Homeಮುಖಪುಟದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: 13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಹಾಕಿದ ಎಂಸಿಡಿ

- Advertisement -
- Advertisement -

ಕೋಚಿಂಗ್ ಇನ್‌ಸ್ಟಿಟ್ಯೂಟ್‌ನ ನೆಲಮಾಳಿಗೆಯ ಪ್ರವಾಹದಲ್ಲಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎಂಸಿಡಿ) ಹಳೆಯ ರಾಜಿಂದರ್ ನಗರದಲ್ಲಿ ಕನಿಷ್ಠ 13 “ಅಕ್ರಮ” ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿದೆ.

ಶನಿವಾರ ಸಂಜೆ ರಾವು ಅವರ ಐಎಎಸ್ ಸ್ಟಡಿ ಸರ್ಕಲ್‌ನ ನೆಲಮಾಳಿಗೆಯಲ್ಲಿ ಇದ್ದಕ್ಕಿದ್ದಂತೆ ನೀರು ನುಗ್ಗಿ ಮೂವರು ವಿದ್ಯಾರ್ಥಿಗಳಾದ ತಾನಿಯಾ ಸೋನಿ, ಶ್ರೇಯಾ ಯಾದವ್ ಮತ್ತು ನವೀನ್ ಡೆಲ್ವಿನ್ ಸಾವನ್ನಪ್ಪಿದ ನಂತರ ಸ್ಥಳೀಯ ಆಡಳಿತದ ಕ್ರಮವು ಭಾನುವಾರ ತಡರಾತ್ರಿಯವರೆಗೆ ಮುಂದುವರೆಯಿತು.

ಸೀಲ್ ಮಾಡಲಾದ ಕೋಚಿಂಗ್ ಸೆಂಟರ್‌ಗಳಲ್ಲಿ ಐಎಎಸ್ ಗುರುಕುಲ, ಚಾಹಲ್ ಅಕಾಡೆಮಿ, ಪ್ಲುಟಸ್ ಅಕಾಡೆಮಿ, ಸಾಯಿ ಟ್ರೇಡಿಂಗ್, ಐಎಎಸ್ ಸೇತು, ಟಾಪರ್ಸ್ ಅಕಾಡೆಮಿ, ದೈನಿಕ್ ಸಂವಾದ್, ಸಿವಿಲ್ಸ್ ಡೈಲಿ ಐಎಎಸ್, ಕೆರಿಯರ್ ಪವರ್, ವಿದ್ಯಾ ಗುರು, ಗೈಡೆನ್ಸ್ ಐಎಎಸ್ ಅಕಾಡೆಮಗಳು ಸೇರಿವೆ.

“ಈ ಕೋಚಿಂಗ್ ಸೆಂಟರ್‌ಗಳು ನಿಯಮಗಳನ್ನು ಉಲ್ಲಂಘಿಸಿ ನೆಲಮಾಳಿಗೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡುಬಂದಿದೆ; ಅವುಗಳನ್ನು ಸ್ಥಳದಲ್ಲೇ ಸೀಲ್ ಮಾಡಿ ನೋಟಿಸ್‌ಗಳನ್ನು ಅಂಟಿಸಲಾಗಿದೆ” ಎಂದು ಎಂಸಿಡಿ ಮೇಯರ್ ಶೈಲಿ ಒಬೆರಾಯ್ ಆದೇಶದಲ್ಲಿ ತಿಳಿಸಿದ್ದಾರೆ.

ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಅನ್ನು ಈಗಾಗಲೇ ಪೊಲೀಸರು ಸೀಲ್ ಮಾಡಿದ್ದಾರೆ. ಅದರ ಮಾಲೀಕರು ಮತ್ತು ಕೇಂದ್ರದ ಸಂಯೋಜಕರನ್ನು ಬಂಧಿಸಿ ಅಪರಾಧಿ ನರಹತ್ಯೆಯ ಆರೋಪ ಹೊರಿಸಿದ್ದಾರೆ.

ದೆಹಲಿ ಕೋಚಿಂಗ್ ಸೆಂಟರ್ ಸಾವುಗಳು

ಮೃತ ತಾನಿಯಾ ಸೋನಿ, ಶ್ರೇಯಾ ಯಾದವ್ ಇಬ್ಬರೂ 25 ವರ್ಷ ವಯಸ್ಸಿನವರು ಮತ್ತು ನೆವಿನ್ ಡೆಲ್ವಿನ್ 28 ವಯಸ್ಸಿನವರು. ಇನ್ನೂ ಹಲವಾರು ವಿದ್ಯಾರ್ಥಿಗಳು ಜಲಾವೃತಗೊಂಡ ನೆಲಮಾಳಿಗೆಯಲ್ಲಿ ಸಿಲುಕಿಕೊಂಡಿದ್ದರು ಮತ್ತು ಏಳು ಗಂಟೆಗಳ ಕಾರ್ಯಾಚರಣೆಯ ನಂತರ ಅವರನ್ನು ರಕ್ಷಿಸಲಾಯಿತು.

ತೆಲಂಗಾಣದಿಂದ ಬಂದಿರುವ ತಾನ್ಯಾ ಅವರು ಬಿಹಾರದ ಔರಂಗಾಬಾದ್‌ನವರು ಮತ್ತು ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಎಂದು ವರದಿಗಳು ತಿಳಿಸಿವೆ. ದೆಹಲಿ ವಿಶ್ವವಿದ್ಯಾನಿಲಯದ ಮಹಾರಾಜ ಅಗ್ರಸೇನ್ ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ತಂಗಿದ್ದ ಅವರು ಒಂದೂವರೆ ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು.

ಶ್ರೇಯಾ ಯಾದವ್ ಉತ್ತರ ಪ್ರದೇಶದ ಅಂಬೇಡ್ಕರ್ ನಗರದವರು. ಅವರು ಮೊದಲು ಪಶ್ಚಿಮ ದೆಹಲಿಯ ಶಾದಿಪುರ ಪ್ರದೇಶದ ಪಿಜಿ ಹಾಸ್ಟೆಲ್‌ನಲ್ಲಿ ಉಳಿದುಕೊಳ್ಳುತ್ತಿದ್ದರು ಮತ್ತು ಎರಡು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಪ್ರವೇಶ ಪಡೆದಿದ್ದರು. ಉತ್ತರ ಪ್ರದೇಶದ ಕಾಲೇಜೊಂದರಲ್ಲಿ ಕೃಷಿಯಲ್ಲಿ ಬಿಎಸ್ಸಿ ಮಾಡಿದ್ದಳು.

ಕೇರಳದ ಎರ್ನಾಕುಲಂನ ನೆವಿನ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ಕಲೆ ಮತ್ತು ಸೌಂದರ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆಯುತ್ತಿದ್ದರು. ಎಂಟು ತಿಂಗಳ ಹಿಂದೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗೆ ಸೇರಿದ್ದ ಅವರು ವಸಂತ್ ಕುಂಜ್ ಪ್ರದೇಶದ ವಿಶ್ವವಿದ್ಯಾಲಯದ ಬಳಿ ಬಾಡಿಗೆಗೆ ವಾಸವಾಗಿದ್ದರು.

ಇದುವರೆಗಿನ ತನಿಖೆಗಳು ಕೋಚಿಂಗ್ ಸೆಂಟರ್‌ನ ಮಾಲೀಕರು ಮತ್ತು ನಾಗರಿಕ ಅಧಿಕಾರಿಗಳ ಕಡೆಯಿಂದ ಅನೇಕ ಲೋಪಗಳನ್ನು ಸೂಚಿಸಿವೆ. ರಾವ್ ಅವರ ಐಎಎಸ್ ಸ್ಟಡಿ ಸರ್ಕಲ್ ಕೇಂದ್ರವು 2021 ರ ಆಗಸ್ಟ್‌ನಲ್ಲಿ ದೆಹಲಿಯ ಮುನ್ಸಿಪಲ್ ಕಾರ್ಪೊರೇಶನ್‌ನಿಂದ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ನೆಲಮಾಳಿಗೆಯು ಪಾರ್ಕಿಂಗ್ ಬಳಕೆ ಮತ್ತು ಸಂಗ್ರಹಣೆಗಾಗಿ ಎಂದು ಒತ್ತಿಹೇಳುತ್ತದೆ.

ಇದನ್ನೂ ಓದಿ; ದೆಹಲಿ ಕೋಚಿಂಗ್ ಸೆಂಟರ್ ಸಾವು ಪ್ರಕರಣ: ಮೃತ ನೆವಿನ್ ಡಾಲ್ವಿನ್ ಜೆಎನ್‌ಯು ಸಂಶೋಧನಾ ವಿದ್ಯಾರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...