Homeಮುಖಪುಟದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

ದೆಹಲಿ ಚುನಾವಣೆ: 96 ಮಹಿಳಾ ಸ್ಪರ್ಧಿಗಳಲ್ಲಿ ಗೆದ್ದವರೆಷ್ಟು?

- Advertisement -
- Advertisement -

ದೆಹಲಿಯಲ್ಲಿ ಒಂದು ದಶಕದಲ್ಲಿಯೇ ಅತ್ಯಂತ ಕಡಿಮೆ ಎಂದರೆ 5 ಮಹಿಳಾ ಶಾಸಕರು ಸ್ಥಾನ ಪಡೆದಿದ್ದಾರೆ. 2025ರ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು ಸ್ಪರ್ಧಿಸಿದ್ದರು. ಇದರಲ್ಲಿ ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸ್ಪರ್ಧಿಸಿದ್ದರು.

ನವದೆಹಲಿ: ಈ ವರ್ಷ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಸುಮಾರು 100 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಆದರೆ ಕೇವಲ ಐವರು ಅಂದರೆ ಬಿಜೆಪಿಯಿಂದ 4 ಮತ್ತು ಎಎಪಿಯಿಂದ ಒಬ್ಬರು ವಿಜೇತರಾಗಿ ಹೊರಹೊಮ್ಮಲು ಸಾಧ್ಯವಾಗಿದೆ. ಕಳೆದ 10 ವರ್ಷಗಳಲ್ಲಿ ಇದು ಅತ್ಯಂತ ಕಡಿಮೆಯಾಗಿದೆ.

ಈ ಬಾರಿ ಗೆದ್ದ ಎಎಪಿಯ ಏಕೈಕ ಮಹಿಳಾ ಅಭ್ಯರ್ಥಿ ನಿರ್ಗಮಿತ ಮುಖ್ಯಮಂತ್ರಿ ಅತಿಶಿ, ಹೊಸದಾಗಿ ಆಯ್ಕೆಯಾದ ಐದು ಮಹಿಳಾ ಶಾಸಕರಲ್ಲಿ ಒಬ್ಬರಾಗಿದ್ದಾರೆ. ಮಹಿಳಾ ಶಾಸಕಿಯರು ಈಗ ದೆಹಲಿಯ 70 ಸದಸ್ಯರ ವಿಧಾನಸಭೆಯಲ್ಲಿ 7%ರಷ್ಟಿದ್ದಾರೆ.

ಈ ವರ್ಷ 699 ಅಭ್ಯರ್ಥಿಗಳಲ್ಲಿ 96 ಮಹಿಳೆಯರು, ಬಿಜೆಪಿ ಮತ್ತು ಎಎಪಿಯಿಂದ ತಲಾ 9 ಮತ್ತು ಕಾಂಗ್ರೆಸ್‌ನಿಂದ 7 ಮಂದಿ ಸೇರಿದಂತೆ ಸ್ಪರ್ಧಿಸಿದ್ದರು. ಮೂರು ಪ್ರಮುಖ ರಾಜಕೀಯ ಪಕ್ಷಗಳು ಈ ಬಾರಿ 2020ರ ವಿಧಾನಸಭಾ ಚುನಾವಣೆಗಿಂತ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

1993ರಲ್ಲಿ ದೆಹಲಿ ವಿಧಾನಸಭೆಯನ್ನು ಪುನರ್ ರಚಿಸಿದ ನಂತರ ಈ ವರ್ಷ ಇದೇ ಮೊದಲ ಬಾರಿಗೆ ಹೆಚ್ಚಿನ ಮಹಿಳಾ ಮತದಾರರು ಅಂದರೆ 60.9% ರಷ್ಟು ಮತದಾನವನ್ನು ಚಲಾಯಿಸಿದ್ದು ದಾಖಲಾಗಿದೆ. ಫೆಬ್ರವರಿ 5ರಂದು ನಡೆದ ಒಂದೇ ಹಂತದ ಚುನಾವಣೆಯಲ್ಲಿ 72.36 ಲಕ್ಷ ನೋಂದಾಯಿತ ಮಹಿಳಾ ಮತದಾರರಲ್ಲಿ ಸುಮಾರು 44.08 ಲಕ್ಷ ಜನರಿಗೆ ಸಹಿ ಹಾಕಲಾಗಿದೆ.

2025ರ ದೆಹಲಿ ಚುನಾವಣೆಯಲ್ಲಿ ಗೆದ್ದ ಮಹಿಳೆಯರು

ಅತಿಶಿ: ಅವರು ತಮ್ಮ ಕಲ್ಕಾಜಿ ಸ್ಥಾನವನ್ನು ಉಳಿಸಿಕೊಂಡಿದ್ದಾರೆ ಮತ್ತು ಬಿಜೆಪಿಯ ರಮೇಶ್ ಬಿಧುರಿ ಅವರನ್ನು ಸೋಲಿಸಿ 3,521 ಮತಗಳ ಅಂತರದಿಂದ ಚುನಾವಣೆಯಲ್ಲಿ ಗೆದಿದ್ದಾರೆ. ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸೌರಭ್ ಭಾರದ್ವಾಜ್ ಮತ್ತು ಸತ್ಯೇಂದರ್ ಜೈನ್ ಸೇರಿದಂತೆ ಪಕ್ಷದ ಹೆಚ್ಚಿನ ಪ್ರಮುಖ ನಾಯಕರು ಸೋತಿದ್ದರಿಂದ ಚುನಾವಣೆಯಲ್ಲಿ ಗೆದ್ದ ಕೆಲವು ಎಎಪಿ ಸಚಿವರು ಮತ್ತು ಹಿರಿಯ ನಾಯಕರಲ್ಲಿ ಅತಿಶಿ ಕೂಡ ಒಬ್ಬರಾಗಿದ್ದಾರೆ.

ನೀಲಂ ಪಹೇಲ್ವಾನ್: ನಜಾಫ್‌ಗಢದ ಬಿಜೆಪಿ ಅಭ್ಯರ್ಥಿ ನೀಲಂ ಪಹೇಲ್ವಾನ್ ತಮ್ಮ ಹತ್ತಿರದ ಪ್ರತಿಸ್ಪರ್ಧಿ ಎಎಪಿಯ ತರುಣ್ ಕುಮಾರ್ ಅವರನ್ನು ಸುಮಾರು 30,000 ಮತಗಳಿಂದ ಸೋಲಿಸಿದ್ದಾರೆ.

ರೇಖಾ ಗುಪ್ತಾ: ಶಾಲಿಮಾರ್ ಬಾಗ್ ಸ್ಥಾನದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಎಎಪಿಯ ಬಂದಾನ ಕುಮಾರಿ ಅವರನ್ನು 29,595 ಮತಗಳಿಂದ ಸೋಲಿಸಿದ್ದಾರೆ.

ಪೂನಂ ಶರ್ಮಾ: ಬಿಜೆಪಿ ಅಭ್ಯರ್ಥಿಯಾದ ಇವರು ವಜೀರ್‌ಪುರ ಕ್ಷೇತ್ರದಲ್ಲಿ ಎಎಪಿಯ ರಾಜೇಶ್ ಗುಪ್ತಾ ಅವರನ್ನು 11,425 ಮತಗಳಿಂದ ಸೋಲಿಸಿದ್ದಾರೆ.

ಶಿಖಾ ರಾಯ್: ಗ್ರೇಟರ್ ಕೈಲಾಶ್‌ನಿಂದ ಹಾಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಅವರನ್ನು 3,188 ಮತಗಳ ಅಂತರದಿಂದ ಸೋಲಿಸುವ ಮೂಲಕ ಬಿಜೆಪಿ ನಾಯಕಿ ವಿಜಯಶಾಲಿಯಾಗಿದ್ದಾರೆ.

ಈ ಹಿಂದಿನ ದೆಹಲಿಯ ಮಹಿಳಾ ಶಾಸಕರತ್ತ ಒಂದು ನೋಟ
1993ರಿಂದ ಇಲ್ಲಿಯವರೆಗೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇವಲ 44 ಮಹಿಳಾ ಅಭ್ಯರ್ಥಿಗಳು ಮಾತ್ರ ಗೆದ್ದಿದ್ದಾರೆ. 1998ರಲ್ಲಿ 9 ಮಹಿಳೆಯರು ಗೆದ್ದಿದ್ದರು. 1993ರಲ್ಲಿ ಕೇವಲ 3 ಮಹಿಳೆಯರು ಆಯ್ಕೆಯಾಗಿದ್ದರು. ಇದು ವಿಧಾನಸಭೆಯ ಶೇಕಡಾ 4.3ರಷ್ಟಿತ್ತು.

2003ರಲ್ಲಿ ಏಳು ಮಹಿಳೆಯರು ಆಯ್ಕೆಯಾಗಿದ್ದರು ಮತ್ತು 2008 ಮತ್ತು 2013ರ ಎರಡೂ ಚುನಾವಣೆಗಳಲ್ಲಿ ಈ ಸಂಖ್ಯೆ ಮೂರಕ್ಕೆ ಇಳಿಯಿತು. 2015ರಲ್ಲಿ, ಒಟ್ಟು 63 ಮಹಿಳೆಯರು ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಮತ್ತು ಅವರಲ್ಲಿ 6 ಮಂದಿ ಗೆದ್ದರು.

2020ರ ಚುನಾವಣೆಯಲ್ಲಿ ಸ್ಪರ್ಧಿಸಿದ 672 ನಾಮನಿರ್ದೇಶಿತರಲ್ಲಿ 76 ಮಹಿಳೆಯರು ಸೇರಿದ್ದರು. ಅವರಲ್ಲಿ 8 ಮಹಿಳೆಯರು ಗೆದ್ದಿದ್ದರು.

ದೆಹಲಿ ಇಲ್ಲಿಯವರೆಗೆ ಕೇವಲ ಮೂವರು ಮಹಿಳಾ ಮುಖ್ಯಮಂತ್ರಿಗಳನ್ನು ಮಾತ್ರ ಕಂಡಿದೆ. 1998ರಲ್ಲಿ ಬಿಜೆಪಿಯ ಸುಷ್ಮಾ ಸ್ವರಾಜ್, 1998ರಿಂದ 2013ರವರೆಗೆ 15 ವರ್ಷಗಳ ಕಾಲ ರಾಜಧಾನಿಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಕಾಂಗ್ರೆಸ್‌ನ ಶೀಲಾ ದೀಕ್ಷಿತ್ ಮತ್ತು ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ ನಂತರ ಉನ್ನತ ಹುದ್ದೆಯನ್ನು ಅಲಂಕರಿಸಿದ ನಗರದ ಕಿರಿಯ ಮುಖ್ಯಮಂತ್ರಿ ಎಎಪಿಯ ಅತಿಶಿಯಾಗಿದ್ದಾರೆ.

ಎಎಪಿ ಸೋಲಿಗೆ ದಲಿತ ಮತದಾರರು ಕಾರಣವಾಗಿದ್ದು ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...