Homeಮುಖಪುಟ‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

‘ದಿ ವೈರ್’ ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಹಿಂತಿರುಗಿಸಲು ಕೋರ್ಟ್ ಆದೇಶ

- Advertisement -
- Advertisement -

ಬಿಜೆಪಿ ನಾಯಕ ಅಮಿತ್ ಮಾಳವಿಯಾ ದಾಖಲಿಸಿದ್ದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ದೆಹಲಿ ಪೊಲೀಸರು ನಡೆಸಿದ ಶೋಧದ ವೇಳೆ ಆನ್‌ಲೈನ್ ಪೋರ್ಟಲ್ “ದಿ ವೈರ್” ಸಂಪಾದಕರಿಂದ ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳನ್ನು ಹಿಂತಿರುಗಿಸುವಂತೆ (ಬಿಡುಗಡೆ) ದೆಹಲಿ ನ್ಯಾಯಾಲಯ ನಿನ್ನೆ ಆದೇಶಿಸಿದೆ.

ಪೋರ್ಟಲ್‌ನ ಸಂಸ್ಥಾಪಕ ಸಂಪಾದಕರಾದ ಸಿದ್ಧಾರ್ಥ್ ವರದರಾಜನ್, ಎಂಕೆ ವೇಣು, ಸಿದ್ಧಾರ್ಥ್ ಭಾಟಿಯಾ, ಉಪ ಸಂಪಾದಕ ಜಾಹ್ನವಿ ಸೇನ್ ಮತ್ತು ಮಿಥುನ್ ಕಿಡಂಬಿ ಅವರಿಂದ ವಶಪಡಿಸಿಕೊಂಡ ಸಾಧನಗಳನ್ನು ಬಿಡುಗಡೆ ಮಾಡದಿರಲು ಯಾವುದೇ ಸಮಂಜಸವಾದ ಕಾರಣವಿಲ್ಲ ಎಂದು ತೀಸ್ ಹಜಾರಿ ನ್ಯಾಯಾಲಯದ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಿದ್ಧಾರ್ಥ ಮಲಿಕ್ ಹೇಳಿದ್ದಾರೆ ಮತ್ತು 15 ದಿನಗಳಲ್ಲಿ ಸಾಧನಗಳನ್ನು ಬಿಡುಗಡೆ ಮಾಡುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ.

ತನಿಖೆಯ ಸಮಯದಲ್ಲಿ ವಶಪಡಿಸಿಕೊಂಡ ಸಾಧನಗಳು ಬಹಳ ಸಮಯದಿಂದ ತನಿಖಾಧಿಕಾರಿಯ ವಶದಲ್ಲಿವೆ ಮತ್ತು ಯಾವುದೇ ಮುಂದುವರಿದ  ತನಿಖೆಗೆ ಬೇಕಾದ ದಾಖಲೆ ಎಫ್‌ಎಸ್‌ಎಲ್‌ ಸಂಗ್ರಹಿಸಿದೆ ಎಂದು ನ್ಯಾಯಾಲಯವು ಗಮನಿಸಿದೆ.

ವಶಪಡಿಸಿಕೊಂಡ ಸಾಧನಗಳು ಮುಂದಕ್ಕೆ ತನಿಖೆಗೆ ಅಗತ್ಯವಾಗಬಹುದು ಎಂಬ ಪೊಲೀಸರ ವಾದವನ್ನು ತಳ್ಳಿಹಾಕಿದ ನ್ಯಾಯಾಧೀಶರು  ಸಾಧನಗಳನ್ನು ಅನಿರ್ದಿಷ್ಟವಾಗಿ ವಶಕ್ಕೆ ಅನುಮತಿ ನಿರಾಕರಿಸಿದೆ.

ತನಿಖೆಯ ವೇಳೆ ಪೊಲೀಸರು ವಶಪಡಿಸಿಕೊಂಡ ಎಲೆಕ್ಟ್ರಾನಿಕ್ ಸಾಧನಗಳನ್ನು ಬಿಡುಗಡೆ ಮಾಡುವಂತೆ ಕೋರಿ ಸಂಪಾದಕರು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಆದೇಶವನ್ನು ನೀಡಿದ್ದಾರೆ.

ಮಾಳವೀಯ ಅವರು ಸಾಮಾಜಿಕ ಮಾಧ್ಯಮ ಸಂಸ್ಥೆ ಮೆಟಾದಲ್ಲಿ (ಫೇಸ್‌ಬುಕ್‌ ಮಾತೃಸಂಸ್ಥೆ) ತಮ್ಮ ವಿಶೇಷ ಅಧಿಕಾರ ಬಳಸಿಕೊಂಡು 700ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ತೆಗೆದುಹಾಕಿದ್ದಾರೆ ಎಂಬ ವರದಿಗೆ ಸಂಬಂಧಿಸಿದಂತೆ ದಿ ವೈರ್ ಮತ್ತು ಅದರ ಸಂಪಾದಕರ ವಿರುದ್ಧ ಅಮಿತ್ ಮಾಳವೀಯ ಎಫ್‌ಐಆರ್ ದಾಖಲಿಸಿದ್ದರು.

ದಿ ವೈರ್ ಮತ್ತು ಸಂಪಾದಕರ ವಿರುದ್ಧ ಸೆಕ್ಷನ್ 420, 468, 469 , 120 ಬಿ ಮತ್ತು 34 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ: ಕಾಂಗ್ರೆಸ್ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...