Homeಮುಖಪುಟದೆಹಲಿ ಅಬಕಾರಿ ನೀತಿ: ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.5 ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌

ದೆಹಲಿ ಅಬಕಾರಿ ನೀತಿ: ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆಯನ್ನು ಸೆ.5 ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್‌

- Advertisement -
- Advertisement -

ಆಪಾದಿತ ಅಬಕಾರಿ ನೀತಿ ಹಗರಣದಲ್ಲಿ ಸಿಬಿಐನಿಂದ ಬಂಧನವನ್ನು ಪ್ರಶ್ನಿಸಿ ಮತ್ತು ಜಾಮೀನು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಸಿಬಿಐಗೆ ಈ ಪ್ರಕರಣದಲ್ಲಿ ತನ್ನ ಪ್ರತಿವಾದ ಅಫಿಡವಿಟ್ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತು ಮತ್ತು ಕೇಜ್ರಿವಾಲ್‌ಗೆ ಮರು ಅರ್ಜಿ ಸಲ್ಲಿಸಲು ಎರಡು ದಿನಗಳ ಕಾಲಾವಕಾಶ ನೀಡಿತು.

ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ಸಿಬಿಐ ಕೇವಲ ಒಂದು ಅರ್ಜಿಯಲ್ಲಿ ಪ್ರತಿ ಅಫಿಡವಿಟ್ ಸಲ್ಲಿಸಿದೆ ಮತ್ತು ಗುರುವಾರ ರಾತ್ರಿ 8 ಗಂಟೆಗೆ ಅದನ್ನು ಅವರಿಗೆ ಸಲ್ಲಿಸಲಾಯಿತು ಎಂದರು.

ಒಂದು ವಾರದಲ್ಲಿ ಇನ್ನೊಂದು ಅರ್ಜಿಯಲ್ಲಿ ಕೌಂಟರ್‌ ಸಲ್ಲಿಸುತ್ತೇವೆ ಎಂದು ಎಎಸ್‌ಜಿ ಎಸ್‌ವಿ ರಾಜು ತಿಳಿಸಿದ್ದಾರೆ. ನಂತರ, ಪೀಠವು ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿತು.

ಆಗಸ್ಟ್ 14 ರಂದು, ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತು; ಅವರ ಬಂಧನವನ್ನು ಪ್ರಶ್ನಿಸಿ ಅವರ ಮನವಿಯ ಕುರಿತು ತನಿಖಾ ಸಂಸ್ಥೆಯಿಂದ ಪ್ರತಿಕ್ರಿಯೆಯನ್ನು ಕೇಳಿತು. ಜೂನ್ 26 ರಂದು ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿತ್ತು.

ಮಾರ್ಚ್ 21 ರಂದು ಇಡಿಯಿಂದ ಬಂಧಿಸಲ್ಪಟ್ಟಿದ್ದ ಮುಖ್ಯಮಂತ್ರಿಗೆ ಜೂನ್ 20 ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಜಾಮೀನು ನೀಡಿತ್ತು. ಆದರೆ, ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜುಲೈ 12 ರಂದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತು.

2022 ರಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಹಗರಣದ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ ನಂತರ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು. ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ನೀಡಲಾಗಿದೆ. ಆದರೆ, ಎಎಪಿ ಎರಡೂ ತನಿಖಾ ಸಂಸ್ಥೆಗಳ ಆರೋಪಗಳನ್ನು ನಿರಾಕರಿಸಿದೆ.

ಇದನ್ನೂ ಓದಿ; ಯುಪಿ: ಚರ-ಸ್ಥಿರಾಸ್ತಿಗಳ ಘೋಷಣೆಗೆ ಆದೇಶ; ಸಂಬಳ ಕಳೆದುಕೊಳ್ಳುವ ಆತಂಕದಲ್ಲಿ ಸರ್ಕಾರಿ ನೌಕರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...