HomeಮುಖಪುಟDelhi Election Results - ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ!

Delhi Election Results – ಎಎಪಿ 22; ಬಿಜೆಪಿ 48; ಕಾಂಗ್ರೆಸ್ ಹ್ಯಾಟ್ರಿಕ್ ಶೂನ್ಯ ಸಾಧನೆ!

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸುವ ಮೂಲಕ ದೆಹಲಿ ಗದ್ದುಗೆಯನ್ನು 27 ವರ್ಷಗಳ ನಂತರ ಏರುತ್ತಿದೆ. ವಿಧಾನಸಭೆಯ ಒಟ್ಟು 70 ಕ್ಷೇತ್ರಗಳಲ್ಲಿ ಪಕ್ಷವು 48 ಸ್ಥಾನಗಳನ್ನು ಗಳಿಸಿದ್ದು, ಆಡಳಿತರೂಢ ಎಎಪಿಯ ಸಂಖ್ಯೆ 22 ಕ್ಕೆ ಇಳಿದಿದೆ. ಪಕ್ಷದ ಪ್ರಮುಖ ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಸೇರಿದಂತೆ ಪ್ರಮುಖ ವ್ಯಕ್ತಿಗಳು ಚುನಾವಣೆಯಲ್ಲಿ ಸೋಲುಂಡಿದ್ದು ಪಕ್ಷಕ್ಕೆ ತೀವ್ರ ಹಿನ್ನಡೆಯಾಗಿದೆ. ಅದಾಗ್ಯೂ, ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಕಲ್ಕಾಜಿ ಕ್ಷೇತ್ರವನ್ನು ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. Delhi Election Results

2020ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಎಪಿ 62 ಸ್ಥಾನಗಳನ್ನು ಗೆದ್ದು, ಬಿಜೆಪಿಗೆ 8 ಸ್ಥಾನಗಳಲ್ಲಿ ಸಮಾಧಾನ ಪಡುವಂತೆ ಮಾಡಿತ್ತು. ಅದಕ್ಕೂ ಮುಂಚಿನ 2015ರ ಚುನಾವಣೆಯಲ್ಲಿ ಎಎಪಿ ವಿಧಾನಸಭೆಯ 70 ಕ್ಷೇತ್ರಗಳಲ್ಲಿ 67 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದು, ಬಿಜೆಪಿಗೆ 3 ಸ್ಥಾನಗಳಷ್ಟೆ ದಕ್ಕಿತ್ತು. ಅದಾಗ್ಯೂ, ಕಾಂಗ್ರೆಸ್ ಸಸತ ಮೂರು ವಿಧಾನಸಭಾ ಚುನಾವಣೆಗಳಲ್ಲಿ ಶೂನ್ಯ ಸಾಧನೆ ಮಾಡಿದೆ. Delhi Election Results

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮುಖ್ಯಮಂತ್ರಿ ಅತಿಶಿ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ರಮೇಶ್ ಬಿಧುರಿ ಅವರನ್ನು 3521 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್‌ಸೈಟ್‌ ತಿಳಿಸಿದೆ. ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರಂವಿದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಮಾಜಿ ಸಚಿವ ಸತ್ಯೇಂದ್ರ ಜೈನ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಸೋಲಿನ ನಡುವೆ ಅತಿಶಿ ಅವರ ಗೆಲುವು ಪಕ್ಷಕ್ಕೆ ಸಮಾಧಾನ ತಂದಿದೆ.

ಪ್ರತಿಷ್ಠಿತ ನವದೆಹಲಿ ಸ್ಥಾನವನ್ನು ಕೇಜ್ರಿವಾಲ್ ಪರ್ವೇಶ್ ವರ್ಮಾ ವಿರುದ್ಧ ಸೋತರೆ, ಮನೀಶ್ ಸಿಸೋಡಿಯಾ ಅವರನ್ನು ಜಂಗ್‌ಪುರದಿಂದ ಬಿಜೆಪಿಯ ತರ್ವಿಂದರ್ ಸಿಂಗ್ ಮಾರ್ವಾ ಸೋಲಿಸಿದರು. ದೆಹಲಿ ಸಚಿವ ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್ ಕ್ಷೇತ್ರದಿಂದ, ರಾಜಿಂದರ್ ನಗರದಿಂದ ದುರ್ಗೇಶ್ ಪಾಠಕ್, ಮಾಲ್ವಿಯಾ ನಗರದಿಂದ ಸೋಮನಾಥ್ ಭಾರ್ತಿ ಮತ್ತು ಶಕುರ್ ಬಸ್ತಿಯಿಂದ ಸತ್ಯೇಂದರ್ ಜೈನ್ ಸೋತರು.

ಕಲ್ಕಾಜಿಯಲ್ಲಿ ಎಎಪಿ ಮತ್ತು ಬಿಜೆಪಿಯಿಂದ ಭರ್ಜರಿ ಪ್ರಚಾರ ನಡೆದಿತ್ತು. ಚುನಾವಣೆಗೆ ಮುನ್ನ ಅತಿಶಿ ಮತ್ತು ಬಿಧುರಿ ನಡುವಿನ ತೀಕ್ಷ್ಣವಾದ ವಾಕ್ಸಮರ ನಡೆದಿತ್ತು. ಕ್ಷೇತ್ರದಲ್ಲಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಯಾಗಿ ಅಲ್ಕಾ ಲಂಬಾ ಅವರನ್ನು ಕಣಕ್ಕಿಳಿಸಿತ್ತು. ಚುನಾವಣೆಯಲ್ಲಿ ಅತಿಶಿ ಅವರು 52,154 ಮತಗಳನ್ನು ಪಡೆದರೆ, ಬಿಜೆಪಿಯ ರಮೇಶ್ ಬಿಧುರಿ 48,633 ಪಡೆದು 3,521 ಮತಗಳಿಂದ ಸೋಲುಂಡಿದ್ದಾರೆ. ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಅಲ್ಕಾ ಲಂಬಾ 4,392 ಮತಗಳನ್ನು ಪಡೆದಿದ್ದಾರೆ.

ಮೂರು ಬಾರಿ ದೆಹಲಿ ಶಾಸಕರಾಗಿದ್ದ ರಮೇಶ್ ಬಿಧುರಿ, ಮುಖ್ಯಮಂತ್ರಿ ಅತಿಶಿ ತಮ್ಮ “ಮರ್ಲೆನಾ” ಎಂಬ ಉಪನಾಮವನ್ನು ಬಳಸುವುದನ್ನು ನಿಲ್ಲಿಸುವ ನಿರ್ಧಾರವನ್ನು ಟೀಕಿಸಿದ್ದರು. ಇದರ ನಂತರ ಅವರಿಬ್ಬರ ನಡುವೆ ತೀವ್ರ ವಾಕ್ಸಮರ ನಡೆಡಿತ್ತು. ಶಿಕ್ಷಣ ಸಲಹೆಗಾರರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದ 43 ವರ್ಷದ ಅತಿಶಿ ಅವರು, ರಾಷ್ಟ್ರ ರಾಜಧಾನಿಯಲ್ಲಿ ಶೈಕ್ಷಣಿಕ ಸುಧಾರಣೆಗಳನ್ನು ತರಲು ಆಗಿನ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದರು.

ಈ ನಡುವೆ, ಜಂಗ್‌ಪುರ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಥಿ ತರ್ವಿಂದರ್ ಸಿಂಗ್ ಮರ್ವಾ ಅವರ ಮುಂದೆ 675 ಮತಗಳ ಅಂತರದಿಂದ ಸೋಲುಂಡಿದ್ದಾರೆ. ಬಿಜೆಪಿಯ ತರ್ವಿಂದರ್ ಸಿಂಗ್‌ಗೆ 38,859 ಮತಗಳು ಲಭಿಸಿದ್ದರೆ, ಮನೀಶ್ ಅವರಿಗೆ 38,184 ಮತಗಳು ಸಿಕ್ಕಿವೆ. ಈ ನಡುವೆ ಕಾಂಗ್ರೆಸ್‌ನ ಫರಾದ್ ಸೂರಿ ಅವರಿಗೆ 7,350 ಮತಗಳು ಲಭಿಸಿದೆ.

ಎಎಪಿಯ ಮಾಜಿ ಸಚಿವ ಸತ್ಯೇಂದರ್ ಜೈನ್ ಅವರು ಶಕುರ್ ಬಸ್ತಿ ಕ್ಷೇತ್ರದಲ್ಲಿ ಬಿಜೆಪಿಯ ಕರ್ನೈಲ್ ಸಿಂಗ್ ವಿರುದ್ಧ 20,998 ಮತಗಳ ಅಂತರದಲ್ಲಿ ಹೀನಾಯವಾಗಿ ಸೋಲುಂಡಿದ್ದಾರೆ. ಕ್ಷೇತ್ರದಲ್ಲಿ ಬಿಜೆಪಿಗೆ 56,869 ಮತಗಳು ಲಭಿಸಿದ್ದರೆ, ಎಎಪಿಗೆ 35,871 ಹಾಗೂ ಕಾಂಗ್ರೆಸ್‌ನ ಸತೀಶ್ ಕುಮಾರ್ ಲೂತ್ರಾ ಅವರಿಗೆ 5,784 ಮತಗಳು ಲಭ್ಯವಾಗಿದೆ.

ಇದನ್ನೂಓದಿ:  Delhi Election Results 2025 | ಎಎಪಿ ಘಟಾನುಘಟಿಗಳ ಹೀನಾಯ ಸೋಲು; ಅತಿಶಿ ಗೆಲುವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...