HomeಮುಖಪುಟDelhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

- Advertisement -
- Advertisement -

ದೆಹಲಿ ಚುನಾವಣೆಯಲ್ಲಿ 27 ವರ್ಷಗಳ ನಂತರ ಬಿಜೆಪಿ ಅಧಿಕಾರಕ್ಕೆ ಏರುತ್ತಿದ್ದು, ಆಡಳಿತರೂಢ ಎಎಪಿ ಹೀನಾಯವಾಗಿ ಸೋಲುಂಡಿದೆ. ಚುನಾವಣೆಯಲ್ಲಿ ಎಎಪಿಯ ಘಟಾನುಘಟಿ ನಾಯಕರು ಸೋಲುಂಡಿರುವ ನಡುವೆ ಮುಖ್ಯಮಂತ್ರಿ ಅತಿಶಿ ತಮ್ಮ ಕಲ್ಕಾಜಿ ವಿಧಾನಸಭಾ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. Delhi Election Results 2025

ಈ ನಡುವೆ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಸೋಲಿನ ನಡುವೆ ಅತಿಶಿ ಅವರ ಗೆಲುವು ಪಕ್ಷಕ್ಕೆ ಸಮಾಧಾನ ತಂದಿದೆ. Delhi Election Results 2025

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪ್ರತಿಷ್ಠಿತ ನವದೆಹಲಿ ಸ್ಥಾನವನ್ನು ಕೇಜ್ರಿವಾಲ್ ಪರ್ವೇಶ್ ವರ್ಮಾ ವಿರುದ್ಧ ಸೋತರೆ, ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರದಿಂದ ಬಿಜೆಪಿಯ ತರ್ವಿಂದರ್ ಸಿಂಗ್ ಮಾರ್ವಾ ಸೋಲಿಸಿದರು. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ, ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್, ಮಾಲ್ವಿಯಾ ನಗರದಿಂದ ಸೋಮನಾಥ್ ಭಾರ್ತಿ ಮತ್ತು ಶಕುರ್ ಬಸ್ತಿಯಿಂದ ಸತ್ಯೇಂದರ್ ಜೈನ್ ಸೋತರು.

ಕಲ್ಕಾಜಿಯಲ್ಲಿ ಎಎಪಿ ಮತ್ತು ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಚುನಾವಣೆಗೆ ಮುನ್ನ ಅತಿಶಿ ಮತ್ತು ಬಿಧುರಿ ನಡುವಿನ ತೀಕ್ಷ್ಣವಾದ ವಾಕ್ಸಮರ ನಡೆದಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅತಿಶಿ ಅವರು 52,154 ಮತಗಳನ್ನು ಪಡೆದರೆ, ಬಿಜೆಪಿಯ ರಮೇಶ್ ಬಿಧುರಿ 48,633 ಪಡೆದು 3,521 ಮತಗಳಿಂದ ಸೋಲುಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ 4,392 ಮತಗಳನ್ನು ಪಡೆದಿದ್ದಾರೆ.

ಮೂರು ಬಾರಿ ದೆಹಲಿ ಶಾಸಕರಾಗಿದ್ದ ರಮೇಶ್ ಬಿಧುರಿ, ಮುಖ್ಯಮಂತ್ರಿ ಅತಿಶಿ ತಮ್ಮ “ಮರ್ಲೆನಾ” ಎಂಬ ಉಪನಾಮವನ್ನು ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಟೀಕಿಸಿದ್ದರು. ಇದರ ನಂತರ ಅವರಿಬ್ಬರ ನಡುವೆ ತೀವ್ರ ವಾಕ್ಸಮರ ನಡೆಡಿತ್ತು. ಶಿಕ್ಷಣ ಸಲಹೆಗಾರರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ 43 ವರ್ಷದ ಅತಿಶಿ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಲು ಆಗಿನ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಈ ನಡುವೆ, ಜಂಗ್‌ಪುರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಥಿ ತರ್ವಿಂದರ್ ಸಿಂಗ್ ಮರ್ವಾ ಅವರ ಮುಂದೆ  675 ಮತಗಳ ಅಂತರದಿಂದ ಸೋಲುಂಡಿದ್ದಾರೆ. ಬಿಜೆಪಿಯ ತರ್ವಿಂದರ್ ಸಿಂಗ್‌ಗೆ 38,859 ಮತಗಳು ಲಭಿಸಿದ್ದರೆ, ಮನೀಶ್ ಅವರಿಗೆ 38,184 ಮತಗಳು ಸಿಕ್ಕಿವೆ. ಈ ನಡುವೆ ಕಾಂಗ್ರೆಸ್‌ನ ಫರಾದ್ ಸೂರಿ ಅವರಿಗೆ 7,350 ಮತಗಳು ಲಭಿಸಿದೆ.

ಎಎಪಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಶಕುರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿಯ ಕರ್ನೈಲ್ ಸಿಂಗ್ ವಿರುದ್ಧ 20,998 ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ 56,869 ಮತಗಳು ಲಭಿಸಿದ್ದರೆ, ಎಎಪಿಗೆ 35,871 ಹಾಗೂ ಕಾಂಗ್ರೆಸ್‌ನ ಸತೀಶ್ ಕುಮಾರ್ ಲೂತ್ರಾ ಅವರಿಗೆ 5,784 ಮತಗಳು ಲಭ್ಯವಾಗಿದೆ. Delhi Election Results 2025

ಇದನ್ನೂಓದಿ:  ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ಸಂಭಾಲ್ ಧ್ವಂಸ ಪ್ರಕರಣ | ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ – ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...