Homeಮುಖಪುಟದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

ದೆಹಲಿ: ‘ಹಿಂದೂ ರಾಷ್ಟ್ರ ಪಂಚಾಯತ್‌’ ಆಯೋಜಕರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ರಾಷ್ಟ್ರ ರಾಜಧಾನಿಯ ಈಶಾನ್ಯ ಜಿಲ್ಲೆಯಲ್ಲಿ “ಹಿಂದೂ ರಾಷ್ಟ್ರ ಪಂಚಾಯತ್‌” ನಡೆಸಿದ ಸಂಘಟಕರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾವುದೇ ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸಲಾಗಿದೆ ಎಂದು ಎಫ್‌ಐಆರ್‌ ದಾಖಲಿಸಲಾಗಿದ್ದರೂ, ಕಾರ್ಯಕ್ರಮದಲ್ಲಿ ಮಾಡಲಾಗಿರುವ ದ್ವೇಷ ಭಾಷಣದ ಕುರಿತು ಯಾವುದೇ ಕ್ರಮ ಜರುಗಿಸಿಲ್ಲ.

ಹಿಂದುತ್ವ ಸಂಘಟನೆಯಾದ ಯುನೈಟೆಡ್ ಹಿಂದೂ ಫ್ರಂಟ್‌ನ ಸದಸ್ಯರು “ಹಿಂದೂ ರಾಷ್ಟ್ರ” ಅಥವಾ “ಹಿಂದೂಗಳ ದೇಶ”ವನ್ನು ರಚಿಸುವಂತೆ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಒತ್ತಾಯಿಸಿದರು.

“ಲವ್ ಜಿಹಾದ್” ಅನ್ನು ಮುಂದುವರಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. (ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಯುವಕರು ಪ್ರೇಮ ಪ್ರಕರಣದಲ್ಲಿ ಹಿಂದೂ ಯುವತಿಯರನ್ನು ಬೀಳಿಸುತ್ತಾರೆಂಬ ಕಲ್ಪಿತ ಪಿತೂರಿ ಸಿದ್ಧಾಂತವೇ ‘ಲವ್‌ ಜಿಹಾದ್‌’ ಆಗಿದೆ.)

‘ಹಿಂದೂ ರಾಷ್ಟ್ರ ಪಂಚಾಯತ್‌’ ನಡೆದ ಪ್ರದೇಶವು ಕೋಮುಸೂಕ್ಷ್ಮವಾಗಿದೆ. 2020ರಲ್ಲಿ ಕೋಮು ಗಲಭೆಗಳು ಭುಗಿಲೆದ್ದ ಈ ಪ್ರದೇಶದಲ್ಲಿ 53 ಜನರು ಸಾವನ್ನಪ್ಪಿದ್ದರು ಮತ್ತು 700 ಕ್ಕೂ ಹೆಚ್ಚು ಜನರು ಗಾಯಗೊಂಡರು. ಸತ್ತವರಲ್ಲಿ ಹೆಚ್ಚಿನವರು ಮುಸ್ಲಿಮರಾಗಿದ್ದಾರೆ.

ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಹಿಂದೂ ಯುನೈಟೆಡ್ ಫ್ರಂಟ್ ಮುಖ್ಯಸ್ಥ ಜೈ ಭಗವಾನ್ ಗೋಯಲ್ ಅವರು ಕಾರ್ಯಕ್ರಮದ ಸಂಘಟಕರಲ್ಲಿ ಒಬ್ಬರು ಎಂದು ಪಿಟಿಐ ವರದಿ ಮಾಡಿದೆ.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಮತ್ತು ಕೇಂದ್ರದ ಮಾಜಿ ಸಚಿವ ಸತ್ಯನಾರಾಯಣ್ ಜಟಿಯಾ, ಉತ್ತರ ದೆಹಲಿಯ ಮಾಜಿ ಮೇಯರ್ ಅವತಾರ್ ಸಿಂಗ್ ಇತರರು ಭಾಗವಹಿಸಿದ್ದರು.

“ಯಾವುದೇ ಹಿಂದೂಗಳು ತಮ್ಮ ಮನೆ ಅಥವಾ ಅಂಗಡಿಗಳನ್ನು ಇತರ ಧರ್ಮದವರಿಗೆ ಮಾರಾಟ ಮಾಡಬಾರದು ಅಥವಾ ಬಾಡಿಗೆಗೆ ನೀಡಬಾರದು” ಎಂದು ಹಿಂದೂ ರಾಷ್ಟ್ರ ಪಂಚಾಯತ್‌ನಲ್ಲಿ ಗೋಯಲ್ ಅವರು ಪ್ರೇಕ್ಷಕರನ್ನು ಪ್ರಚೋದಿಸಿದರು ಎಂದು ಪಿಟಿಐ ವರದಿ ಮಾಡಿದೆ.

“ನಾವು ಮೊದಲು ಈಶಾನ್ಯ ದೆಹಲಿಯನ್ನು ಹಿಂದೂ ರಾಷ್ಟ್ರ ಜಿಲ್ಲೆಯನ್ನಾಗಿ ಮಾಡುತ್ತೇವೆ ಮತ್ತು ನಂತರ ಇಡೀ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುತ್ತೇವೆ” ಎಂದು ಗೋಯಲ್ ಹೇಳಿದರು ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.“‘ಹಿಂದೂಗಳನ್ನು ರಕ್ಷಿಸಲು ನಾವು ಪಂಚಾಯತ್ ಮತ್ತು ವಿಧಾನಸಭಾ ಮಟ್ಟದಲ್ಲಿ ಘಟಕಗಳನ್ನು ರಚಿಸುತ್ತಿದ್ದೇವೆ” ಎಂದಿದ್ದಾರೆ.

ಬಿಜೆಪಿಯ ಸೈದ್ಧಾಂತಿಕ ಅಂಗವಾದ ರಾಷ್ಟ್ರೀಯ ಸ್ವಯಂಸೇವಕ ಸಂಘವು 2025ರಲ್ಲಿ ತನ್ನ ಶತಮಾನೋತ್ಸವವನ್ನು ಆಚರಿಸುವ ಮೊದಲು, ಭಾರತ ದೇಶವನ್ನು ಹಿಂದೂ ರಾಷ್ಟ್ರ ಮಾಡುವ ಕನಸನ್ನು ಸಾಧಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: ಗೋರಕ್ಷಣೆ ಹೆಸರಿನಲ್ಲಿ ಹಾದಿಬೀದಿಯಲ್ಲಿ ರಕ್ತ ಹರಿಸುವ ದಂಧೆಕೋರರು: ಕೊಲ್ಲುವ ಹಂತಕ್ಕೆ ಬೆಳೆದು ನಿಂತದ್ದು ಹೇಗೆ?

ಗೋಯಲ್‌ ಅವರು, 2020 ರ ಗಲಭೆಗಳನ್ನು ಉಲ್ಲೇಖಿಸಿದ್ದಾರೆ. “ಈ ಪ್ರದೇಶವನ್ನು ಮಿನಿ ಪಾಕಿಸ್ತಾನವಾಗಿ ಮಾರ್ಪಡಿಸುವ ಯೋಜನೆಗಳು ನಡೆಯುತ್ತಿವೆ” ಎಂದು ಆರೋಪಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ದೆಹಲಿ ಪೊಲೀಸರು ಸೋಮವಾರ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಆದರೆ, ದ್ವೇಷಪೂರಿತ ಭಾಷಣ ಮಾಡಿರುವ ಬಿಜೆಪಿ ನಾಯಕರ ವಿರುದ್ಧ ಪೊಲೀಸರು ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.

“ಇದು ತನಿಖೆಯ ಭಾಗವಾಗಿದೆ. ಸದ್ಯಕ್ಕೆ, ನಾವು ನಿಯಮಾವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಘಟಕರ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ” ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿಯವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....