Homeಮುಖಪುಟದೆಹಲಿ ಅಬಕಾರಿ ಪ್ರಕರಣ: ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ಪ್ರಕರಣ: ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಅರವಿಂದ್ ಕೇಜ್ರಿವಾಲ್

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜುಲೈ 12 ರವರೆಗೆ ನ್ಯಾಯಾಂಗ ಬಂಧನಕ್ಕೆ ರೋಸ್ ಅವೆನ್ಯೂ ಕೋರ್ಟ್ ಶನಿವಾರ ಕಳುಹಿಸಿದೆ. ಮುಖ್ಯಮಂತ್ರಿಯ ನ್ಯಾಯಾಂಗ ಬಂಧನಕ್ಕೆ ಕೋರಿ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿದ ಅರ್ಜಿಯ ಆದೇಶವನ್ನು ನ್ಯಾಯಾಲಯವು ಈ ಹಿಂದೆ ಕಾಯ್ದಿರಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ನ್ಯಾಯಾಂಗ ಬಂಧನಕ್ಕೆ ಕೋರಿ ರೌಸ್ ಅವೆನ್ಯೂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಅರವಿಂದ್ ಕೇಜ್ರಿವಾಲ್ ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಉದ್ದೇಶಪೂರ್ವಕವಾಗಿ ಪ್ರಶ್ನೆಗಳಿಗೆ ನೇರ ಉತ್ತರ ನೀಡುವುದನ್ನು ತಪ್ಪಿಸುತ್ತಿದ್ದಾರೆ ಎಂದು ಸಿಬಿಐ ಹೇಳಿದೆ.

ನ್ಯಾಯಾಲಯದಲ್ಲಿ ಸಿಬಿಐ ಹೇಳಿದ್ದೇನು?

“ಕೇಜ್ರಿವಾಲ್ ಅವರು ತನಿಖೆಯ ಮೇಲೆ ಪ್ರಭಾವ ಬೀರುವ ಪ್ರಮುಖ ರಾಜಕೀಯ ವ್ಯಕ್ತಿಯಾಗಿದ್ದಾರೆ. ಸಿಎಂ ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ಪ್ರಶ್ನೆಗಳಿಗೆ ಸರಿಯಾದ ಮತ್ತು ನೇರ ಉತ್ತರವನ್ನು ನೀಡಲಿಲ್ಲ” ಎಂದು ಆರೋಪಿಸಿದೆ.

ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ, ದಕ್ಷಿಣ ಗುಂಪಿನ ಆರೋಪಿಗಳು ದೆಹಲಿಯಲ್ಲಿ ಮೊಕ್ಕಾಂ ಹೂಡಿರುವ ಸಂದರ್ಭದಲ್ಲಿ, ಕೇವಲ ಒಂದು ದಿನದೊಳಗೆ ಪರಿಷ್ಕೃತ ಅಬಕಾರಿ ಸುಂಕ ನೀತಿಗೆ ಕ್ಯಾಬಿನೆಟ್ ಅನುಮೋದನೆಯನ್ನು ತರಾತುರಿಯಲ್ಲಿ ಏಕೆ ಪಡೆಯಲಾಯಿತು ಎಂಬುದನ್ನು ವಿವರಿಸಲು ಕೇಜ್ರಿವಾಲ್‌ಗೆ ಸಾಧ್ಯವಾಗಲಿಲ್ಲ ಎಂದು ಸಿಬಿಐ ಹೇಳಿದೆ. ಅದೂ ಸಹ ಅವರ ನಿಕಟವರ್ತಿ ವಿಜಯ್ ನಾಯರ್ ಜೊತೆಗಿನ ಸಭೆಗಳನ್ನು ನಡೆಸುವುದು, ನಾಯರ್ ಮತ್ತು ವಿವಿಧ ಪಾಲುದಾರರೊಂದಿಗಿನ ಅವರ ಸಭೆಗಳ ಬಗ್ಗೆ ಪ್ರಶ್ನೆಗಳನ್ನು ತಪ್ಪಿಸಿದರು ಎಂದು ಹೇಳಿದೆ.

ಆಪಾದಿತ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಏಜೆನ್ಸಿ ಅವರನ್ನು ಬಂಧಿಸಿದ ನಂತರ ದೆಹಲಿ ನ್ಯಾಯಾಲಯವು ಬುಧವಾರ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮೂರು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಕಳುಹಿಸಿದೆ. ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು. ಮಾರ್ಚ್ 21 ರಂದು, ಈಗ ರದ್ದಾದ ನೀತಿಗೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅವರನ್ನು ಬಂಧಿಸಿತು. ಅವರಿಗೆ ವಿಚಾರಣಾ ನ್ಯಾಯಾಲಯ ಜಾಮೀನು ನೀಡಿದ್ದು, ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸಿಬಿಐ ಮತ್ತು ಇಡಿ ತನಿಖೆ ನಡೆಸುತ್ತಿರುವ ಎರಡೂ ಪ್ರಕರಣಗಳಲ್ಲಿ ಕೇಜ್ರಿವಾಲ್ ಅವರು ಜಾಮೀನು ಪಡೆಯಲು ವಿಫಲರಾದರೆ, ಪ್ರಸ್ತುತ ಪ್ರಕರಣದಲ್ಲಿ ಅವರ ಪೊಲೀಸ್ ಕಸ್ಟಡಿ ಮುಗಿದ ನಂತರ ಅವರು ನ್ಯಾಯಾಂಗ ಬಂಧನಕ್ಕೆ ಹಿಂತಿರುಗುತ್ತಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಜೂನ್ 19 ರಂದು ನ್ಯಾಯಾಲಯ ಜುಲೈ 3 ರವರೆಗೆ ವಿಸ್ತರಿಸಿತ್ತು.

ಇದನ್ನೂ ಓದಿ; ಇಂದಿರಾ ಗಾಂಧಿ ನಮ್ಮನ್ನು ಜೈಲಿಗೆ ಹಾಕಿದರು, ಆದರೆ ಎಂದಿಗೂ ನಿಂದಿಸಲಿಲ್ಲ: ಲಾಲು ಪ್ರಸಾದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...