Homeಮುಖಪುಟವಂಚನೆ ಆರೋಪ : ಗಂಭೀರ್ ವಿರುದ್ಧದ ಪ್ರಕರಣ ಮುಕ್ತಾಯ ಆದೇಶ ರದ್ದುಪಡಿಸಿದ ದೆಹಲಿ ನ್ಯಾಯಾಲಯ

ವಂಚನೆ ಆರೋಪ : ಗಂಭೀರ್ ವಿರುದ್ಧದ ಪ್ರಕರಣ ಮುಕ್ತಾಯ ಆದೇಶ ರದ್ದುಪಡಿಸಿದ ದೆಹಲಿ ನ್ಯಾಯಾಲಯ

- Advertisement -
- Advertisement -

ವಂಚನೆ ಪ್ರಕರಣದಲ್ಲಿ ಬಿಜೆಪಿ ನಾಯಕ, ಭಾರತ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರನ್ನು ಆರೋಪ ಮುಕ್ತಗೊಳಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ದೆಹಲಿ ನ್ಯಾಯಾಲಯ ರದ್ದುಗೊಳಿಸಿದೆ.

ಹಣ ಪಡೆದು ಮನೆಗಳನ್ನು ನೀಡಲು ವಿಫಲವಾದ ಗೌತಮ್‌ ಗಂಭೀರ್‌ ನಂಟು ಹೊಂದಿರುವ ಮೂರು ರಿಯಲ್‌ ಎಸ್ಟೇಟ್‌ ಕಂಪೆನಿಗಳಾದ ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿ, ಹೆಚ್‌ಆರ್ ಇನ್‌ಫ್ರಾಸಿಟಿ ಮತ್ತು ಯುಎಂ ಆರ್ಕಿಟೆಕ್ಚರ್ಸ್ ವಿರುದ್ಧ ಮನೆ ಖರೀದಿದಾರರು ಪ್ರಕರಣ ದಾಖಲಿಸಿದ್ದರು. ಗಂಭೀರ್ ಅವರು ರುದ್ರಾದ ಹೆಚ್ಚುವರಿ ನಿರ್ದೇಶಕರಲ್ಲದೆ, ಯೋಜನೆಯ ಬ್ರ್ಯಾಂಡ್ ಅಂಬಾಸಿಡರ್ ಕೂಡ ಆಗಿದ್ದರು.

ಪ್ರಕರಣ ಮುಕ್ತಾಯಗೊಳಿಸುವಂತೆ ಮ್ಯಾಜಿಸ್ಟೇಟ್‌ ನ್ಯಾಯಾಲಯ ನೀಡಿದ ಆದೇಶ ಸಂಸದರಾಗಿದ್ದ ಗಂಭೀರ್‌ ಅವರ ವಿರುದ್ಧದ ಆರೋಪಗಳ ಕುರಿತು ತೀರ್ಪು ನೀಡುವಲ್ಲಿ ‘ಮನಸ್ಸೊಂದರ ಅಸಮರ್ಪಕ ಅಭಿವ್ಯಕ್ತಿ’ಯಾಗಿದೆ ಎಂದು ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಹೇಳಿದ್ದಾರೆ.

ಬ್ರ್ಯಾಂಡ್ ಅಂಬಾಸಿಡರ್ ಆಗಿ ಹೂಡಿಕೆದಾರರೊಂದಿಗೆ ನೇರ ಸಂಪರ್ಕ ಹೊಂದಿದ್ದ ಗಂಭೀರ್ ವಿರುದ್ಧದ ಆರೋಪಗಳು ಹೆಚ್ಚಿನ ತನಿಖೆಗೆ ಅರ್ಹವಾಗಿವೆ. ರುದ್ರಾ ಬಿಲ್ಡ್‌ವೆಲ್ ರಿಯಾಲ್ಟಿಯಲ್ಲಿ ಗಂಭೀರ್‌ ಅವರ ಪಾತ್ರ ಇದೆ ಎಂದಿರುವ ನ್ಯಾಯಾಯಲ, ಹೂಡಿಕೆದಾರರ ಹಣ ಗಂಭೀರ್‌ ಅವರ ಪಾಲಾಗಿದೆಯೇ? ಎಂದು ಕೂಡ ಪ್ರಶ್ನಿಸಿದೆ.

ರುದ್ರಾದ ಹೆಚ್ಚುವರಿ ನಿರ್ದೇಶಕರಾಗಿದ್ದ ಗಂಭೀರ್, ಬ್ರ್ಯಾಂಡ್‌ ಅಂಬಾಸಿಡರ್ ಅಷ್ಟೇ ಆಗಿರದೆ, ಕಂಪನಿಯೊಂದಿಗೆ ಹಣಕಾಸಿನ ವಹಿವಾಟುಗಳನ್ನು ಹೊಂದಿದ್ದಾರೆ. ಆದರೆ ಉಳಿದ ಆರೋಪಿಗಳೊಡನೆ ಗಂಭೀರ್‌ ಅವರ ಆರೋಪಗಳನ್ನು ಮ್ಯಾಜಿಸ್ಟೇಟ್‌ ನ್ಯಾಯಾಲಯದ ಆದೇಶ ಸಾಮಾನ್ಯೀಕರಿಸಿದೆ ಎಂದು ಅದು ಹೇಳಿದೆ.

ನಡೆದಿರುವ ವಂಚನೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಅನುಸೂಚಿತ ಅಪರಾಧವಾಗಿರುವುದರಿಂದ, ಪ್ರಕರಣವನ್ನು ಇಡಿ ತನಿಖೆ ಮಾಡಬೇಕಾದ ಅಗತ್ಯ ಬೀಳಬಹುದು ಎಂದು ನ್ಯಾಯಾಲಯ ಅಭಿಮತ ವ್ಯಕ್ತಪಡಿಸಿದೆ.

ದೆಹಲಿಯ ರೌಸ್‌ ಅವೆನ್ಯೂ ನ್ಯಾಯಾಲಯದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಚಾರಣಾ ನ್ಯಾಯಾಲಯ ನೀಡಿದ ಆದೇಶದ ವಿರುದ್ಧ ಮೂರು ಪರಿಶೀಲನಾ ಅರ್ಜಿಗಳನ್ನು ಅದೇ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ಇದನ್ನೂ ಓದಿ : ತಮಿಳುನಾಡು ಉಪ ಮುಖ್ಯಮಂತ್ರಿ ಉದಯನಿಧಿ ಟಿ-ಶರ್ಟ್ ವಿರುದ್ಧ ಕೋರ್ಟ್‌ಗೆ ಅರ್ಜಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...