Homeಮುಖಪುಟಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

- Advertisement -
- Advertisement -

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್ 9) ನೋಟಿಸ್ ಜಾರಿ ಮಾಡಿದೆ.

ಕ್ರಿಮಿನಲ್ ಪರಿಷ್ಕರಣಾ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಹಿರಿಯ ವಕೀಲ ಪವನ್ ನಾರಂಗ್ ಅವರ ವಾದಗಳನ್ನು ಆಲಿಸಿದ ನಂತರ ನೋಟಿಸ್ ಜಾರಿ ಮಾಡಿದ್ದಾರೆ. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 6ಕ್ಕೆ ನಿಗದಿಪಡಿಸಲಾಗಿದೆ.

ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವೈಭವ್ ಚೌರಾಸಿಯಾ ಅವರ ಸೆಪ್ಟೆಂಬರ್ 11ರಂದು ನೀಡಿದ ಆದೇಶವನ್ನು ಪ್ರಶ್ನಿಸಿ ಸೆಂಟ್ರಲ್ ದೆಹಲಿ ಕೋರ್ಟ್ ಬಾರ್ ಅಸೋಸಿಯೇಷನ್‌ನ ಉಪಾಧ್ಯಕ್ಷ ಹಾಗೂ ವಕೀಲ ವಿಕಾಸ್ ತ್ರಿಪಾಠಿ ಅವರು ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದಾರೆ.

ಮ್ಯಾಜಿಸ್ಟ್ರೇಟ್ ಚೌರಾಸಿಯಾ ಅವರು ಅರ್ಜಿ ವಜಾಗೊಳಿಸುವ ವೇಳೆ, ತಮ್ಮ ನ್ಯಾಯಾಲಯಕ್ಕೆ ಭಾರತೀಯ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ಮಾತ್ರ ಮೀಸಲಾಗಿರುವ ಕ್ಷೇತ್ರದಲ್ಲಿ ಹಸ್ತಕ್ಷೇಪ ಮಾಡಲು ಅಧಿಕಾರ ಇಲ್ಲ, ಏಕೆಂದರೆ ನಾಗರಿಕತ್ವವು ಸ್ವತಂತ್ರ ರಾಷ್ಟ್ರ ಮತ್ತು ಅದರ ಪ್ರಜೆಗಳ ನಡುವಿನ ವಿಶೇಷ ಸಂಬಂಧವಾಗಿದೆ ಎಂದಿದ್ದರು.

ಅಲ್ಲದೆ, ಅರ್ಜಿದಾರರನ್ನು ತರಾಟೆಗೆ ತೆಗೆದುಕೊಂಡಿದ್ದ ನ್ಯಾಯಾಧೀಶರು, ಇಂತಹ ಕ್ರಮವು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮಾನವಾಗಿದೆ. ಆಪಾದಿತ ಅಪರಾಧಗಳಾದ ವಂಚನೆ, ನಕಲಿ ಮತ್ತು ಇತರವುಗಳನ್ನು ರೂಪಿಸಲು ಅಗತ್ಯವಾದ ಮೂಲಭೂತ ಅಂಶಗಳು ಸ್ಪಷ್ಟವಾಗಿ ಕೊರತೆಯಿದೆ. ಅರ್ಜಿದಾರರು 1980ರ ಪ್ರಮಾಣೀಕರಿಸದ ಚುನಾವಣಾ ಪಟ್ಟಿಯ ನಕಲು ಪ್ರತಿಯನ್ನು ಮಾತ್ರ ಅವಲಂಬಿಸಿದ್ದಾರೆ. ಇದರಿಂದ ಬಲವಾದ ಆರೋಪಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು.

ಕಾನೂನುಬದ್ಧ ಆಧಾರವಿಲ್ಲದ ಆರೋಪಗಳನ್ನು ಬಳಸಿ, ನ್ಯಾಯಾಲಯಕ್ಕೆ ಇಲ್ಲದ ಅಧಿಕಾರವನ್ನು ಬಲವಂತವಾಗಿ ಒದಗಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದ್ದರು.

ತನ್ನ ಅರ್ಜಿ ವಜಾಗೊಳಿಸಿದ ಮ್ಯಾಜಿಸ್ಟ್ರೇಟ್ ಆದೇಶ ಪ್ರಶ್ನಿಸಿ ವಕೀಲ ತ್ರಿಪಾಠಿ ವಿಶೇಷ ನ್ಯಾಯಾಲಯಕ್ಕೆ ಕ್ರಿಮಿನಲ್ ಪರಿಷ್ಕರಣಾ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸೋನಿಯಾ ಗಾಂಧಿಯವರ ಹೆಸರು 1980ರಲ್ಲಿ ನವದೆಹಲಿಯ ವಿಧಾನಸಭಾ ಕ್ಷೇತ್ರದ ಚುನಾವಣಾ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಆದರೆ, ಅವರು ಭಾರತದ ನಾಗರಿಕರಾಗಿದ್ದು 1983ರಲ್ಲಿ ಎಂಬುವುದು ವಕೀಲ ತ್ರಿಪಾಠಿಯ ವಾದವಾಗಿದೆ.

ಸೋನಿಯಾ ಗಾಂಧಿ ಸೇರಿದಂತೆ ಪರಿಚಿತ ಮತ್ತು ಅಪರಿಚಿತ ವ್ಯಕ್ತಿಗಳು ಸುಳ್ಳು ದಾಖಲೆ ಪತ್ರಗಳನ್ನು ರಚಿಸುವ ಕಾನೂನುಬಾಹಿರ ಕೃತ್ಯಗಳನ್ನು ಮಾಡಿದ್ದಾರೆ. ಸೋನಿಯಾ ಗಾಂಧಿ ಭಾರತದ ನಾಗರಿಕಲ್ಲದಿದ್ದರೂ, ಅವರ ಹೆಸರನ್ನು ಸಾರ್ವಜನಿಕ ದಾಖಲೆಗಳಲ್ಲಿ ಸೇರಿಸಲಾಗಿತ್ತು. ಇದನ್ನು ಮ್ಯಾಜಿಸ್ಟ್ರೇಟ್ ಗಂಭೀರವಾಗಿ ಗಮನಿಸಿಲ್ಲ ಎಂದು ವಕೀಲ ತ್ರಿಪಾಠಿ ತನ್ನ ಅರ್ಜಿಯಲ್ಲಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು...