Homeಮುಖಪುಟಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

ಜಮ್ಮು ಕಾಶ್ಮೀರ ಚುನಾವಣೆ : ಸಂಸದ ಇಂಜಿನಿಯರ್ ರಶೀದ್‌ಗೆ ಮಧ್ಯಂತರ ಜಾಮೀನು

- Advertisement -
- Advertisement -

ಭಯೋತ್ಪಾದಕರಿಗೆ ಆರ್ಥಿಕ ಸಹಾಯ ಒದಗಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಜಮ್ಮು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದ ಸಂಸದ ಶೇಖ್ ರಶೀದ್ ಅಲಿಯಾಸ್ ಇಂಜಿನಿಯರ್ ರಶೀದ್ ಅವರಿಗೆ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 2ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಭಯೋತ್ಪಾದಕರಿಗೆ ಧನ ಸಹಾಯ ಮಾಡಿದ ಆರೋಪದ ಮೇಲೆ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ) ಅಡಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ರಶೀದ್ ಅವರನ್ನು 2017 ರಲ್ಲಿ ಬಂಧಿಸಿತ್ತು. ನಂತರ 2019 ರಿಂದ ಅವರು ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಕಾಶ್ಮೀರದಲ್ಲಿ ಭಯೋತ್ಪಾದಕ ಗುಂಪುಗಳು ಮತ್ತು ಪ್ರತ್ಯೇಕತಾವಾದಿಗಳಿಗೆ ಧನಸಹಾಯ ಒದಗಿಸಿದ ಆರೋಪದಲ್ಲಿ ಎನ್‌ಐಎಯಿಂದ ಬಂಧಿಸಲ್ಪಟ್ಟ ಕಾಶ್ಮೀರಿ ಉದ್ಯಮಿ ಜಹೂರ್ ವಾತಾಲಿ ಅವರ ವಿಚಾರಣೆ ವೇಳೆ ರಶೀದ್ ಅವರ ಹೆಸರು ಕೇಳಿ ಬಂದಿತ್ತು.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್, ಲಷ್ಕರ್-ಎ-ತೊಯ್ಬಾ ಸಂಸ್ಥಾಪಕ ಹಫೀಜ್ ಸಯೀದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾವುದ್ದೀನ್ ಸೇರಿದಂತೆ ಹಲವರ ವಿರುದ್ಧ ಎನ್‌ಐಎ ಆರೋಪಪಟ್ಟಿ ಸಲ್ಲಿಸಿತ್ತು. 2022ರಲ್ಲಿ ಯಾಸಿನ್ ಮಲಿಕ್‌ಗೆ ವಿಚಾರಣಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತಗಳಲ್ಲಿ ನಡೆಯಲಿರುವ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಲು ಮಧ್ಯಂತರ ಜಾಮೀನು ಕೋರಿ ರಶೀದ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ.

ಜೈಲಿನಲ್ಲಿದ್ದುಕೊಂಡೇ ಸಂಸದರಾದ ರಶೀದ್ :

ಈ ಬಾರಿಯ ಲೋಕಸಭಾ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸಿದ್ದ ರಶೀದ್ ಅವರು ಬಾರಾಮುಲ್ಲಾ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿ ಸಂಸದರಾಗಿದ್ದಾರೆ.

ಕಳೆದ ಜುಲೈ 5ರಂದು ಕೇವಲ ಎರಡು ಗಂಟೆಗಳ ಪೆರೋಲ್ ಮೇಲೆ ಜೈಲಿನಿಂದ ಹೊರಬಂದ ರಶೀದ್ ಅವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ರಶೀದ್ 2008 ಮತ್ತು 2014ರ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗಳಲ್ಲಿ ಲ್ಯಾಂಗೇಟ್ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. 2019ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಅವರು ಸೋಲನುಭವಿಸಿದ್ದರು. ರಶೀದ್ ಅವಾಮಿ ಇತ್ತೆಹಾದ್ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಆದರೆ, ಚುನಾವಣೆಗಳಿಗೆ ಅವರು ಸ್ವತಂತ್ರವಾಗಿ ಸ್ಪರ್ಧಿಸಿದ್ದರು.

ಇದನ್ನೂ ಓದಿ : ವೆಂಟಿಲೇಟರ್‌ನಲ್ಲಿ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ; ಚಿಂತಾಜನಕ ಸ್ಥಿತಿಯಲ್ಲಿ ಹಿರಿಯ ಕಮ್ಯುನಿಸ್ಟ್‌ ನಾಯಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....