HomeUncategorizedದೆಹಲಿ: ಪ್ರತಿಭಟನೆ ವೇಳೆ ಮಹಿಳೆಯಿಂದ ಪ್ಯಾಲೆಸ್ತೀನ್ ಧ್ವಜ ಕಿತ್ತುಕೊಂಡು ಹರಿದು ಹಾಕಿದ ಪೊಲೀಸ್‌ ಅಧಿಕಾರಿ

ದೆಹಲಿ: ಪ್ರತಿಭಟನೆ ವೇಳೆ ಮಹಿಳೆಯಿಂದ ಪ್ಯಾಲೆಸ್ತೀನ್ ಧ್ವಜ ಕಿತ್ತುಕೊಂಡು ಹರಿದು ಹಾಕಿದ ಪೊಲೀಸ್‌ ಅಧಿಕಾರಿ

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್‌ ದಾಳಿಯನ್ನು ಖಂಡಿಸಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದ ಮಹಿಳೆಯ ಕೈಯಿಂದ ಪ್ಯಾಲೆಸ್ತೀನ್ ಧ್ವಜವನ್ನು  ಕಿತ್ತುಕೊಂಡು ದೆಹಲಿ ಪೊಲೀಸ್ ಸಿಬ್ಬಂದಿ ಹರಿದು ಹಾಕಿರುವ ವಿಡಿಯೋ ಸಾಮಾಜಿಕ ಮಾದ್ಯಮದಲ್ಲಿ ವೈರಲ್ ಆಗಿದೆ.

ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ದಾಳಿಯನ್ನು ಪ್ರತಿಭಟಿಸಲು ಮತ್ತು ಪ್ಯಾಲೆಸ್ತೀನ್‌ಗೆ ಬೆಂಬಲವಾಗಿ ಹಲವಾರು ವಿದ್ಯಾರ್ಥಿಗಳು ಮತ್ತು ನಾಗರಿಕರು ಶುಕ್ರವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು.

ಪ್ರತಿಭಟನೆಯ ಸ್ಥಳದಿಂದ 50ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪೊಲೀಸರು ಕರೆದೊಯ್ಯುತ್ತಿದ್ದಾಗ ಮಹಿಳಾ ಪ್ರತಿಭಟನಾಕಾರರು ಪ್ಯಾಲೆಸ್ತೀನ್ ಕಾಗದದ ಧ್ವಜವನ್ನು ಹಿಡಿದುಕೊಂಡಿದ್ದರು. ಈ ವೇಳೆ ಪ್ರತಿಭಟನಾ ನಿರತ ಮಹಿಳೆಯಿಂದ ಪ್ಯಾಲೆಸ್ತೀನ್ ಕಾಗದದ ಧ್ವಜವನ್ನು ಕಿತ್ತುಕೊಂಡ ಪುರುಷ ಪೊಲೀಸ್‌ ಸಿಬ್ಬಂದಿಯೋರ್ವರು ಪ್ಯಾಲೆಸ್ತೀನ್ ಧ್ವಜವನ್ನು ಹರಿದು ಹಾಕಿದ್ದಾರೆ.

ಶುಕ್ರವಾರ ಜಂತರ್ ಮಂತರ್‌ನಲ್ಲಿ ಪ್ಯಾಲೆಸ್ತೀನ್ ಪರ ಪ್ರತಿಭಟನೆಗಾಗಿ ಒಟ್ಟುಗೂಡಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ನಾಗರಿಕರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರು ಪ್ರತ್ಯೇಕ ಗುಂಪುಗಳಲ್ಲಿ ಜಂತರ್ ಮಂತರ್‌ಗೆ ಆಗಮಿಸಿದ್ದರು ಮತ್ತು ನಂತರ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಕಾರಣ ಅವರನ್ನು ಬಂಧಿಸಲಾಯಿತು. ಅವರನ್ನು ದೆಹಲಿಯ ವಿವಿಧ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು  ಹೇಳಿದ್ದಾರೆ.

ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಪರ ಘೋಷಣೆಗಳನ್ನು ಕೂಗಿದ್ದು, ತಕ್ಷಣವೇ ಕದನ ವಿರಾಮಕ್ಕೆ ಒತ್ತಾಯಿಸಿದ್ದಾರೆ.

ಇದನ್ನು ಓದಿ: ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಪೊಲೀಸ್‌ ಅಧಿಕಾರಿಯ ಹತ್ಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...