Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸಲು ಇಡಿ-ಸಿಬಿಐಗೆ ಹೆಚ್ಚಿನ ಸಮಯ ನೀಡಿದ...

ದೆಹಲಿ ಅಬಕಾರಿ ನೀತಿ ಪ್ರಕರಣ: ಸಿಸೋಡಿಯಾ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸಲು ಇಡಿ-ಸಿಬಿಐಗೆ ಹೆಚ್ಚಿನ ಸಮಯ ನೀಡಿದ ಕೋರ್ಟ್

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಮನವಿಗೆ ತಮ್ಮ ಉತ್ತರಗಳನ್ನು ಸಲ್ಲಿಸಲು ದೆಹಲಿ ಹೈಕೋರ್ಟ್ ಬುಧವಾರ ಇಡಿ ಮತ್ತು ಸಿಬಿಐಗೆ ಹೆಚ್ಚಿನ ಸಮಯವನ್ನು ನೀಡಿದೆ.

ಅರ್ಜಿಗಳಿಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ಕೋರಿ ಮೇ 3 ರಂದು ಎರಡು ಏಜೆನ್ಸಿಗಳಿಗೆ ನೋಟಿಸ್ ಜಾರಿ ಮಾಡಿದ್ದ ನ್ಯಾಯಮೂರ್ತಿ ಸ್ವರಣಾ ಕಾಂತ ಶರ್ಮಾ ಅವರು, ಬುಧವಾರ ವಿಚಾರಣೆಗೆ ವಿಷಯವನ್ನು ಪಟ್ಟಿ ಮಾಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮತ್ತು ಸಿಬಿಐ ಪರ ವಕೀಲರು ತಿಳಿಸಿದ್ದಾರೆ. ಪ್ರತಿಕ್ರಿಯೆ ನೀಡಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮನವಿ ಮಾಡಿದರು.

ತನಿಖಾ ಸಂಸ್ಥೆಗಳ ವಕೀಲರು ಮಾಡಿದ ಮನವಿಯನ್ನು ಸಿಸೋಡಿಯಾ ಅವರ ವಕೀಲರು ವಿರೋಧಿಸಿದರು. “ತಮ್ಮ ಕಕ್ಷಿದಾರರು ಜೈಲಿನಲ್ಲಿದ್ದಾರೆ, ಆರು ತಿಂಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸುವುದಾಗಿ ಇಡಿ ಮತ್ತು ಸಿಬಿಐ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿವೆ” ಎಂದು ಕೋರ್ಟ್‌ ಗಮನಕ್ಕೆ ತಂದರು.

ಹೈಕೋರ್ಟ್ ತನ್ನ ಆದೇಶ ನೀಡಿದ್ದು, “ಪ್ರತಿವಾದಿಗಳು ಉತ್ತರವನ್ನು ಸಲ್ಲಿಸಲು ಹೆಚ್ಚಿನ ಸಮಯವನ್ನು ಬಯಸುತ್ತಾರೆ. ಪ್ರಕರಣದ ಸಹ ಆರೋಪಿಗೆ ಸಂಬಂಧಿಸಿದಂತೆ ಮತ್ತೊಂದು ಪ್ರಾಸಿಕ್ಯೂಷನ್ ದೂರನ್ನು ದಾಖಲಿಸುವ ಪ್ರಕ್ರಿಯೆಯಲ್ಲಿ ಇಡಿ ಇದೆ” ಎಂದು ಹೇಳಲಾಗಿದೆ.

“ಆರೋಪಿಯು ಕಸ್ಟಡಿಯಲ್ಲಿದ್ದಾರೆ ಮತ್ತು ಪ್ರತಿವಾದಿಗಳಿಗೆ ತಮ್ಮ ಉತ್ತರಗಳನ್ನು ಸಲ್ಲಿಸಲು ಇನ್ನೂ ನಾಲ್ಕು ದಿನಗಳ ಕಾಲಾವಕಾಶ ನೀಡಲಾಗಿದೆ. ಉತ್ತರವನ್ನು ಸೋಮವಾರದೊಳಗೆ ನ್ಯಾಯಾಲಯದ ದಾಖಲೆಯಲ್ಲಿ ಇರಿಸಲಾಗುತ್ತದೆ, ಮುಂಗಡ ಪ್ರತಿಯನ್ನು ಇತರ ಕಡೆಗೂ ಒದಗಿಸಲಾಗುತ್ತದೆ” ಎಂದು ನ್ಯಾಯಾಲಯವು ಹೇಳಿದ್ದು, ಮೇ 14 ರಂದು ವಿಚಾರಣೆಗೆ ವಿಷಯವನ್ನು ಪಟ್ಟಿ ಮಾಡಿದೆ.

ಇದನ್ನೂ ಓದಿ; 12ನೇ ತರಗತಿ ಉತ್ತೀರ್ಣರಾದ ಜಾತಿ ಹಿಂಸಾಚಾರ ಸಂತ್ರಸ್ತ, ಲೈಂಗಿಕ ಅಲ್ಪಸಂಖ್ಯಾತೆಯನ್ನು ಅಭಿನಂದಿಸಿದ ಸ್ಟಾಲಿನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂಸತ್ತು ಅಂಗೀಕರಿಸಿರುವ ಹೊಸ ಕ್ರಿಮಿನಲ್ ಕಾನೂನುಗಳ ವಿರುದ್ಧದ ಅರ್ಜಿ: ಸುಪ್ರೀಂ ಕೋರ್ಟಿನಲ್ಲಿ ನಾಳೆ ವಿಚಾರಣೆ

0
"ಹಲವು ದೋಷಗಳು ಮತ್ತು ವ್ಯತ್ಯಾಸಗಳಿವೆ" ಎಂದು, ಭಾರತ ದಂಡ ಸಂಹಿತೆಗಳನ್ನು (ಐಪಿಸಿ) ಕೂಲಂಕಷವಾಗಿ ಪರಿಶೀಲಿಸುವ ಮೂರು ಹೊಸ ಕಾನೂನುಗಳ ಜಾರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆಗೆ ನಿಗದಿಪಡಿಸಿದೆ. ನ್ಯಾಯಮೂರ್ತಿಗಳಾದ ಬೇಲಾ...