Homeಚಳವಳಿದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

ದೆಹಲಿ ಹೋರಾಟದಲ್ಲಿ ರೈತರ ಜೊತೆ ಬುದ್ದ, ಅಂಬೇಡ್ಕರ್‌, ಭಗತ್‌ಸಿಂಗ್!

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಜೊತೆಗೆ ನಿಮ್ಮನ್ನು ಮತ್ತೆ ಮತ್ತೆ ಆಕರ್ಷಿಸುವುದು ಪೋಸ್ಟರ್‌ಗಳಾಗಿದೆ. ಪ್ರತಿಭಟನಾ ಸ್ಥಳದ ಉದ್ದಕ್ಕೂ ರೈತರು ತಂಗಿರುವ ಟೆಂಟ್‌, ಟ್ರ್ಯಾಲಿಗಳ ಮೇಲೆ ಅಂಟಿಸಲಾಗಿರುವ ಈ ಪೋಸ್ಟರ್‌ಗಳು ಕ್ಷಣ ಮಾತ್ರದಲ್ಲಿ ಗಮನ ಸೆಳೆಯುತ್ತವೆ. ಇಲ್ಲಿನ ಪ್ರತಿ ಪೋಸ್ಟರ್‌ಗಳೂ ಪ್ರತಿಭಟನೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ.

ದೇಶದ ಐತಿಹಾಸಿಕ ಪ್ರತಿಭಟನೆಯಾಗಿರುವ ರೈತ ಹೋರಾಟ, ಬರೀ ರೈತರಿಗಷ್ಟೇ ಸೀಮಿತವಾಗಿಲ್ಲ ಎಂಬುದು ಪ್ರತಿಭಟನಾ ಸ್ಥಳದಲ್ಲಿ ಇರುವ ಪೋಸ್ಟರ್‍ಸ್‌ಗಳು ಹೇಳುತ್ತಿವೆ. ಸ್ವತಃ ಸ್ವಾತಂತ್ಯ್ರ ಹೋರಾಟಗಾರರೇ ಪ್ರತಿಭಟನೆಯಲ್ಲಿದ್ದಾರೆ ಎಂಬಂತಹ ಅನುಭವವ ಈ ಪೋಸ್ಟರ್‌ಗಳು ನಮಗೆ ನೀಡುತ್ತದೆ. ಯುವಜನತೆ ತಾವು ತಂಗಿರುವ ಡೇರೆಗಳ ಬಳಿ ಭಗತ್ ಸಿಂಗ್ ಚಿತ್ರಗಳನ್ನು, ಘೋಷಣೆಗಳನ್ನು ಹಾಕಿಕೊಂಡಿದ್ದಾರೆ. ಭಗತ್ ಸಿಂಗ್ ಮಾತುಗಳನ್ನು ತಮ್ಮದೇ ಧಾಟಿಯಲ್ಲಿ ರೈತ ಹೋರಾಟಕ್ಕೆ ಹೋಲಿಸಿ, ಭಿತ್ತಿಪತ್ರಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರಲ್ಲಿ ಹುಮ್ಮಸ್ಸು ತುಂಬುವ ಕೆಲಸ ಮಾಡುತ್ತಿದ್ದಾರೆ. ರೈತರು ಭಯೋತ್ಪಾಕದಕರಲ್ಲ, ರೈತರಿಲ್ಲದಿದ್ದರೇ ಊಟವಿಲ್ಲ ಎಂಬಂತಹ ಭಿತ್ತಿಪತ್ರಗಳನ್ನು ಇಲ್ಲಿ ಕಾಣಸಿಗುತ್ತದೆ.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ನಾವು ಯುದ್ಧದಲ್ಲಿ ಗುಂಡು ಬೀಳುವುದೆಂದು ಹಿಂದೆ ಸರಿಯುವ ರಕ್ತದವರಲ್ಲ. ನಮ್ಮಲ್ಲಿ ಹರಿಯುತ್ತಿರುವ ರಕ್ತ ಸ್ವಾಭಿಮಾನ ಮತ್ತು ಧೈರ್ಯದ್ದು. ಅನ್ಯಾಯವನ್ನು ಎದುರಿಸಲು ಯಾವ ಕ್ಷಣದಲ್ಲೂ, ಎಲ್ಲಿಯೂ ನಾವು ಸಿದ್ಧ. ಅನ್ಯಾಯ ಯಾರು ಮಾಡಿದರೂ ಅನ್ಯಾಯವೇ, ನ್ಯಾಯ ಸಿಗುವವರೆಗೂ ನಾವು ಹೋರಾಟ ನಡೆಸುತ್ತೇವೆ ಎಂದು ಪೋಸ್ಟರ್‌ ಹಿಡಿದ ಪ್ರತಿಭಟನಾನಿರತ ಯುವಕ ತಿಳಿಸುತ್ತಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿರುವ ಹಲವು ರೈತ ಸಂಘಟನೆಗಳು, ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿತ್ರಗಳನ್ನು ಪ್ರದರ್ಶಿಸುತ್ತಾ ತಮಗೆ ಸಂವಿಧಾನ ನೀಡಿರುವ ಹಕ್ಕಿನ ಮೂಲಕ ಹೋರಾಟ ನಡೆಸುತ್ತಿದ್ದೇವೆ ಎಂದು ಘೋಷಣೆ ಹಾಕುತ್ತಿದ್ದಾರೆ. ತಮ್ಮ ಬ್ಯಾನರ್‌ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಮತ್ತು ಸಂವಿಧಾನದ ಪೀಠಿಕೆಗಳ ಚಿತ್ರಗಳನ್ನು ಸೇರಿಸಿರುವುದು ಗಮನಾರ್ಹವಾಗಿದೆ.

ಇದನ್ನೂ ಓದಿ: ರೈತ ಹೋರಾಟ ಅಪ್‌ಡೇಟ್ಸ್: 7ನೇ ಸುತ್ತಿನ ಮಾತುಕತೆ ವಿಫಲ – ಹೋರಾಟದ ಮುಂದೇನು ದಾರಿ?

 

ರೈತರು ದೆಹಲಿ ಚಲೋ ಹೋರಾಟ ಆರಂಭಿಸಿದ ದಿನದಿಂದಲೂ ಹೇಳುತ್ತಿರುವುದು ನಮ್ಮದು ಶಾಂತಿಯುತ ಪ್ರತಿಭಟನೆ ಎಂದು. ಇದಕ್ಕೆ ಪೂರಕವೆಂಬಂತೆ ಶಾಂತಿದೂತ ಬುದ್ಧನ ಚಿತ್ರಗಳು ಪ್ರತಿಭಟನಾ ಸ್ಥಳದಲ್ಲಿ ಕಾಣಸಿಗುತ್ತವೆ. ದೆಹಲಿಯ ಪ್ರಮುಖ ಗಡಿಗಳಾದ ಸಿಂಘು, ಟಕ್ರಿ ಮತ್ತು ಗಾಜಿಪುರ್‌ಗಳಲ್ಲೂ ಇದೆ ರೀತಿಯ ಪೋಸ್ಟರ್‌ಗಳಿವೆ.

ಪ್ರತಿಭಟನಾ ನಿರತ ರೈತ ಸಂಘಟನೆಗಳು ತಮ್ಮ ಸಂಘಟನೆಯ ಹೆಸರುಗಳ ಜೊತೆಗೆ ಬುದ್ಧ, ಅಂಬೇಡ್ಕರ್, ಏಸುಕ್ರಿಸ್ತ ಮತ್ತು ಭಗತ್ ಸಿಂಗ್, ಬುಡಕಟ್ಟು ನಾಯಕ ಬಿರ್ಸಾ ಮುಂಡಾ ನಾಯಕರ ಚಿತ್ರಗಳ ಪೋಸ್ಟರ್‌ಗಳನ್ನು ಹಿಡಿದು ನಿಂತಿದ್ದಾರೆ. ಇದಲ್ಲದೇ ಪಂಜಾಬ್ ಮತ್ತು ಹರಿಯಾಣಗಳಲ್ಲಿ ಈ ಹಿಂದೆ ಹಲವು ಕೃಷಿ ಕಾನೂನುಗಳನ್ನು ವಿರೋಧಿಸಿ, ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಹುತಾತ್ಮರಾಗಿರುವ ರೈತ ನಾಯಕರ ಚಿತ್ರಗಳು ಇವರ ಪೋಸ್ಟರ್‌‌ಗಳಲ್ಲಿದೆ. ಇವರುಗಳೆ ನಮ್ಮ ಪ್ರತಿಭಟನೆಗೆ ಸ್ಫೂರ್ತಿ ಎನ್ನುತ್ತಾರೆ ಇಲ್ಲಿನ ಪ್ರತಿಭಟನಾಕಾರರು.

ಇದನ್ನೂ ಓದಿ: ರೈತ ಹೋರಾಟ – ಒಕ್ಕೂಟ ಸರ್ಕಾರಕ್ಕೆ ಪ್ರಜಾಪ್ರಭುತ್ವದ ಪಾಠ ಮಾಡಿದ ಸೋನಿಯ ಗಾಂಧಿ

ಇನ್ನೂ ವಿಶೇಷವೇನೆಂದರೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಘೋಷಣೆಗಳಿರುವ ಹಲವು ಪೋಸ್ಟರ್‌ಗಳನ್ನು ಇಲ್ಲಿ ಕಾಣಬಹುದಾಗಿದೆ.

“ನಿಮ್ಮ ಬೇಜವಾಬ್ದಾರಿ ಕಾರಣದಿಂದ ದೇಶದ ರೈತರು ಬೀದಿಗೆ ಬಿದ್ದಿದ್ದಾರೆ. ಮೊದಲು ನಿಮ್ಮ ಕಪ್ಪು ಕಾನೂನುಗಳನ್ನು ವಾಪಸ್ ಪಡೆಯಿರಿ”, “ದೇಶದ ರೈತರ ಆರ್ಥಿಕ ಸ್ಥಿತಿ ಕೆಳಗಿಳಿಯುತ್ತಿದೆ. ಆದರೆ ಅದಾನಿ, ಅಂಬಾನಿಯವರ ಆರ್ಥಿಕ ಪರಿಸ್ಥಿತಿ ಎತ್ತರಕ್ಕೆ ಏರುತ್ತಿದ್ದೆ, ಇದಕ್ಕೆಲ್ಲಾ ಕಾರಣ ಮೋದಿ ಸರ್ಕಾರ” ಎಂಬ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳಿರುವ ಭಿತ್ತಿಪತ್ರಗಳು ಸಿಂಘು ಮತ್ತು ಟಿಕ್ರಿ ಗಡಿಗಳಲ್ಲಿ ಸಾಮಾನ್ಯವಾಗಿ ಕಾಣಿಸುತ್ತಿವೆ.

ಇದನ್ನೂ ಓದಿ: ಪಂಜಾಬ್: ಬಿಜೆಪಿ ಮುಖಂಡನ ಮನೆಮುಂದೆ ಸಗಣಿ ಸುರಿದ ರೈತ ಹೋರಾಟಗಾರರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...