Homeಮುಖಪುಟ3 ವರ್ಷಗಳ ಅವಧಿಗೆ 'ಸಾಮಾನ್ಯ ಪಾಸ್‌ಪೋರ್ಟ್' ಪಡೆಯಲು ರಾಹುಲ್ ಗಾಂಧಿಗೆ ಎನ್‌ಒಸಿ ನೀಡಿದ ದೆಹಲಿ ಕೋರ್ಟ್

3 ವರ್ಷಗಳ ಅವಧಿಗೆ ‘ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ರಾಹುಲ್ ಗಾಂಧಿಗೆ ಎನ್‌ಒಸಿ ನೀಡಿದ ದೆಹಲಿ ಕೋರ್ಟ್

- Advertisement -
- Advertisement -

ಮೂರು ವರ್ಷಗಳ ಅವಧಿಗೆ ‘ಸಾಮಾನ್ಯ ಪಾಸ್‌ಪೋರ್ಟ್’ ಪಡೆಯಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ವನ್ನು ದೆಹಲಿ ನ್ಯಾಯಾಲಯ ಶುಕ್ರವಾರ (ಮೇ 26) ನೀಡಿದೆ.

‘ಮೋದಿ’ ಉಪನಾಮದ ಕುರಿತು ನೀಡಿದ್ದ ಹೇಳಿಕೆ ಸಂಬಂಧ ರಾಹುಲ್ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಈ ಸಂಬಂಧ ರಾಹುಲ್‌ಗೆ ಶಿಕ್ಷೆಗೆ ಗುರಿಯಾಗಿದ್ದು, ಲೋಕಸಭೆ ಸದಸ್ಯತ್ವದಿಂದಲೂ ಅನರ್ಹಗೊಂಡಿದ್ದಾರೆ. ಇದರಿಂದ ರಾಹುಲ್ ಗಾಂಧಿ ಅವರು ಸಂಸದರ ಎಲ್ಲ ಸವಲತ್ತುಗಳನ್ನು ಕಳೆದುಕೊಂಡಿದ್ದು, ಇದೇ ವೇಳೆ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ಅನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ. ಹೀಗಾಗಿ, ರಾಹುಲ್ ಗಾಂಧಿ ಅವರು ಸಾಮಾನ್ಯ ಪಾಸ್‌ಪೋರ್ಟ್ ಪಡೆಯಲು ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ಕ್ಕಾಗಿ ನ್ಯಾಯಾಲಯ ಮೆಟ್ಟಿಲೇರಿದ್ದರು.

ಈ ವೇಳೆ ನ್ಯಾಯಾಧೀಶರು, ”ನಾನು ನಿಮ್ಮ ಅರ್ಜಿಯನ್ನು ಭಾಗಶಃ ಅನುಮತಿಸುತ್ತಿದ್ದೇನೆ. ಆದರೆ 10 ವರ್ಷಗಳಿಗಲ್ಲ, ಮೂರು ವರ್ಷಗಳಿಗೆ ಅನುಮತಿ ನೀಡುತ್ತೇನೆ” ಎಂದು ರಾಹುಲ್ ಗಾಂಧಿಯವರ ವಕೀಲರಿಗೆ ತಿಳಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೂರು ನೀಡಿರುವ ಹಣ ವರ್ಗಾವಣೆ ಮತ್ತು ಹಣ ದುರುಪಯೋಗವನ್ನು ಒಳಗೊಂಡಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಆರೋಪಿಯಾಗಿರುವ ಕಾರಣ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ನ್ಯಾಯಾಲಯದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಅಗತ್ಯವಿತ್ತು.

ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ದೂರುದಾರರಾಗಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಆರೋಪಿಯಾಗಿದ್ದಾರೆ.

ಇದನ್ನೂ ಓದಿ: ಗುಜರಾತ್: ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿದ ನ್ಯಾಯಾಧೀಶ ಸೇರಿ 68 ನ್ಯಾಯಾಧೀಶರ ಬಡ್ತಿಗೆ ಸುಪ್ರೀಂ ತಡೆ

ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು 2015ರಲ್ಲಿ ದಾಖಲಿಸಿರುವ ಖಾಸಗಿ ದೂರಿಗೆ ಸಂಬಂಧಿಸಿ ರಾಹುಲ್ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಹಾಗೂ ಇತರರು ಆರೋಪಿಗಳಾಗಿದ್ದಾರೆ.

ರಾಹುಲ್‌ ಗಾಂಧಿ ಅವರು ನಿರಪೇಕ್ಷಣಾ ಪ್ರಮಾಣಪತ್ರವನ್ನು ಕೋರಿ ಸಲ್ಲಿಸಿದ ಮನವಿಗೆ ಶುಕ್ರವಾರದೊಳಗೆ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಬುಧವಾರದಂದು ಸುಬ್ರಮಣಿಯನ್ ಸ್ವಾಮಿಯವರಿಗೆ ತಿಳಿಸಿತ್ತು. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರು ಪ್ರಯಾಣದ ಹಕ್ಕು ಮೂಲಭೂತ ಹಕ್ಕು ಎಂದು ಹೇಳಿದರು. ಅನುಮತಿ ಪಡೆಯದೆ ಹಲವಾರು ಬಾರಿ ಪ್ರಯಾಣಿಸಿದ ಕಾಂಗ್ರೆಸ್ ನಾಯಕನ ಚಲನೆಗೆ ನ್ಯಾಯಾಲಯ ಯಾವುದೇ ನಿರ್ಬಂಧವನ್ನು ವಿಧಿಸಿಲ್ಲ ಎಂದು ತಿಳಿಸಿದರು. ಡಿಸೆಂಬರ್ 2015ರಲ್ಲಿ ರಾಹುಲ್ ಗಾಂಧಿಗೆ ಜಾಮೀನು ನೀಡುವಾಗ, ನ್ಯಾಯಾಲಯವು ಅವರ ಪ್ರಯಾಣದ ಮೇಲೆ ಯಾವುದೇ ನಿರ್ಬಂಧಗಳನ್ನು ವಿಧಿಸಿಲ್ಲ ಮತ್ತು ನಿರ್ಬಂಧಗಳನ್ನು ವಿಧಿಸಲು ಕೋರಿದ್ದ ಸುಬ್ರಮಣಿಯನ್ ಸ್ವಾಮಿಯ ಅವರ ಮನವಿಯನ್ನು ತಿರಸ್ಕರಿಸಲಾಗಿತ್ತು ಎಂದು ಮ್ಯಾಜಿಸ್ಟ್ರೇಟ್ ಹೇಳಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರಪ್ರದೇಶ: ಕ್ಷೌರ ಮಾಡಲು ತಡವಾಗಿ ಬಂದ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ಪೊಲೀಸ್‌ ಅಧಿಕಾರಿ

0
ಕ್ಷೌರಕ್ಕಾಗಿ ಮನೆಗೆ ಕ್ಷೌರಿಕ ತಡವಾಗಿ ಬಂದ ಎಂದು ಪೊಲೀಸ್‌ ಅಧಿಕಾರಿಯೋರ್ವ ಕ್ಷೌರಿಕನನ್ನು ಲಾಕಪ್‌ನಲ್ಲಿ ಕೂಡಿ ಹಾಕಿರುವ ಅಮಾನವೀಯ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಬುದೌನ್‌ನ ಪೊಲೀಸ್ ಠಾಣೆಯೊಂದರಲ್ಲಿ ನಡೆದಿದೆ. ಸರ್ಕಲ್ ಆಫೀಸರ್(ಸಿಒ) ಸುನೀಲ್ ಕುಮಾರ್...