Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಕೆ ಕವಿತಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಡಿ

ದೆಹಲಿ ಅಬಕಾರಿ ನೀತಿ ಪ್ರಕರಣ: ಕೆ ಕವಿತಾ ಅವರನ್ನು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ ಇಡಿ

- Advertisement -
- Advertisement -

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನಿನ್ನೆ ಸಂಜೆ ಜಾರಿ ನಿರ್ದೇಶನಾಲಯದಿಂದ ಹೈದರಾಬಾದ್ ಮನೆಯಿಂದ ಬಂಧಿಸಲ್ಪಟ್ಟ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಇಂದು ರಾಷ್ಟ್ರ ರಾಜಧಾನಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆಕೆಯ ಬಂಧನವನ್ನು ಕಾನೂನುಬಾಹಿರವೆಂದು ಹೇಳಿರುವ ಬಿಆರ್‌ಎಸ್‌ ನಾಯಕ ಕೆಟಿಆರ್, ಇದರ ವಿರುದ್ಧ ಹೋರಾಟ ಮಾಡುವುದಾಗಿ ಪ್ರತಿಜ್ಞೆ ಮಾಡಿದರು.

ಬಂಧನದ ನಂತರ ಮಧ್ಯರಾತ್ರಿಯ ಸುಮಾರಿಗೆ ದೆಹಲಿಗೆ ಬಂದಿಳಿದ ಆಕೆಯನ್ನು ತನಿಖಾ ಸಂಸ್ಥೆಯ ಕಚೇರಿಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯಕೀಯ ಪರೀಕ್ಷೆಗಳನ್ನು ಮಾಡಲಾಯಿತು. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲು ಸಂಸ್ಥೆಯು ಮನವಿ ಮಾಡಿದೆ.

ಕವಿತಾ ಬಂಧನದ ಕುರಿತು ಪ್ರತಿಕ್ರಿಯಿಸಿದ ಅವರ ಸಹೋದರ ಮತ್ತು ತೆಲಂಗಾಣ ಮಾಜಿ ಸಚಿವ ಕೆಟಿ ರಾಮರಾವ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, “ಅಧಿಕಾರದ ದುರುಪಯೋಗ ಮತ್ತು ರಾಜಕೀಯ ಲಾಭಕ್ಕಾಗಿ ಸಾಂಸ್ಥಿಕ ದುರುಪಯೋಗವು ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರದಲ್ಲಿ ಹೆಚ್ಚು ಸಾಮಾನ್ಯವಾಗಿದೆ. ಪ್ರಕರಣವು ತೀರಾ ಸಬ್-ಜುಡಿಸ್ ಆಗಿರುವಾಗ ಮತ್ತು ಒಂದೆರಡು ದಿನಗಳಲ್ಲಿ ಮರುಪರಿಶೀಲನೆಗೆ ಮುಂದಾದಾಗ ಬಂಧಿಸುವ ವಿಪರೀತ ಧಾವಂತದ ಬಗ್ಗೆ ಮಾರ್ಚ್ 19ರಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಾಗುತ್ತದೆ. ಅದಕ್ಕಿಂತಲೂ ಭಯಾನಕ ಸಂಗತಿಯೆಂದರೆ ಇಡಿ ತನ್ನ ಸ್ವಂತ ಜವಾಬ್ದಾರಿಯನ್ನು ದುರ್ಬಲಗೊಳಿಸುವುದು. ಗೌರವಾನ್ವಿತ ಸುಪ್ರೀಂ ಕೋರ್ಟಿನಲ್ಲಿ ನ್ಯಾಯವು ಮೇಲುಗೈ ಸಾಧಿಸುತ್ತದೆ ಮತ್ತು ನಾವು ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ’ ಎಂದು ಹೇಳಿದ್ದಾರೆ.

ಹಣಕಾಸು ತನಿಖಾ ಸಂಸ್ಥೆಯು ಶುಕ್ರವಾರ ತೆಲಂಗಾಣದ ವಿಧಾನ ಪರಿಷತ್ ಸದಸ್ಯೆ ಕೆ ಕವಿತಾ (46) ಅವರನ್ನು ಹೈದರಾಬಾದ್‌ನ ಅವರ ಮೆನಯಲ್ಲಿ ಬಂಧಿಸಿತು. ಗಂಟೆಗಳ ಕಾಲ ದಾಳಿ ನಡೆಸಿ ಇದೀಗ ರದ್ದುಪಡಿಸಿದ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದೆ.

ನೂರಾರು ಬೆಂಬಲಿಗರು ಏಜೆನ್ಸಿ ಕ್ರಮವನ್ನು ಪ್ರತಿಭಟಿಸಿದ್ದರಿಂದ ಕವಿತಾ ಅವರನ್ನು ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನ ಮನೆಯಿಂದ ಸಂಜೆ ಬಂಧಿಸಲಾಯಿತು.

ಲೋಕಸಭೆ ಚುನಾವಣೆಗೆ ವಾರಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 100 ದಿನ ಪೂರೈಸಿದ ದಿನದಲ್ಲಿ ಈ ಬಂಧನ ನಡೆದಿದೆ. ಹೈದರಾಬಾದ್‌ನ ಉಪನಗರವಾದ ಮಲ್ಕಾಜ್‌ಗಿರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೃಹತ್ ರೋಡ್‌ಶೋ ನಡೆಸಿದರು.

ಸುಪ್ರೀಂ ಕೋರ್ಟ್ ಬುಧವಾರದವರೆಗೆ ಬಿಆರ್‌ಎಸ್ ನಾಯಕನಿಗೆ ವಿಚಾರಣೆಯಿಂದ ವಿನಾಯಿತಿ ನೀಡಿತ್ತು. ಶುಕ್ರವಾರ ಪ್ರಕರಣದಲ್ಲಿ ಏಜೆನ್ಸಿಯ ಸಮನ್ಸ್ ವಿರುದ್ಧ ಆಕೆಯ ಅರ್ಜಿಯನ್ನು ವಿಚಾರಣೆ ನಡೆಸಿತು; ಮುಂದಿನ ವಿಚಾರಣೆ ಮಂಗಳವಾರ ನಡೆಯಲಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ ಜಾಮೀನು ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...