ನವ ದೆಹಲಿಯ ಜಾಮಿಯಾ ಪ್ರದೇಶದಲ್ಲಿ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್ ಇಮಾಮ್ ವಿರುದ್ಧ ದೆಹಲಿ ನ್ಯಾಯಾಲಯವು ದೇಶದ್ರೋಹದ ಆರೋಪವನ್ನು ಹೊರಿಸಿದೆ.
ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣ ಸೇರಿದಂತೆ ಹಲವು ಪ್ರಕರಣಗಳ ಅಡಿಯಲ್ಲಿ ಇಮಾಮ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜನವರಿ 16, 2020 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಅವರು ಮಾಡಿದ ಭಾಷಣಕ್ಕಾಗಿ, ಅಸ್ಸಾಂ, ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ನವದೆಹಲಿ, ಮಣಿಪುರ ರಾಜ್ಯಗಳು ದೇಶದ್ರೋಹದ ಪ್ರಕರಣವನ್ನು ದಾಖಲಿಸಿದ್ದರು ಮತ್ತು ಅವರನ್ನು ಬಿಹಾರದಿಂದ ಬಂಧಿಸಲಾಗಿತ್ತು.
ಇದನ್ನೂ ಓದಿ:ದೆಹಲಿ ಗಲಭೆ: ಸುಳ್ಳು ಸುದ್ದಿ ಬಿತ್ತರಿಸಿದ್ದ ಟೈಮ್ಸ್ ನೌ, ವಿಡಿಯೋ ಡಿಲೀಟ್ ಮಾಡಲು ಸೂಚನೆ
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124A (ದೇಶದ್ರೋಹ), 153A (ಧರ್ಮ, ಜನಾಂಗದ ದ್ವೇಷದ ಕಾರಣಗಳನ್ನು ಉತ್ತೇಜಿಸುವುದು), 153B (ಶಾಂತಿ ಭಂಗವನ್ನು ಪ್ರಚೋದಿಸುವ ಹೇಳಿಕೆಗಳನ್ನು ನೀಡುವುದು) ಮತ್ತು 505 (2) ಮತ್ತು ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳಿಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಶಾರ್ಜಿಲ್ ತನ್ನ ಭಾಷಣದಲ್ಲಿ, “ಭಾರತದಿಂದ ಅಸ್ಸಾಂ ಅನ್ನು ಕತ್ತರಿಸುವಂತೆ” ಹೇಳಿದ್ದಾರೆಂದು ಆರೋಪಿಸಲಾಗಿದೆ. ಈ ಹೇಳಿಕೆಯು ಪ್ರತ್ಯೇಕತಾವಾದಿ ಹೇಳಿಕೆ ಎಂಬ ಆರೋಪಕ್ಕೆ ಉತ್ತರಿಸಿರುವ ಅವರು, “ವಾಹನಗಳನ್ನು ತಡೆದು ಅಸ್ಸಾಂಗೆ ಹೋಗುವ ರಸ್ತೆಗಳನ್ನು ನಿರ್ಬಂಧಿಸಲು ಶಾಂತಿಯುತ ಪ್ರತಿಭಟನೆಗಳಿಗೆ ತಾನು ಕರೆ ನೀಡಿದ್ದೇನೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸುಳ್ಳು ಸಾಕ್ಷಿಗಳನ್ನು ಸೃಷ್ಟಿಸಲಾಗಿದೆ: ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್
ಈ ಪ್ರಕರಣದಲ್ಲಿ ಶಾರ್ಜಿಲ್ ಅವರಿಗೆ ನವೆಂಬರ್‌ನಲ್ಲಿ ಜಾಮೀನು ಸಿಕ್ಕಿತ್ತು, ಆದರೆ ದೆಹಲಿ ಗಲಭೆಗಳ ಪಿತೂರಿ ಪ್ರಕರಣ ಮತ್ತು ಜಾಮಿಯಾ ಪ್ರತಿಭಟನೆಯ ಹಿಂಸಾಚಾರ ಪ್ರಕರಣದಲ್ಲಿ ಕೂಡ ಅವರು ಆರೋಪಿಯಾಗಿರುವುದರಿಂದ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಕಳೆದ ವರ್ಷದ ಫೆಬ್ರವರಿಯಲ್ಲಿ ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಅವರು ಪಿತೂರಿ ಇತ್ತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಗಲಭೆಯಲ್ಲಿ 53 ಜನರು ಕೊಲ್ಲಲ್ಪಟ್ಟಿದ್ದು, ಮೃತಪಟ್ಟವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.
ಇದನ್ನೂ ಓದಿ:ದೆಹಲಿ ಗಲಭೆ: ಒಂದೇ ಘಟನೆ ಬಗ್ಗೆ ದಾಖಲಾದ ನಾಲ್ಕು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ ಹೈಕೋರ್ಟ್