Homeಮುಖಪುಟಮಾನನಷ್ಟ ಮೊಕದ್ದಮೆ ಪ್ರಕರಣ: ಮೇಧಾ ಪಾಟ್ಕರ್ ದೋಷಿ ಎಂದ ದೆಹಲಿ ಕೋರ್ಟ್

ಮಾನನಷ್ಟ ಮೊಕದ್ದಮೆ ಪ್ರಕರಣ: ಮೇಧಾ ಪಾಟ್ಕರ್ ದೋಷಿ ಎಂದ ದೆಹಲಿ ಕೋರ್ಟ್

- Advertisement -
- Advertisement -

ಪ್ರಸ್ತುತ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿರುವ ವಿನಯ್ ಕುಮಾರ್ ಸಕ್ಸೇನಾ 2001ರಲ್ಲಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ನರ್ಮದಾ ಬಚಾವೋ ಆಂದೋಲನದ ನಾಯಕಿ ಮತ್ತು ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರು ದೋಷಿ ಎಂದು ದೆಹಲಿಯ ನ್ಯಾಯಾಲಯ ತೀರ್ಪು ನೀಡಿದೆ.

ಸಾಕೇತ್ ನ್ಯಾಯಾಲಯದ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ರಾಘವ್ ಶರ್ಮಾ ಅವರು ಭಾರತೀಯ ದಂಡ ಸಂಹಿತೆ 1860ರ ಸೆಕ್ಷನ್ 500ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟದ ಅಪರಾಧಕ್ಕಾಗಿ ಪಾಟ್ಕರ್ ಅವರನ್ನು ದೋಷಿ ಘೋಷಿಸಿದ್ದಾರೆ.

2001ರಲ್ಲಿ ಸಕ್ಸೇನಾ ಪಾಟ್ಕರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು.

ನವೆಂಬರ್ 25, 2000ದಲ್ಲಿ “ದೇಶಭಕ್ತನ ನಿಜವಾದ ಮುಖ” ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟನೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.

“ಹವಾಲಾ ವಹಿವಾಟಿನಲ್ಲಿ ಮುಳುಗಿರುವ ವಿಕೆ ಸಕ್ಸೇನಾ, ಸ್ವತಃ ಮಾಲೆಗಾಂವ್‌ಗೆ ಬಂದು ಎನ್‌ಬಿಎಯನ್ನು ಹೊಗಳಿ ರೂ. 40,000ರ ಚೆಕ್‌ ಅನ್ನು ನೀಡಿದ್ದಾರೆ. ಲೋಕ ಸಮಿತಿಯು ತ್ವರಿತವಾಗಿ ರಸೀದಿ ಮತ್ತು ಪತ್ರವನ್ನು ಕಳುಹಿಸಿದೆ. ಅದು ಪ್ರಾಮಾಣಿಕತೆ ಮತ್ತು ಉತ್ತಮ ದಾಖಲೆ ಇಟ್ಟುಕೊಳ್ಳುವುದನ್ನು ತೋರಿಸುತ್ತದೆ. ಆದರೆ, ಚೆಕ್ ನಗದೀಕರಿಸಿಲ್ಲ, ಬೌನ್ಸ್ ಆಗಿದೆ. ವಿಚಾರಣೆಯಲ್ಲಿ, ಖಾತೆಯು ಅಸ್ತಿತ್ವದಲ್ಲಿಲ್ಲ ಎಂದು ಬ್ಯಾಂಕ್ ವರದಿ ಮಾಡಿದೆ” ಎಂದು ಪಾಟ್ಕರ್ ತಮ್ಮ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದರು.

ಪಾಟ್ಕರ್ ಅವರ ಪ್ರಕಟಣೆ ದುರುದ್ದೇಶಪೂರಿತವಾಗಿದ್ದು, ಸಕ್ಸೇನಾ ಅವರ ಒಳ್ಳೆಯ ಹೆಸರನ್ನು ಹಾಳುಮಾಡುವ ಗುರಿಯನ್ನು ಹೊಂದಿತ್ತು. ಇದರಿಂದ ಅವರ ಸ್ಥಾನಮಾನ ಮತ್ತು ಕ್ರೆಡಿಟ್‌ಗೆ ಗಣನೀಯ ಹಾನಿಯುಂಟಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

“ಆರೋಪಿಯ ಹೇಳಿಕೆಗಳು ದೂರುದಾರರನ್ನು ಹೇಡಿ, ದೇಶಪ್ರೇಮಿ ಅಲ್ಲ ಮತ್ತು ಹವಾಲಾ ವಹಿವಾಟುಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದಿದೆ. ಇದು ಮಾನಹಾನಿಕರ ಮಾತ್ರವಲ್ಲದೆ, ದೂರದಾರರ ಬಗ್ಗೆ ನಕಾರಾತ್ಮಕ ಭಾವನೆ ಹುಟ್ಟಿಸುತ್ತದೆ” ಎಂದಿದ್ದಾರೆ.

ಮೇ 30ರಂದು ಮುಂದಿನ ವಿಚಾರಣೆ ನಿಗದಿಪಡಿಸಲಾಗಿದ್ದು, ಅಂದು ನ್ಯಾಯಾಲಯ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದೆ.

ಇದನ್ನೂ ಓದಿ : ಶೇ.0.04ರಷ್ಟಿರುವ ಕುಬೇರರಿಗೆ ಸಂಪತ್ತು ತೆರಿಗೆ ವಿಧಿಸುವ ಮೂಲಕ ಭಾರತದಲ್ಲಿ ಆರ್ಥಿಕ ಅಸಮಾನತೆ ನಿವಾರಿಸಬಹುದು: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...