ ಎಂದು ಇಡಿ ಆರೋಪಿಸಿದೆ.

ಪಂಜಾಬ್ ಚುನಾವಣೆಗೂ ಮುನ್ನ ಕೇಜ್ರಿವಾಲ್ ಸೌತ್ ಗುಂಪಿನ ಕೆಲವು ಆರೋಪಿಗಳಿಂದ 100 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು ಎಂದು ಇಡಿ ಹೇಳಿಕೊಂಡಿದೆ. ಎಎಪಿ ವ್ಯಕ್ತಿಯಲ್ಲ, ಆದು ಪಕ್ಷವಾಗಿದೆ. ಆದ್ದರಿಂದ  ಜವಾಬ್ದಾರಿ ಸ್ಥಾನದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಇಡಿ ನ್ಯಾಯಾಲಯದಲ್ಲಿ ಹೇಳಿದೆ.

ಅಪರಾಧದ ಆದಾಯ ಕೇವಲ 100 ಕೋಟಿ ರೂ.ಮಾತ್ರವಲ್ಲ 45 ಕೋಟಿ ರೂ.ಗಳ ಹವಾಲಾ ಜಾಡು ಪತ್ತೆಯಾಗಿದೆ, ಈ ಹಣವನ್ನು ಗೋವಾ ಚುನಾವಣೆಯಲ್ಲಿ ಬಳಸಲಾಗಿದೆ ಎಂದು  ರಾಜು ಹೇಳಿದ್ದಾರೆ.

ಎಎಪಿಯ ಮಾಧ್ಯಮ ಉಸ್ತುವಾರಿಯಾಗಿದ್ದ ವಿಜಯ್ ನಾಯರ್ ಅವರು ದೆಹಲಿ ಸಿಎಂ ಕೇಜ್ರಿವಾಲ್ ಪರ ಕೆಲಸ ಮಾಡುತ್ತಿದ್ದಾರೆ. ನಾಯರ್ ಅವರು ಕೇಜ್ರಿವಾಲ್ ಅವರ ನಿವಾಸದ ಪಕ್ಕದಲ್ಲಿ ವಾಸಿಸುತ್ತಿದ್ದಾರೆ ಮತ್ತು ಎಎಪಿ ಮತ್ತು ‘ಸೌತ್ ಗ್ರೂಪ್’ ನಡುವೆ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದಾರೆ ಎಂದು ಹೇಳಿದೆ.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ರಿಮಾಂಡ್ ಮನವಿಯನ್ನು ವಿರೋಧಿಸಿದರು ಮತ್ತು ಬಂಧನದ ಅಗತ್ಯವನ್ನು ಸಂಸ್ಥೆ ತೋರಿಸಬೇಕಾಗಿದೆ ಎಂದು ಸಲ್ಲಿಸಿದರು. ಬಂಧನಕ್ಕಿರುವ ಶಕ್ತಿ ಮತ್ತು ಬಂಧನದ ಅವಶ್ಯಕತೆ ಎರಡು ವಿಭಿನ್ನ ವಿಷಯಗಳು ಎಂದು ಸಿಂಘ್ವಿ ವಾದಿಸಿದರು. 75 ವರ್ಷಗಳ ಸ್ವಾತಂತ್ರ್ಯದ ಇತಿಹಾಸದಲ್ಲಿ ಹಾಲಿ ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಿರುವುದು ಇದೇ ಮೊದಲು, ಪಕ್ಷದ ನಾಲ್ವರು ನಾಯಕರನ್ನು ಬಂಧಿಸಿರುವುದು ಕೂಡ ಇದೇ ಮೊದಲಾಗಿದೆ. ಇದು ಮೊದಲ ಮತ ಚಲಾವಣೆಯಾಗುವ ಮುನ್ನವೇ ಫಲಿತಾಂಶ ಬಂದಂತಿದೆ ಎಂದು ಸಿಂಘ್ವಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೆ ಕೆಲವೇ ವಾರಗಳ ಬಾಕಿ ಇರುವಾಗ ರಾಷ್ಟ್ರ ರಾಜಧಾನಿಯ ರಾಜಕೀಯದಲ್ಲಿ ಅಚ್ಚರಿ ಬೆಳವಣಿಗೆ  ನಡೆದಿತ್ತು. ಮಾ.21ರಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು (ಇಡಿ) ಬಂಧಿಸಿತ್ತು. ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಮನೀಶ್‌ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಅವರನ್ನು ಬಂಧಿಸಿ ಜೈಲಿನಲ್ಲಿಟ್ಟಿತ್ತು.

ಇದನ್ನು ಓದಿ: ತುಮಕೂರು: ಕಾರಿನಲ್ಲಿ ಬೆಳ್ತಂಗಡಿ ಮೂಲದ ಮೂವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ: ತನಿಖೆ ಚುರುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...