Homeಮುಖಪುಟದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ - ಕೇಜ್ರಿವಾಲ್

ದೆಹಲಿ ಚುನಾವಣೆ | ಬಿಜೆಪಿ ಎಎಪಿಯನ್ನು ನಕಲು ಮಾಡಿದೆ – ಕೇಜ್ರಿವಾಲ್

- Advertisement -
- Advertisement -

ಬಿಜೆಪಿ ಪಕ್ಷವೂ ಎಎಪಿಯನ್ನು “ನಕಲು” ಮಾಡಿ ತನ್ನ ದೆಹಲಿ ಚುನಾವಣಾ ಪ್ರಣಾಳಿಕೆಯಲ್ಲಿ ಹಲವಾರು ‘ಉಚಿತ ಘೋಷಣೆ’ಗಳನ್ನು ಘೋಷಿಸಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಪಕ್ಷವು ಭರವಸೆ ನೀಡಿದ “ಉಚಿತ ಕೊಡುಗೆಗಳನ್ನು” ಅನುಮೋದಿಸುವುದಿಲ್ಲ ಎಂದು ದೆಹಲಿಯ ಮಾಜಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಶುಕ್ರವಾರ ವ್ಯಂಗ್ಯವಾಡಿದ್ದಾರೆ. ದೆಹಲಿ ಚುನಾವಣೆಗೆ ಬಿಜೆಪಿ

ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಬಿಡುಗಡೆ ಮಾಡಿದ ಪಕ್ಷದ ಪ್ರಣಾಳಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಕೇಜ್ರಿವಾಲ್, ಎಎಪಿ ಉಚಿತ ಕೊಡುಗೆಗಳನ್ನು ಜನರಿಗೆ ನೀಡಿದ್ದಕ್ಕಾಗಿ ಟೀಕಿಸಿದ್ದ ಪ್ರಧಾನಿ ಮೋದಿ ಅವರು ಈಗಲಾದರೂ ಅವರ ನಡೆಯನ್ನು “ತಪ್ಪು” ಎಂದು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಕೇಜ್ರಿವಾಲ್ ಉಚಿತ ಕೊಡುಗೆಗಳನ್ನು ನೀಡುತ್ತಾರೆ ಎಂದು ಬಿಜೆಪಿ ಪದೇ ಪದೇ ಹೇಳುತ್ತಿದೆ. ಆದರೆ ಇಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರು ದೆಹಲಿಯ ಜನರಿಗೆ ಉಚಿತ ಕೊಡುಗೆಗಳನ್ನು ನೀಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ನಮ್ಮ ಬಗ್ಗೆ ಮಾಡಿದ ಟೀಕೆಗಳು ತಪ್ಪು ಎಂದು ಅವರು ಒಪ್ಪಿಕೊಳ್ಳಬೇಕು ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ.” ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಮೋದಿ ಅವರು ಮುಂದೆ ಬಂದು ಬಿಜೆಪಿಯ ಈ ಭರವಸೆಗಳಿಗೆ ಸಮ್ಮತಿಸುವುದಾಗಿ ಹೇಳಿಕೆ ನೀಡಬೇಕು. ಉಚಿತ ಯೋಜನೆಗಳನ್ನು ನೀಡುತ್ತಿರುವ ನಮ್ಮ ನಡೆಯು ಸರಿಯಾಗಿದೆ ಎಂದು ಅವರು ಹೇಳಬೇಕು” ಎಂದು ಕೇಜ್ರಿವಾಲ್ ಹೇಳಿದ್ದಾರೆ. ಬಿಜೆಪಿಯು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯನ್ನು ಎಎಪಿ ಈಗಾಗಲೇ ನೀಡುತ್ತಿರುವುದೆ ಆಗಿದೆ ಎಂದು ಅವರು ಹೇಳಿದ್ದಾರೆ.

“ನಾವು ನೀಡುತ್ತಿರುವ ಯೋಜನೆಗಳನ್ನು ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಾರೆ. ಹಾಗಾದರೆ ಜನರು ಅವರಿಗೆ ಏಕೆ ಮತ ಹಾಕಬೇಕು? ಕಾನೂನು ಮತ್ತು ಸುವ್ಯವಸ್ಥೆಯ ಸುಧಾರಣೆಗಳ ಕುರಿತು ಅವರು ಪ್ರಣಾಳಿಕೆಯಲ್ಲಿ ಯಾವುದೇ ಭರವಸೆಯನ್ನು ನೀಡಿಲ್ಲ. ಅವರ ಚುನಾವಣಾ ಪ್ರಣಾಳಿಕೆ ಸುಳ್ಳುಗಳ ಕಂತೆ” ಎಂದು ಬಣ್ಣಿಸಿದ್ದಾರೆ. ದೆಹಲಿ ಚುನಾವಣೆಗೆ ಬಿಜೆಪಿ

ಬಿಜೆಪಿ ಹಳೆಯ ಯೋಜನೆಗಳ ಭರವಸೆ ಮಾತ್ರ ನೀಡಿದೆ. ಆದರೆ ಅವುಗಳನ್ನು ಈಡೇರಿಸಲು ವಿಫಲವಾಗಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದಾರೆ. ಮೊಹಲ್ಲಾ ಚಿಕಿತ್ಸಾಲಯಗಳನ್ನು ಮುಚ್ಚಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಜನರಿಗೆ ಈ ಚಿಕಿತ್ಸಾಲಯಗಳು ಬೇಕಾ ಅಥವಾ ಬೇಡವೇ ಎಂದು ಕೇಳಲು ಎಎಪಿ ದೆಹಲಿಯಾದ್ಯಂತ ಸಂಚರಿಸಲಿದೆ ಎಂದು ಮಾಜಿ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂಓದಿ:  ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ಬೆಂಗಳೂರಿನಲ್ಲಿ ಯುಎಸ್‌ ಕಾನ್ಸುಲೇಟ್ ಕಚೇರಿ ಕಾರ್ಯಾರಂಭ : ಬಿಜೆಪಿ-ಕಾಂಗ್ರೆಸ್‌ ನಡುವೆ ಕ್ರೆಡಿಟ್ ಕಿತ್ತಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...