Homeಮುಖಪುಟಅಬಕಾರಿ ನೀತಿ ಪ್ರಕರಣ: ಸಂಜಯ್ ಸಿಂಗ್ ಇಡಿ ಕಸ್ಟಡಿ ಅವಧಿ ಅ. 13 ರವರೆಗೆ ವಿಸ್ತರಣೆ

ಅಬಕಾರಿ ನೀತಿ ಪ್ರಕರಣ: ಸಂಜಯ್ ಸಿಂಗ್ ಇಡಿ ಕಸ್ಟಡಿ ಅವಧಿ ಅ. 13 ರವರೆಗೆ ವಿಸ್ತರಣೆ

- Advertisement -
- Advertisement -

ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರಿಗೆ ಅಕ್ಟೋಬರ್ 13 ರವರೆಗೆ ಇಡಿ (ಜಾರಿ ನಿರ್ದೇಶನಾಲಯ) ಕಸ್ಟಡಿಯನ್ನು ವಿಸ್ತರಿಸಿದೆ.

ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಮನಿ ಲಾಂಡರಿಂಗ್ ತನಿಖೆಯ ಭಾಗವಾಗಿ ನಂತರ ಅಕ್ಟೋಬರ್ 4ರಂದು ಸಿಂಗ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಸಿಂಗ್ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿ ಇಡಿ ಕಸ್ಟಡಿ ಅವಧಿಯನ್ನು ಐದು ದಿನಗಳ ಕಾಲ ವಿಸ್ತರಿಸುವಂತೆ ಕೋರಿತ್ತು.

ಈಗ ರದ್ದಾದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿ ಸಂಜಯ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ತನ್ನ ಇಡಿ ಚಾರ್ಜ್‌ಶೀಟ್‌ನಲ್ಲಿ ಹೇಳಿಕೊಂಡಿದೆ. ಈ ನೀತಿಯ ಲಾಭವನ್ನು ಮದ್ಯ ತಯಾರಕರು, ಸಗಟು ವ್ಯಾಪಾರಿಗಳು ಮತ್ತು ಚಿಲ್ಲರೆ ವ್ಯಾಪಾರಿಗಳು ಸ್ವೀಕರಿಸಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ನಂತರ ಈ ಪ್ರಕರಣದಲ್ಲಿ ಸಿಂಗ್ ಅವರನ್ನು ಬಂಧಿಸಲಾಗಿದೆ.

ರೆಸ್ಟೋರೆಂಟ್ ಮಾಲೀಕ ದಿನೇಶ್ ಅರೋರಾ ಸಿಂಗ್ ಮತ್ತು ಸಿಸೋಡಿಯಾ ಇಬ್ಬರಿಗೂ ಆಪ್ತರಾಗಿದ್ದರು ಎಂದು ಇಡಿ ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಜುಲೈನಲ್ಲಿ, ಅರೋರಾ ಅವರನ್ನು ಇಡಿ ಬಂಧಿಸಿತು, ಅವರು ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದರು.

2020ರಲ್ಲಿ ಎಎಪಿ ಸಂಸದರು ಅರೋರಾ ಅವರಿಗೆ ಕಡೆ ಮಾಡಿ, ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ ಮತ್ತು ಎಎಪಿಗೆ ಹಣದ ಅವಶ್ಯಕತೆ ಇದೆ ಎಂದು ಹೇಳಿದ್ದಾರೆಂದು ಇಡಿ ಆರೋಪಿಸಿದೆ.

ಇದನ್ನೂ ಓದಿ: ಸಂಜಯ್ ಸಿಂಗ್ ಬಂಧನ: ಬಿಜೆಪಿ ಕಚೇರಿ ಹೊರಗೆ ಎಎಪಿ ಪ್ರತಿಭಟನೆ; ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮುಸ್ಲಿಮರ ಬಗ್ಗೆ ಅವಹೇಳನಾಕಾರಿಯಾಗಿ ಅನಿಮೇಟೆಡ್ ವೀಡಿಯೊ ಹಂಚಿಕೊಂಡ ಬಿಜೆಪಿ: ತರಾಟೆಗೆ ತೆಗದುಕೊಂಡ ಎಕ್ಸ್‌ ಬಳಕೆದಾರರು

0
ಮುಸ್ಲಿಮರ ಬಗ್ಗೆ ಕೆಟ್ಟದಾಗಿ ಬಿಂಬಿಸುವ ಅನಿಮೇಟೆಡ್ ವೀಡಿಯೊವೊಂದನ್ನು ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಎಚ್ಚರ..ಎಚ್ಚರ..ಎಚ್ಚರ.. ಎಂಬ ತಲೆ ಬರಹದಲ್ಲಿ ಬಿಜೆಪಿ ವಿಡಿಯೋವನ್ನು ಹಂಚಿಕೊಂಡಿದ್ದು, ಇದರಲ್ಲಿ ರಾಹುಲ್‌...