Homeಮುಖಪುಟಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

ಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

- Advertisement -
- Advertisement -

ದೆಹಲಿಯಲ್ಲಿ ಈಗ ರದ್ದಾದ ಮದ್ಯ ನೀತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಶುಕ್ರವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಇದೇ ಪ್ರಕರಣದಲ್ಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರು, ”ಕೇಜ್ರಿವಾಲ್ ಅವರು ಏಪ್ರಿಲ್ 16 ರಂದು ಸಿಬಿಐ ಮುಂದೆ ಹಾಜರಾಗಲಿದ್ದಾರೆ. ಈ ದಬ್ಬಾಳಿಕೆಯು ಖಂಡಿತವಾಗಿಯೂ ಕೊನೆಗೊಳ್ಳುತ್ತದೆ” ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೈಗಾರಿಕೋದ್ಯಮಿ ಗೌತಮ್ ಅದಾನಿ ನಡುವಿನ ಸಂಬಂಧದ ಬಗ್ಗೆ  ಕೇಜ್ರಿವಾಲ್ ಅವರು ದೆಹಲಿ ಅಸೆಂಬ್ಲಿಯಲ್ಲಿ ಮಾತನಾಡಿದ್ದರಿಂದ ಸಿಬಿಐ ಅವರನ್ನು ಕರೆಸಿದೆ ಎಂದು ಸಿಂಗ್ ಆರೋಪಿಸಿದ್ದಾರೆ.

”ನೀವು [ಮೋದಿ] ಮತ್ತು ನಿಮ್ಮ ಸರ್ಕಾರವು ಅಡಿಯಿಂದ ಮುಡಿವರೆಗೂ ಭ್ರಷ್ಟಾಚಾರದಲ್ಲಿದೆ. ಸಿಬಿಐ ಸಮನ್ಸ್‌ನಿಂದ ಅರವಿಂದ್ ಕೇಜ್ರಿವಾಲ್ ಅವರ ಹೋರಾಟ ನಿಲ್ಲುವುದಿಲ್ಲ” ಎಂದು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಆರೋಪಿಸಿದ್ದಾರೆ.

ಇದನ್ನೂ ಓದಿ: ”ಪ್ರಧಾನಿ ಪದವಿ ನಕಲಿಯೇ?”: ಮೋದಿ ಶೈಕ್ಷಣಿಕ ದಾಖಲೆ ಕುರಿತು ಮತ್ತೆ ಪ್ರಶ್ನಿಸಿದ ಕೇಜ್ರಿವಾಲ್

ಸಿಬಿಐ ಪ್ರಕರಣವು ನವೆಂಬರ್ 2021ರಲ್ಲಿ ಜಾರಿಗೆ ಬಂದ ದೆಹಲಿ ಸರ್ಕಾರದ ಅಬಕಾರಿ ನೀತಿಗೆ ಸಂಬಂಧಿಸಿದೆ. ಅದರ ಅಡಿಯಲ್ಲಿ, 849 ಮದ್ಯದ ಅಂಗಡಿಗಳ ಪರವಾನಗಿಗಳನ್ನು ಖಾಸಗಿ ಸಂಸ್ಥೆಗಳಿಗೆ ಮುಕ್ತ ಬಿಡ್ಡಿಂಗ್ ಮೂಲಕ ನೀಡಲಾಯಿತು. ಈ ಹಿಂದೆ ನಾಲ್ಕು ಸರ್ಕಾರಿ ನಿಗಮಗಳು 475 ಮದ್ಯದಂಗಡಿಗಳನ್ನು ನಡೆಸುತ್ತಿದ್ದು, ಉಳಿದ 389 ಅಂಗಡಿಗಳು ಖಾಸಗಿಯಾಗಿ ನಡೆಯುತ್ತಿದ್ದವು.

ಇದರಲ್ಲಿ ಅಕ್ರಮ ನಡೆಸಿದೆ ಎಂಬ ಆರೋಪದ ಮೇಲೆ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಕೇಂದ್ರ ತನಿಖಾ ದಳ ಬಂಧಿಸಿತ್ತು.

ಸಿಸೋಡಿಯಾ ಅವರು ಅಕ್ರಮ ಹಣ ವರ್ಗಾವಣೆಯ ಪ್ರತ್ಯೇಕ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರೊಂದಿಗೆ ದೆಹಲಿ ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದರು.

ಫೆಬ್ರವರಿ 26ರಂದು, ಕೇಜ್ರಿವಾಲ್ ಅವರು ಸಿಸೋಡಿಯಾ ನಿರಪರಾಧಿ ಮತ್ತು ಅವರ ವಿರುದ್ಧ ಸಿಬಿಐ ಕ್ರಮವು ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರದ ”ಕೊಳಕು ರಾಜಕೀಯ”ದ ಭಾಗವಾಗಿದೆ ಎಂದು ಹೇಳಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...