Homeಮುಖಪುಟದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

ದೆಹಲಿ | ಇಡಿ ಅಧಿಕಾರಿಗಳಂತೆ ಸೋಗು ಹಾಕಿ 5 ಕೋಟಿ ಸುಲಿಗೆಗೆ ಯತ್ನ

- Advertisement -
- Advertisement -

ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳಂತೆ ಸೋಗು ಹಾಕಿ ದೆಹಲಿಯ ವ್ಯಕ್ತಿಯೊಬ್ಬರಿಂದ 5 ಕೋಟಿ ರೂಪಾಯಿ ಸುಲಿಗೆಗೆ ಯತ್ನಿಸಿರುವ ಘಟನೆ ದೆಹಲಿಯ ಚತ್ತರ್‌ಪುರದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 7 ಜನರ ತಂಡ ಇಡಿ ಅಧಿಕಾರಿಗಳಂತೆ ವ್ಯಕ್ತಿಯ ಮನೆಗೆ ದಾಳಿ ಮಾಡಿದ್ದಾಗಿ ಹೇಳಿದ್ದರು. ಆದಾಗ್ಯೂ, ಸಂತ್ರಸ್ತ ವ್ಯಕ್ತಿಯ ವಕೀಲ ಅಧಿಕಾರಿಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಂತರ ಆರೋಪಿಗಳು ತಪ್ಪಿಸಿಕೊಂಡಿದ್ದಾರೆ. ದೆಹಲಿ

ಅಶೋಕ ಅವೆನ್ಯೂ, ಡಿಎಲ್‌ಎಫ್ ಫಾರ್ಮ್ಸ್‌ನಲ್ಲಿರುವ ನಿವಾಸದಲ್ಲಿ ಇಡಿ ಅಧಿಕಾರಿಗಳ ಸೋಗು ಹಾಕಿದ್ದ ವ್ಯಕ್ತಿಗಳ ಗುಂಪು ಸುಳ್ಳು ಇಡಿ ಹುಡುಕಾಟ ನಡೆಸುತ್ತಿದೆ ಎಂದು ಅಕ್ಟೋಬರ್ 22 ರಂದು ನಮಗೆ ಮಾಹಿತಿ ಸಿಕ್ಕಿತು. ಇಡಿ ದಾಳಿಯ ನೆಪದಲ್ಲಿ ಮನೆ ಮಾಲೀಕರನ್ನು ಹೌಜ್ ಖಾಸ್‌ನಲ್ಲಿರುವ ಕೋಟಕ್ ಮಹೀಂದ್ರಾ ಬ್ಯಾಂಕ್‌ಗೆ ಕರೆದೊಯ್ದು ಆತನ ಬ್ಯಾಂಕ್ ಖಾತೆಯಿಂದ 5 ಕೋಟಿ ರೂ. ಲಪಟಾಯಿಸಲು ಪ್ರಯತ್ನಿಸಿದ್ದರು ಎಂದು ಇಡಿ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ತಕ್ಷಣವೇ ಇಡಿ ತಂಡವನ್ನು ಬ್ಯಾಂಕ್‌ಗೆ ಕಳುಹಿಸಲಾಗಿದ್ದು, ಸ್ಥಳೀಯ ಪೊಲೀಸರಿಗೂ ತಿಳಿಸಲಾಯಿತು. ಹಿರಿಯ ಪೊಲೀಸ್ ಅಧಿಕಾರಿಗಳು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಸಹಾಯ ಮಾಡಿದರು. ಅದಕ್ಕಿಂತ ಮುಂದೆ ಬ್ಯಾಂಕ್ ತಲುಪಿದ್ದ ಸಂತ್ರಸ್ತ ವ್ಯಕ್ತಿಯ ವಕೀಲ, ವಂಚಕರ ಗುರುತಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಅಷ್ಟರಲ್ಲಿ ಅಪಾಯ ಅರಿತ ಅವರು ಬ್ಯಾಂಕ್‌ನಿಂದ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ದಾಳಿಯ ವೇಳೆ ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಏಳು ವ್ಯಕ್ತಿಗಳು ಎರಡು ಕಾರುಗಳಲ್ಲಿ ಹಿಂದಿನ ರಾತ್ರಿ ಅವರ ಮನೆಗೆ ಬಂದಿದ್ದರು ಎಂದು ಸಂತ್ರಸ್ತ ವ್ಯಕ್ತಿ ಹೇಳಿದ್ದಾರೆ. ಅವರಲ್ಲಿ ಕೆಲವರು ತಮ್ಮ ಗುರುತನ್ನು ಮರೆಮಾಚಲು ಮುಖವಾಡಗಳನ್ನು ಧರಿಸಿದ್ದರು. ಆದರೆ ಮೂವರು ಮುಖವಾಡಗಳಿಲ್ಲದೆ ಸಂವಾದ ನಡೆಸಿದ್ದರು. ಈ ವೇಳೆ ಅವರು ಸಂತ್ರಸ್ತ ವ್ಯಕ್ತಿಯು ಇತ್ತಿಚೆಗೆ ನಡೆಸಿದ್ದ ಬ್ಯಾಂಕ್‌ ವ್ಯವಹಾರಗಳನ್ನು ಪ್ರಶ್ನಿದ್ದರು ಎಂದು ಅವರು ಹೇಳಿದ್ದಾರೆ.

ವಂಚಕರು ಅವರ ಕೆಲವು ಹಳೆಯ ಚೆಕ್‌ಗಳನ್ನು ಮುಂದಿರಿಸಿ, ದೊಡ್ಡ ಮೊತ್ತದ ಹಣ ನೀಡಲು ಒಪ್ಪದಿದ್ದರೆ ಬಂಧಿಸುವ ಬೆದರಿಕೆ ಹಾಕಿದ್ದರು. ಆಗ ಸಂತ್ರಸ್ತ ವ್ಯಕ್ತಿ ಮರುದಿನ ಬೆಳಿಗ್ಗೆ ಬ್ಯಾಂಕ್‌ನಿಂದ ಹಣ ಪಡೆದು ನೀಡುವುದಾಗಿ ಹೇಳಿದ್ದು, ಆಗ ನಕಲಿ ಅಧಿಕಾರಿಗಳು ರಾತ್ರಿಯಿಡೀ ಅವರ ಮನೆಯಲ್ಲಿಯೇ ಕಳೆದಿದ್ದರು. ದೆಹಲಿ

ಸಂತ್ರಸ್ತ ವ್ಯಕ್ತಿಯ ಮನೆಯ ಗೇಟ್‌ಗಳಿಗೆ ಬೀಗ ಹಾಕಿದ್ದರಿಂದ ದುಷ್ಕರ್ಮಿಗಳು ತಮ್ಮ ಕಾರುಗಳನ್ನು ಅವರ ನಿವಾಸದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ಪೊಲೀಸರು ಸಂತ್ರಸ್ತ ವ್ಯಕ್ತಿಯ ಹೇಳಿಕೆಯನ್ನು ಪಡೆದು ಎಫ್‌ಐಆರ್ ದಾಖಲಿಸಿದ್ದಾರೆ. ಅವರು ಬಿಟ್ಟು ಹೋಗಿರುವ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...