Homeಮುಖಪುಟದೆಹಲಿ ಅಬಕಾರಿ ನೀತಿ ಪ್ರಕರಣ: ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಜಾಮೀನು

ದೆಹಲಿ ಅಬಕಾರಿ ನೀತಿ ಪ್ರಕರಣ: ಮಾಜಿ ಸಚಿವ ಸತ್ಯೇಂದ್ರ ಜೈನ್‌ಗೆ ಸುಪ್ರೀಂ ಜಾಮೀನು

- Advertisement -
- Advertisement -

ದೆಹಲಿಯ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ವೈದ್ಯಕೀಯ ಕಾರಣಗಳಿಗಾಗಿ ಶುಕ್ರವಾರ ಸುಪ್ರೀಂ ಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತು. ಅವರು ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದು ಸರ್ಕಾರಿ ಆಸ್ಪತ್ರೆಯ ಐಸಿಯುಗೆ ದಾಖಲಾದ ಒಂದು ದಿನದ ನಂತರ ಅವರಿಗೆ ಜಾಮೀನು ನೀಡಲಾಗಿದೆ.

ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ತಿಹಾರ್ ಜೈಲಿನಲ್ಲಿದ್ದರು.

ನ್ಯಾಯಮೂರ್ತಿಗಳಾದ ಜೆ.ಕೆ.ಮಹೇಶ್ವರಿ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ಪೀಠವು 58ರ ವರ್ಷದ ಜೈನ್ ಅವರನ್ನು ಅವರ ಆಯ್ಕೆಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲು ಅವಕಾಶ ಮಾಡಿಕೊಟ್ಟಿತು. ಜುಲೈ 10ರೊಳಗೆ ವೈದ್ಯಕೀಯ ದಾಖಲೆಗಳನ್ನು ಹಾಜರುಪಡಿಸುವಂತೆ ಸೂಚಿಸಿತು. ಜೈನ್ ಅವರ ಮಧ್ಯಂತರ ಜಾಮೀನು ಅವಧಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡದಂತೆ ಸೂಚಿಸಿತು.

ಜೈನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಮಾಜಿ ಸಚಿವರು 35 ಕೆಜಿ ತೂಕ ಕಳೆದುಕೊಂಡಿದ್ದು, ಬೆನ್ನುಮೂಳೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಹೇಳಿದರು.

ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು ಅವರು, ”ಜೈನ್ ಅವರನ್ನು ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಅಥವಾ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ವೈದ್ಯರ ಸಮಿತಿಯಿಂದ ಪರೀಕ್ಷಿಸಲು ಕೋರಿದರು. ವೈದ್ಯಕೀಯ ವರದಿಗಳು ಚಿಕಿತ್ಸೆಯನ್ನು ಸೂಚಿಸಿದರೆ, ತನಿಖಾ ಸಂಸ್ಥೆ ಅದನ್ನು ವಿರೋಧಿಸುವುದಿಲ್ಲ” ಎಂದು ಅವರು ಹೇಳಿದರು.

ಜೈನ್ ಅವರು ಈ ಹಿಂದೆಯೂ ಈ ಪ್ರಕರಣದಲ್ಲಿ ವೈದ್ಯಕೀಯ ಕಾರಣಗಳಿಗಾಗಿ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು, ಆದರೆ ಏಜೆನ್ಸಿಯು AIIMS ಅಥವಾ RML ಆಸ್ಪತ್ರೆಯ ವೈದ್ಯಕೀಯ ಮಂಡಳಿಯಿಂದ ಅವರ ಪರೀಕ್ಷೆಯನ್ನು ಕೋರಿದ್ದರಿಂದ ಅರ್ಜಿಗಳನ್ನು ಹಿಂತೆಗೆದುಕೊಳ್ಳಲಾಗಿತ್ತು.

ಇದನ್ನು ಓದಿ: ಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

“ಅವರು ದೆಹಲಿಯ ಆರೋಗ್ಯ ಮಂತ್ರಿ ಮತ್ತು ಜೈಲು ಸಚಿವರಾಗಿದ್ದರು. ಅವರ ಅಡಿಯಲ್ಲಿಲ್ಲದ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಬೇಕಾಗಿದೆ” ಎಂದು ರಾಜು ಹೇಳಿದರು.

ಜೈನ್ ಅವರನ್ನು ಸಧ್ಯ ವೈದ್ಯಕೀಯ ಜಾಮೀನು ನೀಡುತ್ತಿದ್ದು, ಮುಂದಿನ ವಿಚಾರಣೆಯ ದಿನಾಂಕದಂದು AIIMS ಅಥವಾ RML ಆಸ್ಪತ್ರೆಯ ವೈದ್ಯರಿಂದ ಅವರ ಪರೀಕ್ಷೆಯನ್ನು ಪರಿಶೀಲಿಸುವುದಾಗಿ ಪೀಠವು ಹೇಳಿದೆ.

ಗುರುವಾರ ಜೈನ್ ಅವರನ್ನು ಮೊದಲು ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ನಂತರ ಉಸಿರಾಟದ ತೊಂದರೆಯಿಂದಾಗಿ ಅವರನ್ನು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅವರು “ತೀವ್ರವಾಗಿ ಅಸ್ವಸ್ಥರಾಗಿದ್ದರು” ಎಂದು ಎಎಪಿ ಮುಖಂಡರು ತಿಳಿಸಿದ್ದಾರೆ.

ಎಲ್‌ಎನ್‌ಜೆಪಿ ಆಸ್ಪತ್ರೆಯು ದೆಹಲಿ ಸರ್ಕಾರದ ಅಡಿಯಲ್ಲಿ ಅತಿದೊಡ್ಡ ಆಸ್ಪತ್ರೆಯಾಗಿದೆ.

ತಿಹಾರ್ ಜೈಲಿನ ಸ್ನಾನಗೃಹದಲ್ಲಿ ಕುಸಿದು ಬಿದ್ದ ಮಾಜಿ ಸಚಿವರನ್ನು ಒಂದು ವಾರದಲ್ಲಿ ಎರಡನೇ ಬಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಹಿಂದೆಯೂ ಜೈನ್ ಬಾತ್ ರೂಂನಲ್ಲಿ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯವಾಗಿತ್ತು ಎಂದು ಎಎಪಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...