Homeಮುಖಪುಟದೆಹಲಿ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ದೆಹಲಿ ಚುನಾವಣೆ | ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

- Advertisement -
- Advertisement -

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ 29 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದೆ. ಪಶ್ಚಿಮ ದೆಹಲಿಯ ಮಾಜಿ ಸಂಸದ ಪರ್ವೇಶ್ ವರ್ಮಾ ಅವರನ್ನು ನವದೆಹಲಿ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದ್ದು, ಅವರು ಎಎಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಎದುರಿಸಲಿದ್ದಾರೆ. ಮೂರು ಬಾರಿ ಮುಖ್ಯಮಂತ್ರಿಯಾಗಿದ್ದ ಶೀಲಾ ದೀಕ್ಷಿತ್ ಅವರ ಪುತ್ರ ಸಂದೀಪ್ ದೀಕ್ಷಿತ್ ಅವರನ್ನು ಕಾಂಗ್ರೆಸ್ ಇದೇ ಕ್ಷೇತ್ರದಿಂದ ಕಣಕ್ಕಿಳಿಸಿದೆ. ದೆಹಲಿ ಚುನಾವಣೆ

ಕಲ್ಕಾಜಿಯಿಂದ ಮುಖ್ಯಮಂತ್ರಿ ಅತಿಶಿ ವಿರುದ್ಧ ದಕ್ಷಿಣ ದೆಹಲಿಯ ಮಾಜಿ ಸಂಸದ ರಮೇಶ್ ಬಿಧುರಿ ಅವರನ್ನು ಬಿಜೆಪಿ ಹೆಸರಿಸಿದೆ. ಪಕ್ಷವು ಎಎಪಿಯ ಮಾಜಿ ಸಚಿವ ಕೈಲಾಶ್ ಗಹ್ಲೋಟ್ ಅವರನ್ನು ಬಿಜ್ವಾಸನ್ ಮತ್ತು ದೆಹಲಿಯ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಅವರನ್ನು ಗಾಂಧಿ ನಗರದಿಂದ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಗೆಹ್ಲೋಟ್ ಅವರು ನವೆಂಬರ್‌ನಲ್ಲಿ ಬಿಜೆಪಿ ಸೇರಿದ್ದರೆ, ಲವ್ಲಿ ಅವರು ಮೇ ತಿಂಗಳಲ್ಲಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಫೆಬ್ರವರಿಯಲ್ಲಿ ಅಥವಾ ಅದಕ್ಕೂ ಮೊದಲು ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಚುನಾವಣಾ ಆಯೋಗ ಇನ್ನೂ ವೇಳಾಪಟ್ಟಿ ಪ್ರಕಟಿಸಿಲ್ಲ. ದೆಹಲಿ ಚುನಾವಣೆ

ಬಿಜೆಪಿ ನಾಯಕ ವಿಜೇಂದರ್ ಗುಪ್ತಾ ರೋಹಿಣಿ ಕ್ಷೇತ್ರದಿಂದ ಮತ್ತು ಆಶಿಶ್ ಸೂದ್ ಜನಕಪುರಿಯಿಂದ ಪಕ್ಷದ ಅಭ್ಯರ್ಥಿಗಳಾಗಿದ್ದಾರೆ. ಇತರ ಪ್ರಮುಖ ಅಭ್ಯರ್ಥಿಗಳು ಆರ್‌ಕೆ ಪುರಂನಿಂದ ಅನಿಲ್ ಶರ್ಮಾ, ಮಾಳವೀಯ ನಗರದಿಂದ ಸತೀಶ್ ಉಪಾಧ್ಯಾಯ, ಪಟ್ಪರ್ಗಂಜ್‌ನಿಂದ ರವೀಂದರ್ ಸಿಂಗ್ ನೇಗಿ ಮತ್ತು ಮಾಡೆಲ್ ಟೌನ್‌ನಿಂದ ಅಶೋಕ್ ಗೋಯೆಲ್ ಸ್ಪರ್ಧಿಸಲಿದ್ದಾರೆ.

ಪಕ್ಷವು ಜಂಗ್‌ಪುರ ಕ್ಷೇತ್ರದಿಂದ ಸರ್ದಾರ್ ತರ್ವಿಂದರ್ ಸಿಂಗ್ ಮರ್ವಾ ಅವರನ್ನು ಹೆಸರಿಸಿದ್ದು, ಅವರು ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸ್ಪರ್ಧಿಸಲಿದ್ದಾರೆ. ಆಮ್ ಆದ್ಮಿ ಪಕ್ಷ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದರೆ, ಕಾಂಗ್ರೆಸ್ ಇದುವರೆಗೆ ಮೂರು ಪಟ್ಟಿಗಳಲ್ಲಿ 47 ಅಭ್ಯರ್ಥಿಗಳನ್ನು ಮಾತ್ರ ಹೆಸರಿಸಿದೆ.

ಇದನ್ನೂ ಓದಿ: ಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನ ಆರಂಭಿಸಿದ ಕಾಂಗ್ರೆಸ್

ಅಂಬೇಡ್ಕರ್ ವಿರೋಧಿ ಅಮಿತ್ ಶಾ ವಿರುದ್ಧ, ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಅಭಿಯಾನ ಆರಂಭಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...