Homeಮುಖಪುಟದೆಹಲಿ| ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ನಾಲ್ವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ| ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ನಾಲ್ವರು ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

- Advertisement -
- Advertisement -

ಈಶಾನ್ಯ ದೆಹಲಿಯ ಮುಸ್ತಫಾಬಾದ್‌ನ ಶಕ್ತಿ ವಿಹಾರ್ ಪ್ರದೇಶದಲ್ಲಿ ಶನಿವಾರ (ಏ.19) ಬೆಳಗಿನ ಜಾವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ನಾಲ್ವರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಅವರ ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.

ಕಟ್ಟಡ ಕುಸಿದಾಗ ಸುಮಾರು 22 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪೊಲೀಸರು ಸ್ಥಳಕ್ಕೆ ತಲುಪಿದ ನಂತರ ತಿಳಿಸಿದ್ದಾಗಿ ವರದಿಯಾಗಿದೆ.

ಇಲ್ಲಿಯವರೆಗೆ 14 ಜನರನ್ನು ರಕ್ಷಿಸಿ ಸ್ಥಳೀಯ ಜಿಟಿಬಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಟ್ಟಡ ಕುಸಿತದ ಬಗ್ಗೆ ದಯಾಳ್‌ಪುರ ಪೊಲೀಸ್ ಠಾಣೆಗೆ ಬೆಳಗಿನ ಜಾವ 3.02 ರ ಸುಮಾರಿಗೆ ಮಾಹಿತಿ ಬಂದಿದೆ. ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌), ಅಗ್ನಿಶಾಮಕ ದಳ ಮತ್ತು  ಪೊಲೀಸರ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ವರದಿಗಳು ಹೇಳಿವೆ.

ಜೈ ಶ್ರೀರಾಮ್ ಕೂಗಲು ನಿರಾಕರಣೆ: 13 ವರ್ಷದ ಮುಸ್ಲಿಂ ಬಾಲಕನಿಗೆ ಚಾಕು ಇರಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...