HomeUncategorizedದೆಹಲಿ ಚುನಾವಣೆ: ಎಎಪಿಯ 'ಮಹಿಳಾ ಸಮ್ಮಾನ್' ನಂತರ ಕಾಂಗ್ರೆಸ್ 'ಪ್ಯಾರಿ ದೀದಿ' ಯೋಜನೆ

ದೆಹಲಿ ಚುನಾವಣೆ: ಎಎಪಿಯ ‘ಮಹಿಳಾ ಸಮ್ಮಾನ್’ ನಂತರ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ

- Advertisement -
- Advertisement -

ಹೊಸದಿಲ್ಲಿ: ನವದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷದ ನಂತರ ಈಗ ಕಾಂಗ್ರೆಸ್ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಭರವಸೆ ನೀಡಿದೆ. ಎಎಪಿಯ ‘ಮಹಿಳಾ ಸಮ್ಮಾನ್’ ಯೋಜನೆಯ ಮುಂದೆ ಕಾಂಗ್ರೆಸ್ ‘ಪ್ಯಾರಿ ದೀದಿ’ ಯೋಜನೆ ತರುವುದಾಗಿ ಭರವಸೆ ನೀಡಿದೆ.

ಹೊಸದಿಲ್ಲಿ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು  ದೆಹಲಿಯಲ್ಲಿ ಸರ್ಕಾರ ರಚನೆಯಾದ ನಂತರ ಪ್ಯಾರಿ ದೀದಿ ಯೋಜನೆಯಡಿ ಮಹಿಳೆಯರಿಗೆ 2500 ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ.

ಈ ಯೋಜನೆಯಡಿ ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂ. ಮಹಿಳಾ ಸಮ್ಮಾನ್ ಯೋಜನೆಯಡಿ ದೆಹಲಿಯ ಮಹಿಳೆಯರಿಗೆ ರೂ. 2100 ನೀಡುವುದಾಗಿ ಆಮ್ ಆದ್ಮಿ ಪಕ್ಷವು ಮೊದಲು ಭರವಸೆ ನೀಡಿತ್ತು. ಇದನ್ನು ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದರು. ಇದೀಗ ಕಾಂಗ್ರೆಸ್ ಕೂಡ ಮಹಿಳಾ ಮತದಾರರನ್ನು ಓಲೈಸಲು ‘ಪ್ಯಾರಿ ದೀದಿ ಯೋಜನೆ’ ಅಡಿಯಲ್ಲಿ ದೆಹಲಿಯ ಮಹಿಳೆಯರಿಗೆ ಪ್ರತಿ ತಿಂಗಳು 2500 ರೂಪಾಯಿ ನೀಡುವುದಾಗಿ ಭರವಸೆ ನೀಡಿದೆ.

ಈ ಹಿಂದೆ 2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ತಿಂಗಳಿಗೆ ರೂ.2000 ನೀಡುವ ಗೃಹಲಕ್ಷ್ಮೀ ಯೋಜನೆಯ ಭರವಸೆಯನ್ನು ಕಾಂಗ್ರೆಸ್ ನೀಡಿತ್ತು. ಆ ವರ್ಷ ಸರ್ಕಾರ ರಚನೆಯಾದ ನಂತರ, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ‘ಗೃಹ ಲಕ್ಷ್ಮಿ ಯೋಜನೆ’ ಅಡಿಯಲ್ಲಿ ಪ್ರತಿ ತಿಂಗಳು 2000 ರೂ.ಗಳನ್ನು ಮಹಿಳಾ ಖಾತೆಗಳಿಗೆ ವರ್ಗಾಯಿಸುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ ನಿರಂತರವಾಗಿ ಘೋಷಣೆಗಳನ್ನು ಮಾಡುತ್ತಿದೆ. ದೆಹಲಿಯ ಮಹಿಳೆಯರಿಗಾಗಿ ಮಹಿಳಾ ಸಮ್ಮಾನ್ ಯೋಜನೆ ಜೊತೆಗೆ, ಆಮ್ ಆದ್ಮಿ ಪಕ್ಷವು ವಿದೇಶದಲ್ಲಿ ಓದುತ್ತಿರುವ ದಲಿತ ವಿದ್ಯಾರ್ಥಿಗಳಿಗೆ ಸಂಪೂರ್ಣ ವೆಚ್ಚವನ್ನು ಭರಿಸುವುದಾಗಿ ಭರವಸೆ ನೀಡಿದೆ. ಇದಲ್ಲದೇ ಆಮ್ ಆದ್ಮಿ ಪಕ್ಷ ಹಲವು ಭರವಸೆಗಳನ್ನು ನೀಡಿದೆ.

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ  ‘ಪ್ಯಾರಿ ದೀದಿ’ ಯೋಜನೆ ಪ್ರಕಟಿಸಿ, ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವುದು ಇದರ ಉದ್ದೇಶವಾಗಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೂತನ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿ ಇದನ್ನು ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

‘ಪ್ಯಾರಿ ದೀದಿ ಯೋಜನೆ’ ಆರಂಭಿಸಲು ಇಂದು ಇಲ್ಲಿಗೆ ಬಂದಿದ್ದೇನೆ. ದೆಹಲಿಯಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಲಿದೆ ಎಂಬ ವಿಶ್ವಾಸ ನಮಗಿದ್ದು, ನೂತನ ಸಚಿವ ಸಂಪುಟದ ಮೊದಲ ದಿನವೇ ರಾಜಧಾನಿಯಲ್ಲಿ ಪ್ರತಿ ಮಹಿಳೆಗೆ 2,500 ರೂ.ನೀಡುವ ಯೋಜನೆಯನ್ನು ಜಾರಿಗೊಳಿಸುತ್ತೇವೆ. ‘ಕರ್ನಾಟಕ ಮಾದರಿ’ಯ ಪ್ರಕಾರ ದೆಹಲಿಯಲ್ಲೂ ಖಾತ್ರಿ ಜಾರಿಯಾಗಲಿದೆ ಎಂದು ಶಿವಕುಮಾರ್ ಹೇಳಿದ್ದಾರೆ.

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಕಾಂಗ್ರೆಸ್‌ನ ದೆಹಲಿ ಘಟಕದ ಮುಖ್ಯಸ್ಥ ದೇವೇಂದ್ರ ಯಾದವ್, ಪಕ್ಷದ ದೆಹಲಿ ಉಸ್ತುವಾರಿ ಖಾಜಿ ನಿಜಾಮುದ್ದೀನ್ ಮತ್ತು ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.

ವಚಾತಿ ನಾಯಕ ಷಣ್ಮುಗಂ ತಮಿಳುನಾಡು ಸಿಪಿಎಂ (ಎಂ) ಮೊದಲ ದಲಿತ ಕಾರ್ಯದರ್ಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಹತ್ಯೆ ಶಂಕೆಯ ಮೇಲಷ್ಟೇ ವಾಹನ ಜಪ್ತಿ ಮಾಡುವಂತಿಲ್ಲ: ಸಂತ್ರಸ್ತನಿಗೆ 15 ಲಕ್ಷ ರೂ. ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ಆದೇಶ

ಸೂಕ್ತ ಸಾಕ್ಷ್ಯಾಧಾರಗಳಿಲ್ಲದೆ ಕೇವಲ ಗೋಹತ್ಯೆಯ ಶಂಕೆಯ ಆಧಾರದ ಮೇಲೆ ವಾಹನವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸಂಪೂರ್ಣ ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಿಯಮಬಾಹಿರವಾಗಿ ವಾಹನ ಜಪ್ತಿ ಮಾಡಿ ಸಂತ್ರಸ್ತನಿಗೆ ನಷ್ಟ...

ಕ್ಯಾಬ್ ಚಾಲಕನಿಂದ ಕುಟುಂಬದ ಏಳು ಮಂದಿಯ ಹತ್ಯೆ ಪ್ರಕರಣ: ಎಲ್ಲ ಮೃತದೇಹಗಳೂ ಪತ್ತೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನೊಬ್ಬ ತನ್ನ ಕುಟುಂಬದ ಏಳು ಮಂದಿಯನ್ನು ಹತ್ಯೆ ಮಾಡಿರುವ ಆರೋಪದ ಪ್ರಕರಣದಲ್ಲಿ, ನವೆಂಬರ್ 9ರ ಸೋಮವಾರ ಕೊನೆಯ ಎರಡೂ ಮೃತದೇಹಗಳನ್ನೂ ಪೊಲೀಸರು ಪತ್ತೆಹಚ್ಚಿದ್ದಾರೆ. ಶಿರಾಡಿ ಘಾಟ್‌ನ ಅರಣ್ಯ...

ಪೆಟ್ರೋಲ್‌ನಲ್ಲಿ ನಿಗದಿಗಿಂತ ಹೆಚ್ಚಿನ ಎಥೆನಾಲ್ ಮಿಶ್ರಣ ಆರೋಪಕ್ಕೆ ಕರ್ನಾಟಕ ಸರ್ಕಾರ ಬದ್ಧ: ಸಚಿವ ರಿಜ್ವಾನ್ ಅರ್ಷದ್

ಪೆಟ್ರೋಲ್‌ನಲ್ಲಿ ನಿಗದಿಪಡಿಸಿರುವ ಶೇ.20ರ ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ತನ್ನ ವರದಿಗೆ ಕರ್ನಾಟಕ ಸರ್ಕಾರ ಬದ್ಧವಾಗಿದೆ ಎಂದು ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ...

ಫಿರೋಜಾಬಾದ್‌ನಲ್ಲಿ ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಭೀಕರ ಹಲ್ಲೆ: ಆಗ್ರಾ ಆಸ್ಪತ್ರೆಯಲ್ಲಿ 16ರ ಬಾಲಕಿ ಸಾವು 

ಉತ್ತರ ಪ್ರದೇಶ: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಮೂವರು ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರ ಮತ್ತು ಅತ್ಯಂತ ಕ್ರೂರ ಹಲ್ಲೆಗೊಳಗಾಗಿದ್ದ 16 ವರ್ಷದ ದಲಿತ ಬಾಲಕಿ, ಒಂದು ವಾರದ ಸಾವು ಬದುಕಿನ ಹೋರಾಟದ ಬಳಿಕ ಶುಕ್ರವಾರ...

ಗ್ಯಾನೇಶ್ ಕುಮಾರ್ ವಿರುದ್ಧ ಭ್ರಷ್ಟಾಚಾರ ತನಿಖೆ: ಕೇರಳದ ವಿಜಿಲೆನ್ಸ್ ಮುಂದೆ ಹಾಜರಾದ ಗುತ್ತಿಗೆದಾರ; ಹಿಂದಿನ ತನಿಖೆ ಸಾಕ್ಷ್ಯ ಮುಚ್ಚಿಹಾಕಿದ ಆರೋಪ

ತಿರುವನಂತಪುರಂ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ವಿರುದ್ಧದ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದ ತನಿಖೆ ಮತ್ತೆ ಮುನ್ನೆಲೆಗೆ ಬಂದಿದೆ. ಕೇರಳ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿಯಾಗಿ ಅವರು ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ನಡೆದ ರಸ್ತೆ...

ಸಿಂಧನೂರು| ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ದೌರ್ಜನ್ಯ; ತಿಡಿಗೋಳದಲ್ಲಿ ಬೃಹತ್‌ ಪ್ರತಿಭಟನೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ತಿಡಿಗೋಳ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಆಂಜನೇಯ ಜಾತ್ರೋತ್ಸವದಲ್ಲಿ ದಲಿತರ ಮೇಲೆ ಸವರ್ಣೀಯರಿಂದ ನಡೆದ ದೌರ್ಜನ್ಯ, ಸಾಮೂಹಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆ ಆಚರಣೆ ವಿರೋಧಿಸಿ ದಲಿತ ಮತ್ತು ಪ್ರಗತಿಪರ...

ಗೌರಿ ಲಂಕೇಶ್, ಕಲ್ಬುರ್ಗಿ ಹತ್ಯೆ ಪ್ರಕರಣ: 6 ತಿಂಗಳಲ್ಲಿ ವಿಚಾರಣೆ ಮುಗಿಸಿ ಆರೋಪಿಗಳನ್ನು ಜೈಲಿಗೆ ಕಳುಹಿಸುವೆ – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣಗಳ ವಿಚಾರಣೆಯನ್ನು ಮುಂಬರುವ ಆರು ತಿಂಗಳೊಳಗೆ ಪೂರ್ಣಗೊಳಿಸಿ, ಆರೋಪಿಗಳನ್ನು ಜೈಲಿಗೆ ಕಳುಹಿಸುವುದಾಗಿ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಕೇರಳದ...

ದೀಪಾವಳಿಯ ಮರುದಿನ ದಟ್ಟ ಹೊಗೆಯಿಂದ ಮುಸುಕಾದ ದೆಹಲಿ ಆಕಾಶ; ಅಪಾಯಕಾರಿ ಮಟ್ಟಕ್ಕೆ ಏರಿದ ವಾಯುಮಾಲಿನ್ಯ

ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಿಗದಿತ ಸಮಯ ಮೀರಿಯೂ ನಗರದಾದ್ಯಂತ ಪಟಾಕಿ ಸಿಡಿಸಿದ ಪರಿಣಾಮ, ಸೋಮವಾರ ಬೆಳಗ್ಗೆ ದೆಹಲಿ ತೀವ್ರ ವಾಯುಮಾಲಿನ್ಯದ ಹೊಡೆತಕ್ಕೆ ಸಿಲುಕಿದೆ. ದಟ್ಟ ಬೂದು ಬಣ್ಣದ ಹೊಗೆಯ ಮಂಜು ನಗರದ ಆಕಾಶವನ್ನು...

‘ಉತ್ತರ ಪ್ರದೇಶದಲ್ಲಿ ನಾಗರಿಕ ಸ್ವಾತಂತ್ರ್ಯದ ಸ್ಥಿತಿ ನಾಚಿಕೆಗೇಡಿನದ್ದು’; ಹಕ್ಕುಗಳ ಉಲ್ಲಂಘನೆ ಪೊಲೀಸರಿಗೆ ದಿನನಿತ್ಯದ ಸಂಗತಿ: ಅಲಹಾಬಾದ್ ಹೈಕೋರ್ಟ್

ಲಕ್ನೋ: ಉತ್ತರ ಪ್ರದೇಶದಲ್ಲಿ ಪೊಲೀಸರಿಂದ ನಾಗರಿಕರ ಮೂಲಭೂತ ಹಕ್ಕುಗಳ ಉಲ್ಲಂಘನೆ ನಿರಂತರವಾಗಿ ನಡೆಯುತ್ತಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಅಲಹಾಬಾದ್ ಹೈಕೋರ್ಟ್, ರಾಜ್ಯದಲ್ಲಿನ ನಾಗರಿಕ ಸ್ವಾತಂತ್ರ್ಯದ ಪರಿಸ್ಥಿತಿಯನ್ನು 'ನಾಚಿಕೆಗೇಡಿನದ್ದು' ಎಂದು ಬಣ್ಣಿಸಿದೆ. ನಾಗರಿಕರ...

ಗಾಜಾದಲ್ಲಿ ಟೆಂಟ್‌ಗಳ ಮೇಲೆ ಕುಸಿದ ಮರಳಿನ ದಿಬ್ಬ; ನಾಲ್ವರು ಮಕ್ಕಳು ಸೇರಿ ಐವರ ಸಾವು

ಮಧ್ಯ ಗಾಜಾದ ದೇರ್ ಅಲ್-ಬಲಾಹ್‌ನಲ್ಲಿ ಸ್ಥಳಾಂತರಗೊಂಡ ಕುಟುಂಬಗಳು ಆಶ್ರಯ ಪಡೆದಿದ್ದ ಟೆಂಟ್‌ಗಳ ಮೇಲೆ ಮರಳಿನ ದಿಬ್ಬ ಕುಸಿದು ಬಿದ್ದ ಪರಿಣಾಮ ನಾಲ್ವರು ಮಕ್ಕಳು ಮತ್ತು ಓರ್ವ ಮಹಿಳೆ ಸೇರಿದಂತೆ ಕನಿಷ್ಠ ಐವರು ಪ್ಯಾಲೆಸ್ತೀನಿಯರು...