Homeಮುಖಪುಟಶಾರ್ಜೀಲ್ ಇಮಾಮ್ ವಿರುದ್ಧದ ದೇಶದ್ರೋಹದ ಪ್ರಕರಣ ರದ್ದುಗೊಳಿಸಿದ ದೆಹಲಿ ನ್ಯಾಯಾಲಯ

ಶಾರ್ಜೀಲ್ ಇಮಾಮ್ ವಿರುದ್ಧದ ದೇಶದ್ರೋಹದ ಪ್ರಕರಣ ರದ್ದುಗೊಳಿಸಿದ ದೆಹಲಿ ನ್ಯಾಯಾಲಯ

- Advertisement -
- Advertisement -

ನವ ದೆಹಲಿಯ ಜಾಮಿಯಾ ಪ್ರದೇಶದಲ್ಲಿ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದಲ್ಲಿ ಜೆಎನ್‌ಯು ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹ ವಿರುದ್ಧದ ದೇಶದ್ರೋಹದ ಪ್ರಕರಣವನ್ನು ದೆಹಲಿ ನ್ಯಾಯಾಲಯ ರದ್ದುಗೊಳಿಸಿದೆ.

ಸಾಕೇತ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಲ್ ವರ್ಮಾ ಈ ಆದೇಶ ಪ್ರಕಟಿಸಿದರು. ಈ ಮೊದಲೇ ಈ ಪ್ರಕರಣದಲ್ಲಿ ಅವರಿಬ್ಬರು ಜಾಮೀನು ಪಡೆದಿದ್ದರು. ಆದರೂ ಶಾರ್ಜೀಲ್ ವಿರುದ್ಧ ದೆಹಲಿ ಗಲಭೆ ಸಂದರ್ಭದಲ್ಲಿ ಹೊರಿಸಲಾದ ಯುಎಪಿಎ ಪ್ರಕರಣ ಇರುವುದರಿಂದ ಅವರಿನ್ನೂ ತಿಹಾರ್ ಜೈಲಿನಲ್ಲಿಯೇ ಇರಬೇಕಾಗಿದೆ.

ಜನವರಿ 16, 2020 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಅವರು ಮಾಡಿದ ಭಾಷಣಕ್ಕಾಗಿ, ಅಸ್ಸಾಂ, ಉತ್ತರ ಪ್ರದೇಶ, ಅರುಣಾಚಲ ಪ್ರದೇಶ, ನವದೆಹಲಿ, ಮಣಿಪುರ ರಾಜ್ಯಗಳು ದೇಶದ್ರೋಹದ ಪ್ರಕರಣವನ್ನು ದಾಖಲಿಸಿದ್ದರು ಮತ್ತು ಅವರನ್ನು ಬಿಹಾರದಿಂದ ಬಂಧಿಸಲಾಗಿತ್ತು.

ಐಐಟಿ ಮುಂಬೈನ ಹಳೆಯ ವಿದ್ಯಾರ್ಥಿ, ಮಾಜಿ ಜನತಾದಳ (ಯುನೈಟೆಡ್) ನಾಯಕರಾಗಿದ್ದ, ದಿವಂಗತ ಅಕ್ಬರ್ ಇಮಾಮ್ ಅವರ ಪುತ್ರನಾದ ಶಾರ್ಜೀಲ್‌ 2017 ರಲ್ಲಿ, ಸಂಶೋಧನಾ ವಿದ್ಯಾರ್ಥಿಯಾಗಿ ಜೆಎನ್‌ಯುನ ಆಧುನಿಕ ಇತಿಹಾಸ ವಿಭಾಗಕ್ಕೆ ಸೇರಿದ್ದರು.

ಇದನ್ನೂ ಓದಿ; ದ್ವೇಷ ಭಾಷಣ ತಡೆಯುವಂತಿದ್ದರೆ ಮಾತ್ರ ಹಿಂದುತ್ವ ಕಾರ್ಯಕ್ರಮಕ್ಕೆ ಅನುಮತಿ: ಮಹಾರಾಷ್ಟ್ರಕ್ಕೆ ಸುಪ್ರೀಂ ಸೂಚನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...